ಮಾದಕ ವಸ್ತುಗಳ ದಾಸರಾಗುತ್ತಿರುವ ವಿದ್ಯಾರ್ಥಿಗಳು: ಎಸ್ಐ ಮಂಜುನಾಥ್ ಆತಂಕ

KannadaprabhaNewsNetwork |  
Published : Jun 29, 2024, 12:34 AM IST
ಸಿಕೆಬಿ-3 ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಮಾತನಾಡಿದರು. | Kannada Prabha

ಸಾರಾಂಶ

ಮಾದಕ ವಸ್ತುಗಳಿಂದ ಪ್ರತಿಯೊಬ್ಬ ಯುವಕ- ಯುವತಿಯರು ದೂರವಿದ್ದು ಜೀವನ ಉತ್ತಮಪಡಿಸಿಕೊಳ್ಳಬೇಕು. ಮಾನವನಿಗೆ ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಬೇರಾವುದೂ ಇಲ್ಲ. ಯುವಜನರು ತಂಬಾಕು ಸೇರಿ ಯಾವುದೇ ಮಾದಕ ವಸ್ತುಗಳನ್ನು ಉಪಯೋಗಿಸಿ ದುಶ್ಚಟಗಳಿಗೆ ಬಲಿಯಾಗದೇ, ಆರೋಗ್ಯದ ಕಡೆಗೆ ಗಮನ ಹರಿಸಬೇಕು.

ಚಿಕ್ಕಬಳ್ಳಾಪುರ: ಇತ್ತೀಚೆಗೆ ಶಾಲೆ-ಕಾಲೇಜಿನ ವಿದ್ಯಾರ್ಥಿಗಳು ಮಾದಕ ವಸ್ತುಗಳ ದಾಸರಾಗುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬರುತ್ತಿದ್ದು, ಅದು ಯುವ ಜನತೆಗೆ ಮಾರಕವಾಗಿ ಪರಿಣಮಿಸುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಚಿಕ್ಕಬಳ್ಳಾಪುರ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಹೇಳಿದರು. ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅವರಣದಲ್ಲಿ ನಗರ ಪೊಲೀಸ್ ಠಾಣಾ ವತಿಯಿಂದ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಅನ್ಯ ರಾಜ್ಯ ಮತ್ತು ಜಿಲ್ಲೆಗಳಿಂದ ಮಾದಕ ವಸ್ತುಗಳ ಮಾಫಿಯಾ ತಡೆಗಟ್ಟುವುದು ಕೇವಲ ಪೊಲೀಸ್‌ ಇಲಾಖೆಯಿಂದಷ್ಟೇ ಸಾಧ್ಯವಿಲ್ಲ. ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ ಎಂದರು.

ನಗರ ಠಾಣಾ ಸಬ್ ಇನ್ಸ್ಪೆಕ್ಟರ್ ಎಚ್.ನಂಜುಂಡಯ್ಯ ಮಾತನಾಡಿ, ಮಾದಕ ವಸ್ತುಗಳಿಂದ ಪ್ರತಿಯೊಬ್ಬ ಯುವಕ- ಯುವತಿಯರು ದೂರವಿದ್ದು ಜೀವನ ಉತ್ತಮಪಡಿಸಿಕೊಳ್ಳಬೇಕು. ಮಾನವನಿಗೆ ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಬೇರಾವುದೂ ಇಲ್ಲ. ಯುವಜನರು ತಂಬಾಕು ಸೇರಿ ಯಾವುದೇ ಮಾದಕ ವಸ್ತುಗಳನ್ನು ಉಪಯೋಗಿಸಿ ದುಶ್ಚಟಗಳಿಗೆ ಬಲಿಯಾಗದೇ, ಆರೋಗ್ಯದ ಕಡೆಗೆ ಗಮನ ಹರಿಸಬೇಕು. ತಂಬಾಕು ವ್ಯಸನದಿಂದ ಸುಂದರ ಬದುಕು ಕಟ್ಟಿಕೊಳ್ಳಲು ಆಗುವುದಿಲ್ಲ. ಹಾಗಾಗಿ ಯಾರೊಬ್ಬರೂ ತಂಬಾಕು ವ್ಯಸನಿಗಳಾಗಬೇಡಿ, ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸಜ್ಜನರ ಸಂಘ ಮಾಡಿ ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಮುನಿರಾಜು, ಪ್ರಾಧ್ಯಾಪಕ ಸದಾಶಿವ, ಇನ್ನಿತರ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ