Students develop positive character: Acchappa Doddabasavaraja
-ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ, ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ
----
ಕನ್ನಡಪ್ರಭ ವಾರ್ತೆ ಸಿಂಧನೂರು
ಜೀವನದಲ್ಲಿ ವಿದ್ಯಾರ್ಥಿಗಳು ಸೋತಾಗ ಅದನ್ನು ನಕಾರತ್ಮಕವಾಗಿ ತೆಗೆದುಕೊಳ್ಳದೇ ಸಕರಾತ್ಮಕ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಅಪರ ಸಿವಿಲ್ ನ್ಯಾಯಾಧೀಶ ಅಚ್ಚಪ್ಪ ದೊಡ್ಡಬಸವರಾಜ್ ಹೇಳಿದರು.
ನಗರದ ಸನ್ ರೈಸ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಆರೋಗ್ಯ ಇಲಾಖೆ ಹಾಗೂ ವಕೀಲರ ಸಂಘ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ, ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಹಾಗೂ ಹಾಗೂ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಅಂದಾಗ ಮಾತ್ರ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದರು.
ಎರಡನೇ ಅಪರ ಸಿವಿಲ್ ನ್ಯಾಯಾಧೀಶೆ ರೂಪಾ ಸಿ.ವಗ್ಗಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಹಿರೇಮಠ ಮಾತನಾಡಿದರು. ವಕೀಲರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎನ್.ರಾಮನಗೌಡ ಮಾತನಾಡಿದರು. ಖಚಾಂಚಿ ಕೆ.ಶರಣಬಸವ ಉಮಲೂಟಿ, ಖಾಜಿಮಲಿಕ್ ವಕೀಲ್, ಸಂಸ್ಥೆಯ ಮುಖ್ಯಸ್ಥರು ಸೇರಿ ಅನೇಕರು ಇದ್ದರು.
-----
ಫೋಟೋ:10ಕೆಪಿಎಸ್ಎನ್ಡಿ2: ಸಿಂಧನೂರಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ, ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಹಾಗೂ ಹಾಗೂ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನಕ್ಕೆ ಅಪರ ಸಿವಿಲ್ ನ್ಯಾಯಾಧೀಶ ಅಚ್ಚಪ್ಪ ದೊಡ್ಡಬಸವರಾಜ್ ಚಾಲನೆ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.