ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಇಲ್ಲಿನ ಐಡಿಎಸ್‌ಜಿ ಕಾಲೇಜಿನಿಂದ ಮೆರವಣಿಗೆಯಲ್ಲಿ ಸಾಗಿದ ವಿದ್ಯಾರ್ಥಿಗಳು ಎಐಟಿ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಅತಿಥಿ ಉಪನ್ಯಾಸರ ನೇಮಕಾತಿಗೆ ಅನುಸರಿಸುತ್ತಿರುವ ವಿಳಂಬ ಧೋರಣೆಯನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿದರು.
ರಾಜ್ಯದ ಶಿಕ್ಷಣ ಇಲಾಖೆಯಡಿ 432 ಪದವಿ ಕಾಲೇಜುಗಳಿದ್ದು, ಇವುಗಳಲ್ಲಿ 6 ಸಾವಿರ ಖಾಯಂ ಉಪನ್ಯಾಸಕರಲ್ಲಿ 3 ಸಾವಿರ ಕ್ಕಿಂತ ಹೆಚ್ಚು ಉಪನ್ಯಾಸಕರು ಈಗಾಗಲೇ ನಿವೃತ್ತಿ ಹೊಂದಿದ್ದಾರೆ. ಇನನು 3 ಸಾವಿರ ಖಾಯಂ ಉಪನ್ಯಾಸಕರೊಂದಿಗೆ 12 ಸಾವಿರ ಅತಿಥಿ ಉಪನ್ಯಾಸಕರ ಸೇವಾ ನೆರವಿನಿಂದ ಪದವಿ ತರಗತಿಗಳು ನಡೆಯುತ್ತಿವೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.2025-26ನೇ ಸಾಲಿನಲ್ಲಿ ಖಾಲಿ ಇರುವ 12 ಸಾವಿರ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, 55 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಈಗಾಗಲೇ ನಮ್ಮ ಎಲ್ಲಾ ವಿಶ್ವವಿದ್ಯಾಲಯಗಳ ತರಗತಿಗಳು ಪ್ರಾರಂಭವಾಗಿ 2 ತಿಂಗಳು ಕಳೆದರೂ ಸಹಿತ ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ಆಗದೆ ಇರುವ ಕಾರಣ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯ ತರಗತಿಗಳು ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.
ಈಗಾಗಲೇ 20 ಸಾವಿರ ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಯುಜಿಸಿ ನಿಯಮಾವಳಿ ಅನ್ವಯ ಅರ್ಹತೆ ಪಡೆದು ಸರ್ಕಾರಿ ಉಪ ನ್ಯಾಸಕರಾಗಿ ಸೇವೆ ಸಲ್ಲಿಸಲು ತಯಾರಿದ್ದಾರೆ. ಅದ್ದರಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಎಲ್ಲಾ ಉಪನ್ಯಾಸರ ನೇಮಕಾತಿ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.ಪ್ರತಿಭಟನೆಯಲ್ಲಿ ಎಬಿವಿಪಿ ತಾಲೂಕು ಸಂಚಾಲಕ ಭಗವಾನ್ ಹಾಗೂ ಪದಾಧಿಕಾರಿಗಳು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 26 ಕೆಸಿಕೆಎಂ 3
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಚಿಕ್ಕಮಗಳೂರಿನ ಎಐಟಿ ವೃತ್ತದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ರಸ್ತೆ ತಡೆ ನಡೆಸಿದರು.