ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ

KannadaprabhaNewsNetwork |  
Published : Feb 23, 2026, 01:45 AM IST
ಚಿತ್ರ 2 | Kannada Prabha

ಸಾರಾಂಶ

ಹರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದಲ್ಲಿ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡವನ್ನು ಸಚಿವ ಡಿ ಸುಧಾಕರ್ ಉದ್ಘಾಟಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಹಿರಿಯೂರು

ತಾಲೂಕಿನ ಹರಿಯಬ್ಬೆ ಗ್ರಾಮದಲ್ಲಿ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಹಾಗೂ ಶಾಲಾ ಕಾಲೇಜುಗಳಿಗೆ ಹೆಚ್ಚಿನ ಒತ್ತು ನೀಡಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು.

ಈ ವಿದ್ಯಾರ್ಥಿನಿಲಯ ಕಟ್ಟಡವು ಗ್ರಾಮೀಣ ಭಾಗದ ಬಾಲಕಿಯರಿಗೆ ಉತ್ತಮ ವಸತಿ ಸೌಲಭ್ಯ, ಸುರಕ್ಷಿತ ವಾತಾವರಣ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಮತ್ತಷ್ಟು ಉತ್ತೇಜನ ನೀಡಲಿದೆ. ಶಿಕ್ಷಣವೇ ಶಕ್ತಿ ಎಂಬ ನಂಬಿಕೆಯಿಂದ ಸರ್ಕಾರದ ಆಶಯಗಳನ್ನು ನೆಲೆಗೊಳಿಸಲು ನಾವು ಬದ್ಧರಾಗಿದ್ದೇವೆ.ಗ್ರಾಮದ ಅಭಿವೃದ್ದಿಗೆ ಜನರ ಸಹಕಾರದೊಂದಿಗೆ ಇಂತಹ ಹಲವಾರು ಯೋಜನೆಗಳನ್ನು ಮುಂದಿನ ದಿನಗಳಲ್ಲಿ ಜಾರಿಗೆ ತರುವ ನಮ್ಮ ಪ್ರಯತ್ನ ನಿರಂತರವಾಗಿರಲಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಿಟಿ ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಶಿವಣ್ಣ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುಷ್ಪಲತಾ ಭಾವಿಮಠ,ತಾಲೂಕು ಕಲ್ಯಾಣಾಧಿಕಾರಿ ಎಂ ಶಿವಕುಮಾರ್,ಮುಖಂಡರುಗಳಾದ ಖಾದಿ ರಮೇಶ್,ಈರಲಿಂಗೇಗೌಡ,ಕೃಷ್ಣಮೂರ್ತಿ,ಕಂದಿಕೆರೆ ಸುರೇಶ್ ಬಾಬು,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಮೇಶ್ ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿವಿಲ್‌ ನ್ಯಾಯಾಧೀಶರಾಗಿ ಮಾಳೇನಳ್ಳಿಯ ಮಣಿಕಂಠ ಆಯ್ಕೆ
ಚೆಸ್‌ಕ್ರೀಡೆ ಮಕ್ಕಳ ಬುದ್ದಿ ವಿಕಸನಕ್ಕೆ ಸಹಕಾರಿ