ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಎದುರಿಸಿ ಉತ್ತಮ ಭವಿಷ್ಯ ಪಡೆಯಿರಿ: ಆಶಾಲತಾ

KannadaprabhaNewsNetwork |  
Published : Nov 15, 2026, 02:00 AM IST
ಕ್ಯಾಪ್ಷನ14ಕೆಡಿವಿಜಿ43 ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ  ಮುಖ್ಯೋಪಾಧ್ಯಾಯರೊಂದಿಗೆ ಸಭೆ ನಡೆಯಿತು. | Kannada Prabha

ಸಾರಾಂಶ

ಶೃಂಗೇರಿಸ್ಪರ್ಧಾತ್ಮಕ ಪರೀಕ್ಷೆಗಳು ವಿದ್ಯಾರ್ಥಿಗಳ ಹಾಗೂ ಉದ್ಯೋಗಾಕಾಂಕ್ಷಿಗಳ ಜೀವನದಲ್ಲಿ ಅತ್ಯಂತ ಮಹತ್ವದ ಸ್ಥಾನ ಪಡೆದಿವೆ. ಕೇವಲ ಅಂಕಗಳಿಸುವವದಲ್ಲದೇ,ಇದು ವ್ಯಕ್ತಿತ್ವ ವಿಕಸನ ಮತ್ತು ಉತ್ತಮ ಭವಿಷ್ಯಕ್ಕೆ ನಾಂದಿ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉತ್ತೀರ್ಣರಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಆಶಾಲತಾ.ಬಿ ಸಲಹೆ ನೀಡಿದರು.

- ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯಹಸ್ತ ಯೋಜನೆಯಡಿ ಸಾಮೂಹಿಕ ನೋಂದಣಿ ಅಭಿಯಾನಕ್ಕೆ ಚಾಲನೆ

ಕನ್ನಡಪ್ರಭ ವಾರ್ತೆ ಶೃಂಗೇರಿ

ಸ್ಪರ್ಧಾತ್ಮಕ ಪರೀಕ್ಷೆಗಳು ವಿದ್ಯಾರ್ಥಿಗಳ ಹಾಗೂ ಉದ್ಯೋಗಾಕಾಂಕ್ಷಿಗಳ ಜೀವನದಲ್ಲಿ ಅತ್ಯಂತ ಮಹತ್ವದ ಸ್ಥಾನ ಪಡೆದಿವೆ. ಕೇವಲ ಅಂಕಗಳಿಸುವವದಲ್ಲದೇ,ಇದು ವ್ಯಕ್ತಿತ್ವ ವಿಕಸನ ಮತ್ತು ಉತ್ತಮ ಭವಿಷ್ಯಕ್ಕೆ ನಾಂದಿ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉತ್ತೀರ್ಣರಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಆಶಾಲತಾ.ಬಿ ಸಲಹೆ ನೀಡಿದರು.

ಶೃಂಗೇರಿ ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯಹಸ್ತ ಯೋಜನೆಯಡಿ ವಿದ್ಯಾರ್ಥಿಗಳ ಸಾಮೂಹಿಕ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಕೇವಲ ಶಿಕ್ಷಣ ಪಡೆದು ಪಲಿತಾಂಶ, ಅಂಕಗಳಿಕೆ ಮಾತ್ರ ಸಾಲದು, ಬದುಕಿಗೆ ಪೂರಕವಾದ ಶಿಕ್ಷಣ ಬೇಕು. ಜೀವನ ಕಲೆ,ಕೌಶಲ್ಯತಿಳಿದಿರಬೇಕು.ನಾವು ಪಡೆದ ಅಂಕಪಟ್ಟಿ,ಪದವಿಗಳ ಮಾತ್ರ ಪ್ರಯೋಜನಕ್ಕೆ ಬರುವುದಿಲ್ಲ.

ಸ್ಪರ್ಧಾತ್ಮಕ ಪರೀಕ್ಷೆಗಳು ಸಮಗ್ರ ಕೌಶಲ್ಯ ಅಭಿವೃದ್ಧಿ ಉತ್ತೇಜಿಸುತ್ತದೆ. ಸಂಪೂರ್ಣವಾಗಿ ಅಭ್ಯರ್ಥಿಗಳ ಪ್ರತಿಭೆ, ಕೌಶಲ್ಯ, ಅರ್ಹತೆ ಮೇಲೆ ಉದ್ಯೋಗ ಅಥವಾ ಉನ್ನತ ಸ್ಥಾನಮಾನ ಸಿಗುತ್ತದೆ. ಕಠಿಣವಾದ ಅಧ್ಯಯನದಿಂದ ವಿಮರ್ಶಾತ್ಮಕ ಚಿಂತನೆ, ತಾರ್ಕಿಕ ಸಾಮರ್ಥ್ಯ,ವಿಶ್ಳೇಷಣಾತ್ಮಕ ಗುಣ ಬೆಳೆಯುತ್ತದೆ. ಕಡಿಮೆ ಸಮಯದಲ್ಲಿ ಹೆಚ್ಚಿನ ಹಾಗೂ ಕ್ಲಿಷ್ಟಕರ ಪ್ರಶ್ನೆಗಳನ್ನು ಉತ್ತರಿಸಬೇಕಾಗಿರುವುದರಿಂದ ಅಭ್ಯರ್ಥಿಗಳಲ್ಲಿ ಸಮಯ ಪ್ರಜ್ಞೆ ಮೂಡುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ನಿರಂತರ ಓದು, ಏಕಾಗ್ರತೆ,ಶಿಸ್ತು ಅತ್ಯಗತ್ಯ, ಇದು ದೈನಂದಿನ ಜೀವನದಲ್ಲಿ ಧನಾತ್ಮಕ ಬದಲಾವಣೆ ತರುತ್ತದೆ. ವಿದ್ಯಾರ್ಥಿಗಳಲ್ಲಿ ಧೈರ್ಯ,ಆತ್ವ ವಿಶ್ವಾಸ ಹೆಚ್ಚಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಆಸಕ್ತಿ ವಹಿಸಬೇಕು ಎಂದರು.

ಐಕ್ಯೂಎಸಿ ಸಂಚಾಲಕ ಡಾ.ಶಿವಕುಮಾರ್ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಅವುಗಳ ಪ್ರಯೋಜನ, ಎದುರಿಸುವುದು ಹೇಗೆ ಎಂಬ ಬಗ್ಗೆ ಮಾಹಿತಿ ನೀಡಿ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಉತ್ತೀರ್ಣರಾದರೆ ಉತ್ತಮ ಭವಿಷ್ಯವಿದೆ. ಕಠಿಣ ಪರಿಶ್ರಮ ಮುಖ್ಯ. ಸರ್ಕಾರ ವಿವಿಧ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡಿಕೊಳ್ಳುತ್ತದೆ. ಯಾವುದೇ ಹುದ್ದೆ, ಸಂಬಳ ಮುಖ್ಯವಲ್ಲ. ನಿರಂತರ ಪರಿಶ್ರಮ,ಅಧ್ಯಯನ ಮಾಡಬೇಕು.

ಉತ್ತೀರ್ಣತೆ,ಆಯ್ಕೆ ನಂತರ, ಮೊದಲು ಪರೀಕ್ಷೆಗಳನ್ನು ಎದುರಿಸಬೇಕು. ಇದರಲ್ಲಿ ಕೆಲವರು ಯಶಸ್ಸು ಗಳಿಸುತ್ತಾರೆ, ಕೆಲವರು ಸೋಲುತ್ತಾರೆ. ಸೋಲು ಗೆಲುವಿನ ಸೋಪಾನ ಎಂಬಂತೆ ಪರೀಕ್ಷೆ ಬರೆಯಬೇಕು. ಸತತ ಅಧ್ಯಯನ, ಪರಿಶ್ರಮದಿಂದ ಯಶಸ್ಸು ಲಭಿಸುತ್ತದೆ. ಈ ಯೋಜನೆ ಅವಕಾಶ ಪಡೆದುಕೊಳ್ಳಬೇಕು.ಎಲ್ಲಾ ವಿದ್ಯಾರ್ಥಿಗಳು ನೋಂದಣಿ ಮಾಡಿ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್, ಶೈಕ್ಷಣಿಕ ಸಂಯೋಜಕ ನಾಗರಾಜ್ ಮತ್ತಿತರರು ಇದ್ದರು.

13 ಶ್ರೀ ಚಿತ್ರ 1-

ಶೃಂಗೇರಿ ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯಹಸ್ತ ವಿದ್ಯಾರ್ಥಿಗಳ ಸಾಮೂಹಿಕ ನೋಂದಣಿ ಅಭಿಯಾನದಲ್ಲಿ ಪ್ರಾಂಶುಪಾಲರಾದ ಪ್ರೊ.ಆಶಾಲತಾ ಬಿ.ಚಾಲನೆ ನೀಡಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಿಲ್ಟರ್‌ ಮಾಡದೇ ಕಲುಷಿತ ನೀರು ಪೂರೈಕೆ ?
ಚಳಿಗಾಲದ ಅಧಿವೇಶನಕ್ಕೆ ಹೆಸ್ಕಾಂ ಸಕಲ ಸಿದ್ಧತೆ