ಮಾದಕ ದ್ರವ್ಯ, ಮಾನವ ಸಾಗಾಣಿಕೆ ಬಗ್ಗೆ ವಿದ್ಯಾರ್ಥಿಗಳು ಎಚ್ಚರಿಕೆಯಿಂದಿರಿ

KannadaprabhaNewsNetwork |  
Published : Jun 19, 2025, 11:50 PM IST
19ಸಿಎಚ್‌ಎನ್‌54ಹನೂರು ತಾಲೂಕಿನ ರಾಮಾಪುರ ಜೆಎಸ್ಎಸ್ ಕಾಲೇಜು ಹಾಗು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಮಾನವ ಕಳ್ಳ ಸಾಗಣೆ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮದಲ್ಲಿ ಇನ್ಸ್‌ಪೆಕ್ಟರ್ ಚಿಕ್ಕರಾಜ್ ಶೆಟ್ಟಿ ಮಾತನಾಡಿದರು. | Kannada Prabha

ಸಾರಾಂಶ

ಹನೂರು ತಾಲೂಕಿನ ರಾಮಾಪುರ ಜೆಎಸ್ಎಸ್ ಕಾಲೇಜು ಹಾಗು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಮಾನವ ಕಳ್ಳ ಸಾಗಣೆ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮದಲ್ಲಿ ಇನ್ಸ್‌ಪೆಕ್ಟರ್ ಚಿಕ್ಕರಾಜ್ ಶೆಟ್ಟಿ ಮಾತನಾಡಿದರು.

ಹನೂರು: ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳು ಜಾಗೃತರಾಗಿ ಇರಬೇಕು ಮತ್ತು ಅಕ್ರಮ ಮಾನವ ಸಾಗಾಣಿಕೆ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿ ಎಚ್ಚರಿಕೆಯಿಂದ ಇರಬೇಕು ಎಂದು ಇನ್ಸ್‌ಪೆಕ್ಟರ್ ಚಿಕ್ಕರಾಜ್ ಶೆಟ್ಟಿ ಸಲಹೆ ನೀಡಿದರು.

ತಾಲೂಕಿನ ರಾಮಪುರ ಪೊಲೀಸ್ ಠಾಣಾ ಸರಹದ್ದಿನ ಜೆಎಸ್ಎಸ್ ಪ್ರೌಢಶಾಲಾ ಮತ್ತು ಕಾಲೇಜಿನ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ, ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಮಾಹಿತಿ ಮತ್ತು ಅದರ ಅರಿವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಮಾದಕ ದ್ರವ್ಯ ಸೇವನೆಯ ದುಶ್ಚಟದಿಂದ ಆಗುತ್ತಿರುವ ಪರಿಣಾಮಗಳ ಬಗ್ಗೆ ಜಾಗೃತರಾಗಿ ಇರಬೇಕು. ಜೊತೆಗೆ ಮಾನವ ಕಳ್ಳ ಸಾಗಾಣೆ ಬಗ್ಗೆ ಸಹ ಜಾಗೃತರಾಗಿ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು. ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಹ ಶಾಲಾ ಹಂತದಿಂದಲೇ ಪ್ರತಿಯೊಂದೂ ವಿದ್ಯಾರ್ಥಿಯು ಇದರ ಬಗ್ಗೆ ಇತರರಿಗೂ ತಿಳಿಸಿಕೊಡುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ಕಾರ್ಯಕ್ರಮ ನಡೆಸಿಕೊಟ್ಟರು.

ಮಾದಕ ದ್ರವ್ಯ ವಸ್ತುಗಳ ಬಗ್ಗೆ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿ ಉತ್ತಮವಾಗಿ ಮಾಹಿತಿ ನೀಡಿದ ವಿದ್ಯಾರ್ಥಿಗಳಿಗೆ ಸಹ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕಾನೂನು ವ್ಯವಸ್ಥೆಯ ವಿಭಾಗದ ಸಬ್ ಇನ್ಸ್‌ಪೆಕ್ಟರ್ ಈಶ್ವರ್ ಹಾಗೂ ಅಪರಾಧ ವಿಭಾಗದ ಸಬ್ ಇನ್ಸ್‌ಪೆಕ್ಟರ್ ಲೋಕೇಶ್ ಮತ್ತು ಶಾಲಾ ಕಾಲೇಜಿನ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌