ವಿದ್ಯಾರ್ಥಿಗಳು ಧ್ಯಾನ-ಯೋಗದಿಂದ ಏಕಾಗ್ರತೆ ಸಾಧಿಸಿ: ಇಮ್ಮಡಿ ಕರಿಬಸವ ದೇಶಿಕೇಂದ್ರ ಸ್ವಾಮೀಜಿ

KannadaprabhaNewsNetwork | Published : Feb 29, 2024 2:03 AM

ಸಾರಾಂಶ

ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದ ಹಂತದಲ್ಲಿಯೇ, ಮಾನವೀಯ ಮೌಲ್ಯ ಹಾಗೂ ತತ್ವಸಿದ್ಧಾಂತಗಳನ್ನು ಅಳವಡಿಸಿಕೊಂಡು, ಸಾಧನೆಗೆ ಏಕಾಗ್ರತೆ, ಮನಸ್ಸು, ಉಸಿರು ಮುಖವಾಗಿದ್ದು ಯೋಗದಲ್ಲಿ ಸಾಧನೆಗೈದರೆ ಬದುಕು ಸಾರ್ಥಕವಾಗುತ್ತದೆ ಎಂದು ಗುರುಕುಲಾನಂದಾಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

ಗುರುಕುಲ ಪ್ರೌಢಶಾಲೆಯ ಪ್ರತಿಭೋತ್ಸವ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ತಿಪಟೂರು

ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದ ಹಂತದಲ್ಲಿಯೇ, ಮಾನವೀಯ ಮೌಲ್ಯ ಹಾಗೂ ತತ್ವಸಿದ್ಧಾಂತಗಳನ್ನು ಅಳವಡಿಸಿಕೊಂಡು ಧಾರ್ಮಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕಲ್ಲದೆ ಸಾಧನೆಗೆ ಏಕಾಗ್ರತೆ, ಮನಸ್ಸು, ಉಸಿರು ಮುಖವಾಗಿದ್ದು ಯೋಗದಲ್ಲಿ ಸಾಧನೆಗೈದರೆ ಬದುಕು ಸಾರ್ಥಕವಾಗುತ್ತದೆ ಎಂದು ಗುರುಕುಲಾನಂದಾಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

ನಗರದ ಗುರುಕುಲ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರತಿಭೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಇಂದಿನ ಯುವಜನಾಂಗದಲ್ಲಿ ಏಕಾಗ್ರತೆಯ ಅರಿವು ಕಡಿಮೆಯಾಗುತ್ತಿದ್ದು, ಧ್ಯಾನ, ಯೋಗದಿಂದ ಏಕಾಗ್ರತೆಯನ್ನು ಸಾಧಿಸಿ ಸನ್ಮಾರ್ಗದತ್ತ ಶ್ರಮಿಸಬೇಕು. ಇದು ಸ್ಪರ್ಧಾತ್ಮಕ ಯುಗವಾಗಿದ್ದು ವಿದ್ಯಾರ್ಥಿಗಳು ಸುಖಾಸುಮ್ಮನೆ ಸಮಯವನ್ನು ವ್ಯರ್ಥ ಮಾಡದೆ ವಿದ್ಯಾಭ್ಯಾಸದ ಜೊತೆಜೊತೆಗೆ ತಾಂತ್ರಿಕ ಅರಿವು ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕೆಂದರು.

ನಗರಸಭೆ ಪೌರಾಯುಕ್ತ ವಿಶ್ವೇಶ್ವರ ಬದರಗಡೆ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾವಂತರಾಗಿ ವಿನಯತೆ, ವಿವೇಕ ಜ್ಞಾನವನ್ನು ಬೆಳಸಿಕೊಂಡು ಸುಸಂಸ್ಕೃತ ಸಮಾಜವನ್ನು ನಿರ್ಮಾಣ ಮಾಡಬೇಕು. ಓದಿನ ಕಡೆ ಹೆಚ್ಚು ಗಮನಹರಿಸುವ ಮೂಲಕ ಉತ್ತಮ ಜ್ಞಾನದ ಜೊತೆ ಅಂಕಗಳನ್ನು ಪಡೆದುಕೊಳ್ಳಬೇಕು. ಹಾಗೆಯೇ ಕೌಶಲ್ಯ, ಕಲೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಸಕ್ರೀಯವಾಗಿ ತೊಡಗಿಸಿಕೊಳ್ಳುವ ಮೂಲಕ ವ್ಯಕ್ತಿತ್ವ ವಿಕಸನ ಮಾಡಿಕೊಂಡು ರಾಷ್ಟ್ರದ ಪ್ರಗತಿಗೆ ಶ್ರಮಿಸಬೇಕೆಂದರು.

ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಎಸ್.ಎಲ್. ಗಂಗಾಧರ್‌ ಮಾತನಾಡಿ, ಮಕ್ಕಳಿಗೆ ಮೊಬೈಲ್‌ನಿಂದ ಸಾಧ್ಯವಾದಷ್ಟು ದೂರವಿದ್ದು ಓದಿನತ್ತ ಆಸಕ್ತಿ ವಹಿಸಬೇಕು. ಗುರುಕುಲಾನಂದಾಶ್ರಮವು ಶತಮಾನಗಳಿಂದ ಕಲ್ಪತರು ನಾಡಿನಲ್ಲಿ ಅನ್ನ ಆಶ್ರಯದ ಜೊತೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಶಿಸ್ತು, ಸಂಸ್ಕಾರಯುತ ಶಿಕ್ಷಣ ನೀಡುತ್ತಾ ಸಮಾಜದಲ್ಲಿ ಜವಾಬ್ದಾರಿಯುತ ನಾಗರಿಕರನ್ನಾಗಿ ಮಾಡುತ್ತಿದೆ ಎಂದರು.

ಈ ಸಂದರ್ಭದಲ್ಲಿ ಲಿಂ.ಎಸ್.ಎಸ್. ರುದ್ರಯ್ಯ ಮತ್ತು ಲಿಂ.ಎಂ.ಟಿ. ವಿಶ್ವನಾಥಯ್ಯ ಸ್ಮರಣಾರ್ಥ ವಿವಿಧ ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕಾಲೇಜಿನ ಸಂಯೋಜನಾಧಿಕಾರಿ ಎಸ್.ಆರ್‌. ಮಂಜುನಾಥ್ ಪ್ರತಿಭಾ ಪುರಸ್ಕಾರ ನೀಡಿದರು.ಫೋಟೋ

ಪ್ರತಿಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ಗುರುಕುಲಾನಂದಾಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ.

Share this article