ವಿದ್ಯಾರ್ಥಿಗಳಿಗೆ ಸ್ಪಷ್ಟ ಗುರಿ ಅಗತ್ಯ: ಶಾಲಿನಿ ಖನ್ನಾ

KannadaprabhaNewsNetwork |  
Published : Nov 15, 2026, 02:30 AM IST
ಎAಡಿಕೆ13ಎಸ್‌ಪಿಟಿ1,2 ಮತ್ತು3: ಸೋಮವಾರಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇಲ್ಲಿನ ಸ್ತಿçà ಶಕ್ತಿ ಭವನದ ಸಭಾಂಗಣದಲ್ಲಿ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಶುಕ್ರವಾರ ಉದ್ಯೋಗ ಮೇಳ ನಡೆಯಿತು. | Kannada Prabha

ಸಾರಾಂಶ

ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇಲ್ಲಿನ ಸ್ತ್ರೀ ಶಕ್ತಿ ಭವನದ ಸಭಾಂಗಣದಲ್ಲಿ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಶುಕ್ರವಾರ ಉದ್ಯೋಗ ಮೇಳ ನಡೆಯಿತು.

ಸೋಮವಾರಪೇಟೆ: ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇಲ್ಲಿನ ಸ್ತ್ರೀ ಶಕ್ತಿ ಭವನದ ಸಭಾಂಗಣದಲ್ಲಿ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಶುಕ್ರವಾರ ಉದ್ಯೋಗ ಮೇಳ ನಡೆಯಿತು.

ಸಂಪನ್ಮೂಲ ವ್ಯಕ್ತಿಗ, ಮಡಿಕೇರಿಯ ಅತಿಥಿ ವೃಕ್ಷ ಶಿಕ್ಷ ಸಂಸ್ಥೆಯ ಸ್ಥಾಪಕ ಶಾಲಿನಿ ಖನ್ನಾ ಚಾರ್ಲ್ಸ್ ಮಾತನಾಡಿ,ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟ ಗುರಿ ಹೊಂದಿ, ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಬೇಕು.ಸರಕಾರ ಒದಗಿಸುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕು. ಆಗ ಮಾತ್ರ ಉತ್ತಮ ಉದ್ಯೋಗ ಪಡೆಯಲು ಸಾಧ್ಯ ಎಂದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಮಾತನಾಡಿ,ನಿರುದ್ಯೋಗ ಎಂಬುದು ಸಮಸ್ಯೆಯಲ್ಲ.ಯಾವುದೇ ಉದ್ಯೋಗ ಪಡೆಯಬೇಕಾದರೆ ನಿರಂತರ ಶ್ರಮವೂ ಅಗತ್ಯ ಎಂದರು.ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತರಾಜು ಮಾತನಾಡಿ, ಕ್ಷೇತ್ರದ ಶಾಸಕರ ಪ್ರಯತ್ನದಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಅನೇಕ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ. ಶಿಕ್ಷಣವು ಜೀವನದಲ್ಲಿ ನಮ್ಮನ್ನು ಎಂದಿಗೂ ಕೈ ಬಿಡುವುದಿಲ್ಲ.ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉದ್ಯೋಗ ಪಡೆದುಕೊಳ್ಳಬೇಕೆಂದರು.

ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರು,ಜಿಲ್ಲಾ ಉದ್ಯೋಗಾಧಿಕಾರಿ ಮಂಜುನಾಥ್, ಸುಮಾರು 10ಕ್ಕೂ ವಿವಿದ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.ಚಿತ್ರ : ಸೋಮವಾರಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇಲ್ಲಿನ ಸ್ತಿçà ಶಕ್ತಿ ಭವನದ ಸಭಾಂಗಣದಲ್ಲಿ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಶುಕ್ರವಾರ ಉದ್ಯೋಗ ಮೇಳ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಿಲ್ಟರ್‌ ಮಾಡದೇ ಕಲುಷಿತ ನೀರು ಪೂರೈಕೆ ?
ಚಳಿಗಾಲದ ಅಧಿವೇಶನಕ್ಕೆ ಹೆಸ್ಕಾಂ ಸಕಲ ಸಿದ್ಧತೆ