ವಿದ್ಯಾರ್ಥಿಗಳು ಉನ್ನತ ವ್ಯಾಸಂದ ಮೂಲಕ ಭವಿಷ್ಯ ರೂಪಿಸಿಕೊಳ್ಳಿ

KannadaprabhaNewsNetwork |  
Published : Feb 26, 2024, 01:36 AM IST
25ಕೆಎಂಎನ್ ಡಿ24 | Kannada Prabha

ಸಾರಾಂಶ

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪದವಿ ಪಡೆದರಷ್ಟೇ ಸಾಲದು. ಇತರೆ ವಿಷಯಗಳಲ್ಲೂ ಉನ್ನತ ವ್ಯಾಸಂಗ ಮಾಡುವ ಮೂಲಕ ಭವಿಷ್ಯ ಕಂಡುಕೊಳ್ಳಬೇಕು ಎಂದು ಬೆಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಲಿಂಗರಾಜು ಗಾಂಧಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಭಾರತೀನಗರ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪದವಿ ಪಡೆದರಷ್ಟೇ ಸಾಲದು. ಇತರೆ ವಿಷಯಗಳಲ್ಲೂ ಉನ್ನತ ವ್ಯಾಸಂಗ ಮಾಡುವ ಮೂಲಕ ಭವಿಷ್ಯ ಕಂಡುಕೊಳ್ಳಬೇಕು ಎಂದು ಬೆಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಲಿಂಗರಾಜು ಗಾಂಧಿ ತಿಳಿಸಿದರು.

ಭಾರತೀ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಭಾರತೀ ಎಜುಕೇಷನ್ ಟ್ರಸ್ಟ್‌ನ ಭಾರತೀ ಪದವಿ ಕಾಲೇಜು ಮತ್ತು ಸ್ನಾತ್ತಕೋತ್ತರ ವಿಭಾಗದ ಸಹಯೋಗದಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಪದವಿ ಪೂರೈಸುವುದು ಜೀವನದ ಒಂದು ಮೈಲಿಗಲ್ಲು ಅಷ್ಟೆ. ಅದರಿಂದ ಮುಂದೆಯೂ ಸಾಕಷ್ಟು ವಿಷಯ ತಿಳಿದುಕೊಳ್ಳಬೇಕಿದೆ. ನಮ್ಮ ಪಯಣ ಎಷ್ಟು ಎಂಬುದನ್ನು ಮೈಲಿಗಲ್ಲು ಸೂಚಿಸುತ್ತದೆ. ಹಾಗಾಗಿ ವಿದ್ಯಾರ್ಥಿಗಳು ತಮ್ಮ ಓದಿನ ಆಸಕ್ತಿಯನ್ನು ಕುಂದದಂತೆ ನೋಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಪದವಿ ಪಡೆದ ನಂತರ ಹಣ ಗಳಿಕೆಯೊಂದೇ ಉದ್ದೇಶವಾಗಿರಬಾರದು. ಸಮಾಜದ ಅಭ್ಯುದಯಕ್ಕೆ ತಾನು ಕಲಿತ ಸಂಸ್ಥೆಗೆ ನನ್ನಿಂದ ಏನಾದರೂ ಕಾಣಿಕೆ ನೀಡಬಹುದೇ ಎಂಬುದನ್ನು ಮನಗಾಣಬೇಕು ಎಂದರು. ಪ್ರತಿಯೊಬ್ಬರಲ್ಲೂ ಕನಸು ಎಂಬುದು ಇದ್ದರೆ ಅದನ್ನು ಸ್ವಾರ್ಥಕ್ಕೆ ಬಳಕೆಯಾಗಬಾರದು. ಪ್ರತಿ ಪದವಿ ಪಡೆದ ವಿದ್ಯಾರ್ಥಿಗಳ ಮಿಡಿತ ಕುಟುಂಬ, ಸಮಾಜದ ಬಗ್ಗೆ ಆಲೋಚಿಸುವಂತಿರಬೇಕು. ಹಾಗಾದಾಗ ಮಾತ್ರ ಜ್ಞಾನಾರ್ಜನೆಯನ್ನು ಪಡೆದದ್ದಕ್ಕೂ ಸಾರ್ಥಕವಾಗುತ್ತದೆ ಎಂದು ತಿಳಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮಾತನಾಡಿ, ಮಾಜಿ ಸಂಸದ ಡಾ.ಜಿ.ಮಾದೇಗೌಡರು ಗ್ರಾಮೀಣ ಪ್ರದೇಶದಲ್ಲಿ ಒಂದು ದೊಡ್ಡ ವಿದ್ಯಾಸಂಸ್ಥೆ ಕಟ್ಟಿ ಹಲವು ಗ್ರಾಮೀಣ ಪ್ರತಿಭೆಗಳಿಗೆ ದಾರಿದೀಪವಾಗಿದ್ದಾರೆ. ಅವರಿಗೆ ಒಳ್ಳೆಯ ಹೆಸರು ತರಲು ವಿದ್ಯಾರ್ಥಿಗಳು ಮುಂದಾಗಬೇಕೆಂದು ಕರೆ ನೀಡಿದರು.

ಭಾರತೀ ಎಜುಕೇಷನ್ ಟ್ರಸ್ಟ್‌ನ ಅಧ್ಯಕ್ಷ , ಶಾಸಕ ಮಧು ಜಿ. ಮಾದೇಗೌಡ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅಭಿವೃದ್ದಿಗಾಗಿ ನಮ್ಮ ತಂದೆ ಕಟ್ಟಿದ ವಿದ್ಯಾಸಂಸ್ಥೆಯ ಜವಾಬ್ದಾರಿವಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದು, ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗೆ ಶ್ರಮಿಸುತ್ತಿರುವುದಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಪಿ.ನಾಗೇಂದ್ರ, ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥ ಪ್ರೊ.ಎಸ್.ನಾಗರಾಜು, ಪ್ರಾಂಶುಪಾಲ ಮಲ್ಲಿಕಾರ್ಜುನ್, ಪರೀಕ್ಷಾ ನಿಯಂತ್ರಕ ಪ್ರೊ. ಜಯರಾಮೇಗೌಡ, ಟ್ರಸ್ಟಿ ಮುದ್ದಯ್ಯ ಸೇರಿದಂತೆ ಹಲವರು ಇದ್ದರು. ಇದೇ ವೇಳೆ ಪದವಿ, ಸ್ನಾತಕೋತ್ತರ ಪದವಿ ಪಡೆದ ಬಿ.ಎ, ಬಿಎಸ್ಸಿ, ಬಿಕಾಂ, ಎಂಎ, ಎಸ್ಸಿ, ಎಂಕಾಂ ಸೇರಿದಂತೆ ಹಲವು ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ