ವಿದ್ಯಾರ್ಥಿಗಳಿಗೆ ವಿಶಾಲ ಅವಕಾಶಗಳಿವೆ: ಜಿ.ಎಸ್. ಪಾಟೀಲ

KannadaprabhaNewsNetwork |  
Published : Oct 19, 2025, 01:00 AM IST
ಗದಗ ನಗರದ ಕಳಸಾಪುರ ರಸ್ತೆಯಲ್ಲಿರುವ ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕಾಲೇಜಿನ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ನಡೆದ ಕಾರ್ಯಕ್ರಮವನ್ನು ಶಾಸಕ ಜಿ.ಎಸ್‌. ಪಾಟೀಲ ಉದ್ಘಾಟಿಸಿದರು. | Kannada Prabha

ಸಾರಾಂಶ

ಗದಗ ನಗರದ ಕಳಸಾಪುರ ರಸ್ತೆಯಲ್ಲಿರುವ ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕಾಲೇಜಿನ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ರೋಣ ಶಾಸಕ ಜಿ.ಎಸ್. ಪಾಟೀಲ ಭೂಮಿಪೂಜೆ ನೆರವೇರಿಸಿದರು.

ಗದಗ: ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ಹೆಸರಿನಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳನ್ನು ಉತ್ತಮವಾಗಿ ನಡೆಸುವ ಮೂಲಕ ಅವರ ಹೆಸರನ್ನು ಅಜರಾಮರಗೊಳಿಸಲಾಗಿದೆ ಎಂದು ರೋಣ ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ನಗರದ ಕಳಸಾಪುರ ರಸ್ತೆಯಲ್ಲಿರುವ ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕಾಲೇಜಿನ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಆನಂತರ ಶ್ರೀ ರಾಕೇಶ ಸಿದ್ದರಾಮಯ್ಯ ಸಭಾಭವನದಲ್ಲಿ ಶ್ರೀ ಕಾಳಿದಾಸ ಶಿಕ್ಷಣ ಸಮಿತಿಯ ಹಾಗೂ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ದಿನಗಳಲ್ಲಿ ಪ್ರಯತ್ನ ಮಾಡಿದರೆ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ಪಡೆಯಬಹುದು. ಆದರೆ ದೊರಕಿರುವ ಅನುದಾನವನ್ನು ಸದುಪಯೋಗ ಪಡೆಸಿಕೊಳ್ಳುವ ಸಂಸ್ಥೆಗಳು ವಿರಳವಾಗಿವೆ. ಇವುಗಳ ಮಧ್ಯ ರಾಕೇಶ ಸಿದ್ದರಾಮಯ್ಯ ಟ್ರಸ್ಟ್‌ ವತಿಯಿಂದ ಸಮಾಜಕ್ಕಾಗಿ ಹಾಗೂ ಸಾರ್ವಜನಿಕರಿಗಾಗಿ ತನ್ನದೆ ಆದ ಹಲವಾರು ಕೆಲಸ ಕಾರ್ಯಗಳನ್ನು ಮಾಡುತ್ತಾ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿರುವುದರಿಂದ ಈ ಸಂಸ್ಥೆ ಹೆಮ್ಮರವಾಗಿ ಬೆಳೆದಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಯಾರೂ ಶಿಕ್ಷಣದಿಂದ ವಂಚಿತರಾಗಬಾರದೆಂದು ಎಲ್ಲ ವರ್ಗದ ಜನರಿಗಾಗಿ ಹಾಸ್ಟೆಲ್‌ಗಳನ್ನು ನಿರ್ಮಾಣ ಮಾಡಿದೆ. ಮೊದಲು ಗುಡಿ ಕೈಗಾರಿಕೆಗಳ ಬಗ್ಗೆ ತರಬೇತಿ ನೀಡಲಾಗುತ್ತಿತ್ತು. ಈಗ ಡೊಮೆಸ್ಟಿಕ್ ತರಬೇತಿ ಪಡೆಯುವ ಮೂಲಕ ವಿದ್ಯಾರ್ಥಿಗಳಿಗೆ ಇಲಾಖೆಯು ಪ್ರಮಾಣಪತ್ರ ನೀಡಿ ಅನುಕೂಲ ಕಲ್ಪಿಸಲಾಗುತ್ತದೆ. ವಿದ್ಯಾರ್ಥಿಗಳು ಕಷ್ಟಪಟ್ಟರೆ ಗುರಿ ಮುಟ್ಟಲು ಸಾಧ್ಯವಾಗುತ್ತದೆ. ಮುಂದಿನ ದಿನಗಳಲ್ಲಿ ಬಡವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಪ್ರೋತ್ಸಾಹ ನೀಡುವುದಾಗಿ ಭರವಸೆ ನೀಡಿದರು.

ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಅಶೋಕ ಮಿರ್ಜಿ ಮಾತನಾಡಿ, ವಿದ್ಯಾರ್ಥಿಗಳಾದವರು ಯಾವುದೇ ಕೆಲಸವಾಗಲಿ ಆತ್ಮವಿಶ್ವಾಸ, ಶ್ರದ್ಧೆಯಿಂದ ದಿ ಬೆಸ್ಟ್ ಎನ್ನುವ ರೀತಿಯಲ್ಲಿ ಮಾಡಬೇಕು. ಈ ಹಿಂದೆ ಐಟಿಐ ಕೋರ್ಸ್‌ಗೆ ಪ್ರವೇಶ ಸಿಗುತ್ತಿರಲಿಲ್ಲ, ಈಗ ಸಾಕಷ್ಟು ಅವಕಾಶ ಇರುವುದರಿಂದ ಐಟಿಐ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಸಮಾಜ ಕಟ್ಟುವ ಕೆಲಸ ಮಾಡಬೇಕು. ಜೀವನದಲ್ಲಿ ಉತ್ತಮ ಆಯ್ಕೆ ಉತ್ತಮ ಭವಿಷ್ಯ ನಿರ್ಮಾಣ ಮಾಡಲು ಸಹಾಯ ಮಾಡುತ್ತದೆ ಎಂದರು.

ಈ ವೇಳೆ ಟ್ರಸ್ಟ್‌ ಅಧ್ಯಕ್ಷ ರಾಮಕೃಷ್ಣ ರೊಳ್ಳಿ, ಕಾಳಿದಾಸ ಶಿಕ್ಷಣ ಸಮಿತಿಯ ಕಾರ್ಯದರ್ಶಿ ವೈ.ಬಿ. ಬಾಣಾಪುರ, ವಿ.ಆರ್. ಗುಡಿಸಾಗರ, ಬಾವಿಕಟ್ಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ ದಾಕ್ಷಾಯಣಿ ಪಾಟೀಲ, ವೈ.ಬಿ. ಕತ್ತಿ, ಮಲ್ಲೂರ ಬಸವರಾಜ, ಮಹಾಂತೇಶ ಕೆ. ಬಸವರಾಜ ನವಲಗುಂದ, ಯೂಸೂಪ ಇಟಗಿ, ಕೆ.ಬಿ. ಕಂಬಳಿ, ಯಲ್ಲಪ್ಪ ಗುರಿಕಾರ, ಶಿವಣ್ಣ ಸಿಂಗಟಾಲಕೇರಿ ಇದ್ದರು. ಬಸಪ್ಪ ಹ್ಯಾಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಸವರಾಜ ಲದ್ದಿ ಕಾರ್ಯಕ್ರಮ ನಿರೂಪಿಸಿದರು. ಪ್ರಾಚಾರ್ಯ ರಮೇಶ ವಡವಿ ವಂದಿಸಿದರು.

PREV

Recommended Stories

ಪಕ್ಷದ ಗೆಲುವಿಗೆ ಕಾರ್ಯಕರ್ತೆಯರು ಶ್ರಮಿಸಿ
ಪ್ರತಿಮೆ ಭಗ್ನಗೊಳಿಸಿದ ಕಿಡಿಗೇಡಿಗಳಿಗೆ ಉಗ್ರ ಶಿಕ್ಷೆ ವಿಧಿಸಿ