ವಿದ್ಯಾರ್ಥಿಗಳು ಶಿಸ್ತು ಮೈಗೂಡಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಿ

KannadaprabhaNewsNetwork |  
Published : May 27, 2025, 11:51 PM IST
ಪಟ್ಟಣದ ಬಿಇಒ ಕಚೇರಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಶೈಕ್ಷಣಿಕ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ      ಶಾಸಕ ಎ. ಮಂಜು ಮಾತನಾಡಿದರು  | Kannada Prabha

ಸಾರಾಂಶ

ವಿದ್ಯಾರ್ಥಿಗಳು ಉತ್ತಮ ನಡವಳಿಕೆ, ಶಿಸ್ತು ಮೈಗೂಡಿಸಿಕೊಂಡು ಕಲಿಕೆ ಕಡೆಗೆ ಹೆಚ್ಚು ಆಸಕ್ತಿ ವಹಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ಎ. ಮಂಜು ಕಿವಿಮಾತು ಹೇಳಿದರು. ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿದಾಗ ಮಾತ್ರ ಸತ್ಪ್ರಜೆ ಯಾಗಲು ಸಾಧ್ಯ. ಪಾಲಕರು ಹಣ ಆಸ್ತಿ ಗಳಿಕೆಗಿಂತಲೂ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿದರೆ ಅಂತಹ ಕುಟುಂಬಗಳು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಬಹುದು ಎಂದರು. ಶಾಲೆಗೆ ಬರುವ ವಿದ್ಯಾರ್ಥಿಗಳು ತರಗತಿಗೆ ಗೈರಾಗದಂತೆ ನೋಡಿಕೊಳ್ಳಬೇಕು, ಅರ್ಧದಲ್ಲೇ ಶಾಲೆ ಬಿಡುವ ಮಕ್ಕಳ ಬಗ್ಗೆ ಹೆಚ್ಚು ನಿಗಾ ವಹಿಸಿ ಶಾಲೆ ಬಿಡದಂತೆ ನೋಡಿಕೊಳ್ಳಬೇಕು ಎಂದರು

ಕನ್ನಡಪ್ರಭ ವಾರ್ತೆ ಅರಕಲಗೂಡು

ವಿದ್ಯಾರ್ಥಿಗಳು ಉತ್ತಮ ನಡವಳಿಕೆ, ಶಿಸ್ತು ಮೈಗೂಡಿಸಿಕೊಂಡು ಕಲಿಕೆ ಕಡೆಗೆ ಹೆಚ್ಚು ಆಸಕ್ತಿ ವಹಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ಎ. ಮಂಜು ಕಿವಿಮಾತು ಹೇಳಿದರು.

ಪಟ್ಟಣದ ಬಿಇಒ ಕಚೇರಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಶೈಕ್ಷಣಿಕ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಅಂಕ ಗಳಿಸುವಲ್ಲಿ ಪೈಪೋಟಿಗೆ ಬಿದ್ದಿರುವುದು ಮುಂದಿನ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಯಾಗುತ್ತದೆ. ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿದಾಗ ಮಾತ್ರ ಸತ್ಪ್ರಜೆ ಯಾಗಲು ಸಾಧ್ಯ. ಪಾಲಕರು ಹಣ ಆಸ್ತಿ ಗಳಿಕೆಗಿಂತಲೂ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿದರೆ ಅಂತಹ ಕುಟುಂಬಗಳು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಬಹುದು ಎಂದರು. ಶಾಲೆಗೆ ಬರುವ ವಿದ್ಯಾರ್ಥಿಗಳು ತರಗತಿಗೆ ಗೈರಾಗದಂತೆ ನೋಡಿಕೊಳ್ಳಬೇಕು, ಅರ್ಧದಲ್ಲೇ ಶಾಲೆ ಬಿಡುವ ಮಕ್ಕಳ ಬಗ್ಗೆ ಹೆಚ್ಚು ನಿಗಾ ವಹಿಸಿ ಶಾಲೆ ಬಿಡದಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಸರ್ಕಾರ ನೀಡುತ್ತಿರುವ ಎಲ್ಲ ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಿ ಗುಣಮಟ್ಟದ ಶಿಕ್ಷಣ ಕೊಡಬೇಕು ಎಂದು ಹೇಳಿದರು.ಶೈಕ್ಷಣಿಕವಾಗಿ ಅರಕಲಗೂಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ