ವಿದ್ಯಾರ್ಥಿಗಳು ಓದಿನತ್ತ ಗಮನಹರಿಸಿ

KannadaprabhaNewsNetwork |  
Published : Feb 10, 2025, 01:47 AM IST
ವಿಜೆಪಿ ೦೮ವಿಜಯಪುರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಶಾರದಾ ಪೂಜೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಸಮೀಪದ ಶಾಲೆಗಳ ಮುಖ್ಯಶಿಕ್ಷಕರನ್ನು ಸನ್ಮಾನಿಸಿದರು. | Kannada Prabha

ಸಾರಾಂಶ

ವಿಜಯಪುರ: ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಓದಿದಾಗ ಮಾತ್ರ ಜೀವನದಲ್ಲಿ ಯಶಸ್ಸು ನಿಮ್ಮನ್ನು ಹುಡುಕಿಕೊಂಡು ಬರುತ್ತದೆ ಎಂದು ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಪಿ.ವೆಂಕಟೇಶ್ ಹೇಳಿದರು.

ವಿಜಯಪುರ: ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಓದಿದಾಗ ಮಾತ್ರ ಜೀವನದಲ್ಲಿ ಯಶಸ್ಸು ನಿಮ್ಮನ್ನು ಹುಡುಕಿಕೊಂಡು ಬರುತ್ತದೆ ಎಂದು ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಪಿ.ವೆಂಕಟೇಶ್ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಶಾರದಾ ಪೂಜೆ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರತಿ ವಿದ್ಯಾರ್ಥಿ ಜೀವನದಲ್ಲಿ ಸಿಗುವಂತಹ ಒಂದು ಸುವರ್ಣ ಅವಕಾಶವಿದು. ಕಲಿಕಾವಧಿಯಲ್ಲಿ ಓದುವುದರ ಕಡೆಗೆ ಗಮನಹರಿಸಿ ಜ್ಞಾನ ಸಂಪಾದಿಸಿದರೆ ಆಗ ಪ್ರಪಂಚದ ಯಾವ ಮೂಲೆಯಲ್ಲಾದರೂ ಯಶಸ್ಸು ಸಾಧಿಸಲು ಸಾಧ್ಯ ಎಂದರು. ಪ್ರಾಂಶುಪಾಲ ಟಿ.ಗೋಪಾಲಯ್ಯ ಮಾತನಾಡಿ, ವಿದ್ಯಾರ್ಥಿಗಳು ಸಂಸ್ಕಾರ, ಶ್ರದ್ಧೆ, ಭಕ್ತಿ, ಹಿರಿಯರನ್ನು ಗೌರವಿಸಬೇಕು. ಮುಂದಿನ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಿ ಉತ್ತಮ ಸಾಧನೆ ಮಾಡುವಂತೆ ಹಾರೈಸಿದರು.

ಕಳೆದ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳು ಗಳಿಸಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸರಕಾರಿ, ಅನುದಾನಿತ ಶಾಲೆಗಳ ಮುಖ್ಯಶಿಕ್ಷಕರನ್ನು ಸನ್ಮಾನಿಸಲಾಯಿತು.

ನಾರಾಯಣಪುರ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಪಿ.ಎಂ.ಕೊಟ್ರೇಶ್, ಮೌಲನಾ ಆಜಾದ್ ಆಂಗ್ಲ ಶಾಲೆ ಮುಖ್ಯಶಿಕ್ಷಕಿ ಪ್ರಿಯದರ್ಶಿನಿ, ಉರ್ದು ಪ್ರೌಢಶಾಲೆ ಮುಖ್ಯಶಿಕ್ಷಕಿ ಶಾಂತಕುಮಾರಿ, ಮಹಾತ್ಮ ಪ್ರೌಢಶಾಲೆ ಮುಖ್ಯಶಿಕ್ಷಕಿ ಶಶಿಕಲಾ ಹಾಗೂ ಕಾಲೇಜಿನ ಉಪನ್ಯಾಸಕರು ಹಾಜರಿದ್ದರು.

(ಫೋಟೋ ಕ್ಯಾಪ್ಷನ್‌)

ವಿಜಯಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಶಾರದಾ ಪೂಜೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಸಮೀಪದ ಶಾಲೆಗಳ ಮುಖ್ಯಶಿಕ್ಷಕರನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ