ವಿದ್ಯಾರ್ಥಿಗಳ ಶ್ರದ್ಧೆ, ಪರಿಶ್ರಮದ ಅಭ್ಯಾಸ ಯಶಸ್ಸಿಗೆ ದಾರಿ: ರಾಮಚಂದ್ರ ಅಡ್ಡಮನೆ

KannadaprabhaNewsNetwork |  
Published : Jun 05, 2026, 02:00 AM IST
ನರಸಿಂಹರಾಜಪುರ ಪಟ್ಟಣದ ಎಂ.ಕೆ.ಸಿ.ಪಿ.ಎಂ.ಕಾಲೇಜಿನಲ್ಲಿ ನಡೆದ ವಿವಿಧ ಕೋರ್ಸುಗಳ ಮಾಹಿತಿ ಕಾರ್ಯಕ್ರಮದಲ್ಲಿ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯನ್ನು ಗೌರವಿಸಲಾಯಿತು.ಈ ಸಂದರ್ಭದಲ್ಲಿ ಜವಾಹರ ನವೋದಯ ವಿದ್ಯಾ ಸಂಸ್ಥೆಯ ನಿವೃತ್ತ ಸಹಾಯಕ ಆಯುಕ್ತ ರಾಮಚಂದ್ರ ಅಡ್ಡಮನೆ ಮತ್ತಿತರರು ಇದ್ದರು. | Kannada Prabha

ಸಾರಾಂಶ

ನರಸಿಂಹರಾಜಪುರಪದವಿ ಪೂವ ಶಿಕ್ಷಣ ವಿದ್ಯಾರ್ಥಿಗಳು ಎರಡು ವರ್ಷ ಅತ್ಯಂತ ಶ್ರದ್ಧೆ ಹಾಗೂ ಪರಿಶ್ರಮದಿಂದ ಅಭ್ಯಾಸ ಮಾಡಿದರೆ ಮಾತ್ರ ಯಶಸ್ಸು ಗಳಿಸಲು ಸಾಧ್ಯವೆಂದು ಜವಾಹರ ನವೋದಯ ವಿದ್ಯಾ ಸಂಸ್ಥೆ ನಿವೃತ್ತ ಸಹಾಯಕ ಆಯುಕ್ತ ರಾಮಚಂದ್ರ ಅಡ್ಡಮನೆ ಹೇಳಿದರು.

- ಎಂಕೆಸಿಪಿಎಂ ಕಾಲೇಜಿನಲ್ಲಿ ವಿವಿಧ ಕೋರ್ಸುಗಳ ಮಾಹಿತಿ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಪದವಿ ಪೂವ ಶಿಕ್ಷಣ ವಿದ್ಯಾರ್ಥಿಗಳು ಎರಡು ವರ್ಷ ಅತ್ಯಂತ ಶ್ರದ್ಧೆ ಹಾಗೂ ಪರಿಶ್ರಮದಿಂದ ಅಭ್ಯಾಸ ಮಾಡಿದರೆ ಮಾತ್ರ ಯಶಸ್ಸು ಗಳಿಸಲು ಸಾಧ್ಯವೆಂದು ಜವಾಹರ ನವೋದಯ ವಿದ್ಯಾ ಸಂಸ್ಥೆ ನಿವೃತ್ತ ಸಹಾಯಕ ಆಯುಕ್ತ ರಾಮಚಂದ್ರ ಅಡ್ಡಮನೆ ಹೇಳಿದರು.

ಮಂಗಳವಾರ ಪಟ್ಟಣದ ಎಂಕೆಸಿಪಿಎಂ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ವಿವಿಧ ಕೋರ್ಸುಗಳ ಮಾಹಿತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ವಿದ್ಯಾರ್ಥಿ ಗಳು ತಮ್ಮ ವಿದ್ಯಾಭ್ಯಾಸದೊಂದಿಗೆ ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮಾನಸಿಕ ನಿಯಂತ್ರಣದ ಜತೆಗೆ ಕಲಿಯುವ ತಂತ್ರ ಮೈಗೂಡಿಸಿಕೊಂಡಾಗ ಯಶಸ್ಸು ಗಳಿಸಲು ಸಾಧ್ಯ ವಾಗುತ್ತದೆ. ಕಲಿಕೆಯ ಮೂಲ ಉದ್ದೇಶ ಅರ್ಥ ಮಾಡಿಕೊಳ್ಳುವುದೇ ನಿಜವಾದ ಓದು. ಈ ಹಂತದಲ್ಲಿ ಉಪನ್ಯಾಸಕ ರೊಂದಿಗೆ ಕೂಡಿ ಕಲಿತಾಗ ವಿದ್ಯೆ ಮಹತ್ವವನ್ನು ಪಡೆದುಕೊಳ್ಳಬಹುದಾಗಿದೆ. ಮುಂದಿನ ಹಂತದಲ್ಲಿ ಜ್ಞಾನಾರ್ಜನೆಗೆ ಬೇಕಾದ ಎಲ್ಲಾ ತಳಹದಿಗಳು ಇಲ್ಲಿ ಲಭ್ಯವಿದ್ದು ಅದನ್ನು ಬಳಸಿಕೊಳ್ಳಬೇಕು ಎಂದರು. ಶಾಲಾ ಆಡಳಿತ ಮಂಡಳಿ ಶೈಕ್ಷಣಿಕ ಸಲಹೆಗಾರ ಬೆಮ್ಮನೆದಯಾನಂದ ಮಾತನಾಡಿ ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿಯೇ ಕೃತಜ್ಞತಾ ಭಾವನೆ ಮೈಗೂಡಿಸಿಕೊಳ್ಳಬೇಕು. ವಿದ್ಯೆ ಕಲಿಸಿದ ಗುರುಗಳಿಗೆ, ತಂದೆ ತಾಯಿಗಳಿಗೆ ಗೌರವ ನೀಡಬೇಕೆಂದರು.ಅಧ್ಯಕ್ಷತೆ ವಹಿಸಿದ್ದ ತಾಲೂಕು ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ಒಕ್ಕಲಿಗರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಎಂಕೆಸಿಪಿಎಂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇ. 100 ರಷ್ಟು ಫಲಿತಾಂಶ ಪಡೆಯುತ್ತಿರುವುದು ಶ್ಲಾಘನೀಯ ಎಂದರು.ಇದೇ ಸಂದರ್ಭದಲ್ಲಿ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಹೆಚ್ಚು ಅಂಕ ಪಡೆದ ದೀಕ್ಷಾ, ಬ್ರೇಟ್ಟಾ ಹಾಗೂ ವಾಣಿಜ್ಯ ವಿಭಾಗದಲ್ಲಿ ಹೆಚ್ಚು ಅಂಕ ಪಡೆದ ಕೃಪಾನಿ, ಅಕ್ಷತಾಸೇನ್ ಅವರನ್ನು ಸನ್ಮಾನಿಸಲಾಯಿತು.

ಅತಿಥಿಗಳಾಗಿ ತಾಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಸ್.ಎಸ್.ಶಾಂತ್‌ಕುಮಾರ್, ಜಂಟಿ ಕಾರ್ಯದರ್ಶಿ ಪಿ.ಕೆ.ಬಸವರಾಜಪ್ಪ, ಶೈಕ್ಷಣಿಕ ಸಂಯೋಜಕಿ ತೃಪ್ತಿಅಮರ್, ಪ್ರಾಂಶುಪಾಲೆ ಪದ್ಮಾರಮೇಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿಥಿ ತಂದು ಕೊಟ್ಟಿದ್ದ ಮಾವಿನ ಹಣ್ಣು ಸೇವಿಸಿ ಇಬ್ಬರು ಬಾಲಕಿಯರು ಸಾವು!
ಮೆಡಿಕಲ್‌ ಸೀಟು ಶುಲ್ಕ ಈ ವರ್ಷ ಹೆಚ್ಚಿಸದಿರಲು ಸರ್ಕಾರ ನಿರ್ಧಾರ