ಲಕ್ಷ್ಮೇಶ್ವರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಲಕ್ಷ್ಮೇಶ್ವರ ಘಟಕದಿಂದ ಪಟ್ಟಣದ ಬಸ್ ನಿಲ್ದಾಣದ ಎದುರು ರಸ್ತೆ ತಡೆದು ನೂರಾರು ವಿದ್ಯಾರ್ಥಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆಯಿತು.
ಈ ವೇಳೆ ಅಭಿಷೇಕ ಉಮಚಗಿ ಮಾತನಾಡಿ, ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿ ಸರಿಯಾದ ಮೂಲ ಸೌಲಭ್ಯ ನೀಡುವಲ್ಲಿ ವಿಫಲವಾಗಿದೆ. ಸರಿಯಾದ ವೇಳೆಗೆ ಬಸ್ ಇಲ್ಲದೆ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ, ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ಸಿನ ವ್ಯವಸ್ಥೆ ಮಾಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬಸ್ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಉಗ್ರ ಹೋರಾಟ ಮಾಡಲಾಗುವುದು. ತಕ್ಷಣ ವಿದ್ಯಾರ್ಥಿಗಳ ವೇತನ ಜಾರಿ ಮಾಡಬೇಕು ಹಾಗೂ ಹಾಸ್ಟೆಲ್ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಎಬಿವಿಪಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಈ ವೇಳೆ ತಹಸೀಲ್ದಾರ್ ಧನಂಜಯ ಮನವಿ ಸ್ವೀಕರಿಸಿ ಸರ್ಕಾರಕ್ಕೆ ಕಳುಹಿಸಿ ಕೊಡಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಸಿಪಿಐ ನಾಗರಾಜ ಮಾಡಳ್ಳಿ ಪಿಎಸ್ಐ ನಾಗರಾಜ ಗಡದ ಹಾಗೂ ಟಿ.ಕೆ. ರಾಠೋಡ ಇದ್ದರು.