ವಿದ್ಯಾರ್ಥಿಗಳು ಮುಂದೆ ಶಿಕ್ಷಕರಾಗಬೇಕು: ಭೋಜೇಗೌಡ

KannadaprabhaNewsNetwork |  
Published : Jan 07, 2024, 01:30 AM IST
ಚಿಕ್ಕಮಗಳೂರಿನ ಬೇಲೂರು ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಸಹ ಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಉದ್ಘಾಟಿಸಿದರು. ಎಸ್‌.ಎಲ್‌. ಭೋಜೇಗೌಡ, ವೆಂಕಟೇಶ್‌ ಪೈ ಇದ್ದರು. | Kannada Prabha

ಸಾರಾಂಶ

ನಾನು ಬಹುತೇಕ ಯೂನಿವರ್ಸಿಟಿಗಳಲ್ಲಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮುಂದೆ ನೀವೇನಾಗುತ್ತೀರೆಂದು ಪ್ರಶ್ನಿಸಿದ್ದೇನೆ. ಆ ಎಲ್ಲಾ ವಿದ್ಯಾರ್ಥಿಗಳೂ ನಾವು ಇಂಜಿನಿಯರ್, ಡಾಕ್ಟರ್, ಉನ್ನತ ಅಧಿಕಾರಿಗಳಾಗುತ್ತೇವೆ ಎಂದಿದ್ದಾರೆ. ಅವರಲ್ಲಿ ಒಬ್ಬರೂ ಸಹ ನಾನು ಶಿಕ್ಷಕಅಥವಾ ಉಪನ್ಯಾಸಕ ನಾಗುತ್ತೇನೆ ಎಂದು ಹೇಳಿಲ್ಲ ವಿದ್ಯಾರ್ಥಿಗಳು ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಶಿಕ್ಷಕರು ಅಥವಾ ಉಪನ್ಯಾಸಕರಾಗಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುವಿದ್ಯಾರ್ಥಿಗಳು ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಶಿಕ್ಷಕರು ಅಥವಾ ಉಪನ್ಯಾಸಕರಾಗಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.

ನಗರದ ಬೇಲೂರು ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಸಹ ಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ನಾನು ಬಹುತೇಕ ಯೂನಿವರ್ಸಿಟಿಗಳಲ್ಲಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮುಂದೆ ನೀವೇನಾಗುತ್ತೀರೆಂದು ಪ್ರಶ್ನಿಸಿದ್ದೇನೆ. ಆ ಎಲ್ಲಾ ವಿದ್ಯಾರ್ಥಿಗಳೂ ನಾವು ಇಂಜಿನಿಯರ್, ಡಾಕ್ಟರ್, ಉನ್ನತ ಅಧಿಕಾರಿಗಳಾಗುತ್ತೇವೆ ಎಂದಿದ್ದಾರೆ. ಅವರಲ್ಲಿ ಒಬ್ಬರೂ ಸಹ ನಾನು ಶಿಕ್ಷಕಅಥವಾ ಉಪನ್ಯಾಸಕ ನಾಗುತ್ತೇನೆ ಎಂದು ಹೇಳಿಲ್ಲ ಎಂದು ವಿಷಾದಿಸಿದರು. ಇಂದಿನ ಪೀಳಿಗೆ ಉಪನ್ಯಾಸಕರಾಗಲು, ಶಿಕ್ಷಕರಾಗಲು ಮುಂದೆ ಬಾರದಿರುವುದರಿಂದಾಗಿ ಇಂದು ಭಾರತ ಮಾತ್ರವಲ್ಲ. ಇಡೀ ಪ್ರಪಂಚ ಶಿಕ್ಷಕರು, ಉಪನ್ಯಾಸಕರ ಕೊರತೆಯನ್ನು ಎದುರಿಸುತ್ತಿದೆ. ಎಲ್ಲರೂ ಡಾಕ್ಟರ್, ಇಂಜಿನಿಯರ್, ಅಧಿಕಾರಿ ಗಳಾದರೆ ಮುಂದೆ ನಿಮ್ಮ ಮಕ್ಕಳಿಗೆ ವಿದ್ಯೆ ಹೇಳಿ ಕೊಡುವವರು ಯಾರು, ಶಿಕ್ಷಕರಿಲ್ಲದೆ ಮಕ್ಕಳು ವಿದ್ಯಾವಂತರಾಗದಿದ್ದರೆ ದೇಶದ ಭವಿಷ್ಯದ ಗತಿ ಏನು ಎಂದು ಪ್ರಶ್ನಿಸಿದರು. ಕನ್ನಡದ ಗೀತೆಗಳನ್ನು ಮತ್ತು ಜೈಮಿನಿ ಭಾರತದ ಪದ್ಯ ಹಾಡುವ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು. ಪ್ರಾಚಾರ್ಯ ಜಿ.ಬಿ.ವಿರೂಪಾಕ್ಷ, ಕಾಲೇಜಿಗೆ ಶೌಚಾಲಯ, ಮೈದಾನಕ್ಕೆ ಇಂಟರ್ಲಾಕ್, ಸ್ಮಾರ್ಟ್‌ ಕ್ಲಾಸ್ ಮತ್ತು ರಂಗ ಮಂದಿರ ನಿರ್ಮಿಸಿ ಕೊಡುವಂತೆ ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸುವಂತೆ ಶಾಸಕರಿಗೆ ಮನವಿ ಮಾಡಿದರು. ಶಾಸಕ ಎಚ್.ಡಿ.ತಮ್ಮಯ್ಯ ಮಾತನಅಡಿ, ಮಕ್ಕಳಲ್ಲಿ ಹಣ ಮತ್ತು ವಿದ್ಯೆ ಇದ್ದರೆ ಸಾಲದು ಅವರಲ್ಲಿ ಉತ್ತಮ ಗುಣ, ಒಳ್ಳೆಯ ನಡತೆ ಮತ್ತು ಸಂಸ್ಕಾರವಿರಬೇಕು ಎಂದು ಕಿವಿಮಾತು ಹೇಳಿದರು. ಕಾಲೇಜಿಗೆ ರಂಗಮಂದಿರ, ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಉಪನ್ಯಾಸಕಿ ಲೋಲಾಕ್ಷಿ ಕಾಲೇಜಿನ ವಾರ್ಷಿಕ ವರದಿ ಮಂಡಿಸಿದರು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟಾನಾಯ್ಕ, ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಸಹಾಯಕ ವ್ಯವಸ್ಥಾಪಕ ಅನಿಲ್‌ಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಫೀಕ್‌ ಅಹಮದ್, ಸದಸ್ಯರಾದ ಸೀತಾ ರಾಮನ್, ಮುರುಗೇಶ್, ರೇಣುಕಾವರ್ಣ, ಮಾಜಿ ಅಧ್ಯಕ್ಷ ವೆಂಕಟೇಶ್ ಪೈ, ಪ್ರೌಢಶಾಲೆ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕೆ.ಭರತ್, ಉಪನ್ಯಾಸಕರಾದ ತ್ಯಾಗರಾಜ್, ಮಂಜುನಾಥ್, ಕವಿತಾ ಉಪಸ್ಥಿತರಿದ್ದರು. 6 ಕೆಸಿಕೆಎಂ 2

ಚಿಕ್ಕಮಗಳೂರಿನ ಬೇಲೂರು ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಸಹ ಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಶಾಸಕ ಎಚ್‌.ಡಿ. ತಮ್ಮಯ್ಯ ಉದ್ಘಾಟಿಸಿದರು. ಎಸ್‌.ಎಲ್‌. ಭೋಜೇಗೌಡ, ವೆಂಕಟೇಶ್‌ ಪೈ ಇದ್ದರು.

PREV

Recommended Stories

ಗುತ್ತಲದಲ್ಲಿ ಸಂಭ್ರಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಹಳಿಯಾಳದ ಮೆಕ್ಕೆಜೋಳದಲ್ಲಿ ಕೀಟನಾಶಕಗಳ ಪ್ರಮಾಣ ಅಧಿಕ