ಕನ್ನಡಪ್ರಭ ವಾರ್ತೆ ಬಸವಕಲ್ಯಾಣ
ನಮ್ಮ ಸಂಸ್ಥೆ ಶೈಕ್ಷಣಿಕ ವಲಯದಲ್ಲಿ ಅಕಾಡೆಮಿಕ್ ಹಾಗೂ ರಿಸರ್ಚ್ ಎರಡೂ ದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿದ್ದು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು, ಪದವಿ ಮುಗಿಸಿದರೆ ಸಾಲದು, ಜೊತೆ-ಜೊತೆಗೆ ಹೊಸ-ಹೊಸ ತಂತ್ರಜ್ಞಾನಗಳ ಬಗ್ಗೆ ಸಂಶೋಧನೆ ಮಾಡಬೇಕು ಎಂದು ಬಸವಕಲ್ಯಾಣ ಎಂಜಿನಿಯರಿಂಗ್ ಕಾಲೇಜಿನ ಅಧ್ಯಕ್ಷರಾದ ದೀಲಿಪಕುಮಾರ ಎಸ್.ತಾಳಂಪಳ್ಳಿ ನುಡಿದರು.ನಗರದ ಹೊರವಲಯದಲ್ಲಿರುವ ಬಸವಕಲ್ಯಾಣ ಎಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜೀವನದಲ್ಲಿ ವಿದ್ಯೆ ಜೊತೆಗೆ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಮುನ್ನುಗ್ಗಬೇಕಾಗುತ್ತದೆ. ಜೊತೆಗೆ ಈ ದೇಶದ ಸನಾತನ ಕಾಲದ ಸಂಸ್ಕಾರವು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.
ಬೀದರ್ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಬಿ.ಎಸ್.ಬಿರಾದಾರ ಮಾತನಾಡಿ, ಬೀದರ್ ವಿಶ್ವವಿದ್ಯಾಲಯ ಅಭಿವೃದ್ಧಿ ಹೊಂದಬೇಕಾದರೆ, ಬಸವಕಲ್ಯಾಣ ಶೈಕ್ಷಣಿಕ ಸಂಸ್ಥೆಯಂತಹ ಸಂಸ್ಥೆಗಳ ಸಹಕಾರ ಬಹಳ ಅತ್ಯಗತ್ಯ ಎಂದು ಹೇಳಿದರು.ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯ ಪ್ರಾದೇಶಿಕ ಅಧಿಕಾರಿ ಡಾ.ಬಸವರಾಜ ಗಾದಗಿ ಮಾತನಾಡಿ, ಪದವಿ ಮುಗಿಸಿದ ನಂತರ ವಿದ್ಯಾರ್ಥಿಗಳು ಉದ್ಯೋಗ ಹುಡುಕುವ ಬದಲು ತಮ್ಮ ಸ್ವಂತ ಉದ್ದಿಮೆ ಸ್ಥಾಪಿಸಿ ಜನರಿಗೆ ಉದ್ಯೋಗ ನೀಡುವಂತಹ ಉದ್ಯಮಿಗಳಾಗಿ ಬೆಳೆಯಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಿಪಿಐ ಅಲಿಸಾಬ ಮಾತನಾಡಿದರು. ಪ್ರಾಚಾರ್ಯ ಅಶೋಕಕುಮಾರ ವಣಗೇರಿ ಸ್ವಾಗತಿಸಿದರು ವರ್ಷಾ ಜಿ. ಹಾಗೂ ವಿದ್ಯಾಸಾಗರ ಮೂಲಗೆ ನಿರೂಪಿಸಿದರೆ ಡಾ.ಅರುಣಕುಮಾರ ಎಲಾಲ್ ವಂದಿಸಿದರು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಈ ಸಂದರ್ಭದಲ್ಲಿ ಬಸವಕಲ್ಯಾಣ ಐಟಿಐ ಕಾಲೇಜಿನ ಪ್ರಾಚಾರ್ಯ ಶಿವಕುಮಾರ ಸ್ವಾಮಿ, ಬಸವಕಲ್ಯಾಣ ಪದವಿ ಕಾಲೇಜಿನ ಪ್ರಾಚಾರ್ಯ ದಿನೇಶ ಗಣೂರೆ, ಬಸವಕಲ್ಯಾಣ ಬಿಎಡ್ ಕಾಲೇಜಿನ ಪ್ರಾಚಾರ್ಯ ಡಾ.ಎನ್. ಸ್ವಾಮಿ, ಬಸವಕಲ್ಯಾಣ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಎನ್.ಆರ್.ಕೋಡ್ಲೆ, ಬಸವಕಲ್ಯಾಣ ಎಂಜಿನಿಯರಿಂಗ್ ಕಾಲೇಜಿನ ಪ್ರೇಮಸಾಗರ ಪಾಟೀಲ, ಋಷಿಕೇಶ ಭೂಸಾರೆ, ಶಂಕರ ಆಗರಗಿ ಮತ್ತು ಎಲ್ಲಾ ವಿಭಾಗದ ಮುಖ್ಯಸ್ಥರು ಹಾಗೂ ಎಲ್ಲಾ ಕಾಲೇಜಿನ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.