ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ಅಧ್ಯಯನದ ಜೊತೆಗೆ ಸಮಕಾಲೀನ ಅಗತ್ಯಗಳಿಗೆ ಪೂರಕವಾದ ಜ್ಞಾನವನ್ನು ಹೊಂದುವುದು ಅಗತ್ಯ ಎಂದು ಬೆಂ.ಗ್ರಾ. ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಬಾಲಗುರುಮೂರ್ತಿ ಹೇಳಿದರು.
ಎಸ್‌ಡಿಯುಇಟಿ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಸಂಸ್ಥೆಯ ಪ್ರಧಾನ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ವಿವಿಧ ಹಂತಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರಿಸರಸ್ನೇಹಿ ವಾತಾವರಣದಲ್ಲಿ ಕಲಿಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗಿದೆ ಎಂದು ಹೇಳಿದರು.
ಇದೇ ವೇಳೆ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಗಳಲ್ಲಿ ಅಧ್ಯಯನ ಮಾಡಿ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ಕಳೆದ 3 ವರ್ಷಗಳ ಅವಧಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೆ.ನಾಗೇಂದ್ರಸ್ವಾಮಿ, ಲಯನ್ಸ್ ಪ್ರಾಂತೀಯ ಅಧ್ಯಕ್ಷ ಎಂ.ಆರ್.ಶ್ರೀನಿವಾಸ್, ಪ್ರಾಂಶುಪಾಲ ಮಹಂತೇಶಪ್ಪ, ಮುಖ್ಯಶಿಕ್ಷಕ ಜಿಯಾಉಲ್ಲಾಖಾನ್, ಎಸ್‌ಡಿಯುಐಆರ್‌ಎಸ್ ಪ್ರಾಂಶುಪಾಲ ಧನಂಜಯ್, ಐಟಿಐ ಕಾಲೇಜು ಪ್ರಾಂಶುಪಾಲ ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.7ಕೆಡಿಬಿಪಿ8-
ದೊಡ್ಡಬಳ್ಳಾಪುರದ ಶ್ರೀ ದೇವರಾಜ ಅರಸು ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಗಳ ವಾರ್ಷಿಕೋತ್ಸವ ಸಮಾರಂಭಕ್ಕೆ ಜೆ.ರಾಜೇಂದ್ರ ಚಾಲನೆ ನೀಡಿದರು.