ಕನ್ನಡಪ್ರಭ ವಾರ್ತೆ ಬೀದರ್
ನಗರದ ಮಾಮನಕೇರಿಯಲ್ಲಿರುವ ಜ್ಞಾನಸುಧಾ ವಿದ್ಯಾಲಯದ ಜ್ಞಾನರಂಗ ಸಭಾಂಗಣದಲ್ಲಿ ಆಯೋಜಿಸಿದ್ದ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಎಂಎ ಎಕನಾಮಿಕ್ಸ್ ಪ್ರವೇಶಕ್ಕೆ ಅರ್ಹತೆ ಪಡೆದ ಜ್ಞಾನಸುಧಾ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದ ವಿದ್ಯಾರ್ಥಿನಿ ವಸುಂಧರಾ ಭಗವಂತ ಖೂಬಾ ಅವರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಉನ್ನತವಾದ ಗುರಿಯನ್ನು ಇಟ್ಟುಕೊಂಡು ಅದನ್ನು ಸಾಧಿಸಲು ನಿರಂತರವಾಗಿ ಶ್ರಮಿಸಬೇಕು. ಆ ಗುರಿಯ ಮೂಲಕ ದೇಶಕ್ಕೆ ತಮ್ಮದೆಯಾದ ಅಮೂಲ್ಯವಾದ ಕೊಡುಗೆ ನೀಡಲು ಪ್ರಯತ್ನಿಸಬೇಕಲ್ಲದೆ ಸಮಾಜದಲ್ಲಿ ಗೌರವಯುತ ಬದುಕು ನಡೆಸಲು ವಿದ್ಯಾರ್ಥಿಗಳು ಮೊದಲು ತಮ್ಮ ಜ್ಞಾನ ಸಂಪತ್ತನ್ನು ಹೆಚ್ಚಿಸಿಕೊಳ್ಳುವುದರೊಂದಿಗೆ ಮೌಲ್ಯಯುತ ಬದುಕು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಪೂರ್ಣಿಮಾ ಜಿ. ಮಾತನಾಡಿ, ‘ನಮ್ಮ ಜ್ಞಾನಸುಧಾ ವಿದ್ಯಾಲಯದಲ್ಲಿ ಎಲ್‌ಕೆಜಿಯಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡಿದ್ದ ವಿದ್ಯಾರ್ಥಿನಿ ವಸುಂಧರಾ ಖೂಬಾ ತಮ್ಮ ಮುಂದಿನ ವಿದ್ಯಾಭ್ಯಾಸವನ್ನು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಮಾಡಲು ಅರ್ಹತೆ ಪಡೆದಿರುವುದು ನಮ್ಮ ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಸ್ಥೆಯ ನಿರ್ದೇಶಕರಾದ ಡಾ. ಮುನೇಶ್ವರ ಲಾಖಾ ಮಾತನಾಡಿ, ಮಕ್ಕಳ ಭವಿಷ್ಯಕ್ಕಾಗಿ ಪಾಲಕರು ಬಹಳಷ್ಟು ಶ್ರಮಪಡುತ್ತಾರೆ. ಆ ಶ್ರಮ ಸಾರ್ಥಕವಾಗಬೇಕಾದರೆ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.
ಪ್ರಾಚಾರ್ಯರಾದ ಸುನಿತಾ ಸ್ವಾಮಿ, ಉಪಪ್ರಾಚಾರ್ಯರಾದ ಕಲ್ಪನಾ, ಮೇಲ್ವಿಚಾರಕರಾದ ರಜನಿ, ಸಾಯಿಗೀತಾ, ವಸಿಮಾ ಉಪಸ್ಥಿತರಿದ್ದರು.