ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಮೈಗೂಡಿಸಿಕೊಳ್ಳಬೇಕು: ಬಿಇಒ ವಿ.ಈ.ಉಮಾ

KannadaprabhaNewsNetwork | Published : Mar 3, 2025 1:48 AM

ಸಾರಾಂಶ

ಜೀವನದಲ್ಲಿ ಬೆಳಗ್ಗೆಯಿಂದ ರಾತ್ರಿವರೆಗೂ ತರ್ಕ, ಸಿದ್ಧಾಂತಗಳನ್ನು ಮಾಡುತ್ತವೇ ಬದುಕುತ್ತಿದ್ದೇವೆ. ವಿದ್ಯಾರ್ಥಿಗಳಿಗೂ ವೈಜ್ಞಾನಿಕ ಚಿಂತನೆಗಳು ಬರಬೇಕೆಂಬುದು ಆಶಯ. ಗ್ರಾಮೀಣ ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಮೂಡಲಿ ಎನ್ನುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ನಡೆಯಬೇಕಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ಹೋಬಳಿ ಮಟ್ಟದಲ್ಲಿ ನಡೆಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಮನೋಭಾವ ರೂಢಿಸಿಕೊಂಡು ವೈಜ್ಞಾನಿಕ ಚಿಂತನೆ ಮೈಗೂಡಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ.ಉಮಾ ತಿಳಿಸಿದರು.

ತಾಲೂಕಿನ ಅಮೃತೇಶ್ವರನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕಸಬಾ ಹೋಬಳಿ ಮಟ್ಟದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ನಡೆದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಪ್ರಶ್ನೆ ಮಾಡದೇ ಯಾವುದನ್ನೂ ಒಪ್ಪಿಕೊಳ್ಳುವುದಿಲ್ಲ ಎನ್ನುವ ನಿರ್ಧಾರಕ್ಕೆ ಬರಬೇಕೆಂದು ಕರೆ ನೀಡಿದರು.

ಭಾರತೀಯ ವಿಜ್ಞಾನಿ ಸಿ.ವಿ.ರಾಮನ್ ವಿಜ್ಞಾನಕ್ಕೆ ಹೊಸ ಅರ್ಥವನ್ನು ಕಲ್ಪಿಸುವ ಜೊತೆಗೆ ಭೌತಶಾಸ್ತ್ರ ವಿಭಾಗದಲ್ಲಿ ರಾಮನ್ ಮರಿಣಾಮ ಎಂಬ ತತ್ವ, ಸಿದ್ಧಾಂತಗಳನ್ನು ಸಮರ್ಪಣೆ ಮಾಡಿದ ದಿನವನ್ನು 1982ರಿಂದ ವಿಜ್ಞಾನ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ನೋಬಲ್ ಪ್ರಶಸ್ತಿ ಪಡೆದ ಪ್ರಥಮ ಭಾರತೀಯರು ಸಿ.ವಿ.ರಾಮನ್ ಆಗಿದ್ದಾರೆಂದು ಸ್ಮರಿಸಿದರು.

ಜೀವನದಲ್ಲಿ ಬೆಳಗ್ಗೆಯಿಂದ ರಾತ್ರಿವರೆಗೂ ತರ್ಕ, ಸಿದ್ಧಾಂತಗಳನ್ನು ಮಾಡುತ್ತವೇ ಬದುಕುತ್ತಿದ್ದೇವೆ. ವಿದ್ಯಾರ್ಥಿಗಳಿಗೂ ವೈಜ್ಞಾನಿಕ ಚಿಂತನೆಗಳು ಬರಬೇಕೆಂಬುದು ಆಶಯ. ಗ್ರಾಮೀಣ ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಮೂಡಲಿ ಎನ್ನುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ನಡೆಯಬೇಕಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ಹೋಬಳಿ ಮಟ್ಟದಲ್ಲಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.

ಶಿಕ್ಷಣ ಸಂಯೋಜಕ ಯೋಗನಂದ್ ಮಾತನಾಡಿ, ವಿಜ್ಞಾನ ಇಲ್ಲದೇ ಬದುಕಿಲ್ಲ. ವಿಜ್ಞಾನದ ಅರಿವು ಮೂಡಿಸಲು ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿಯಾಗಿದೆ. ವಿದ್ಯಾರ್ಥಿಗಳಲ್ಲಿ ಅವಿಷ್ಕಾರ ಮನೋಭಾವ ಬೆಳೆಸಿಕೊಳ್ಳಬೇಕು. ಕಲಿಕೆ ನಿರಂತರವಾಗಿರಬೇಕು ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್ ಮಾತನಾಡಿ, ಯುವ ಪಡೆ ವಿಶ್ವಮಟ್ಟದ ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ವಿಶ್ವದ ನಾಯಕನ್ನಾಗಲಿ ಎನ್ನುವ ಗುರಿಯನ್ನು ಪ್ರಸಕ್ತ ವರ್ಷದಲ್ಲಿ ಹೊಂದಲಾಗಿದೆ. ವಿಕಾಶವಾಗುತ್ತಿರುವ ಭಾರತಕ್ಕೆ ವಿಜ್ಞಾನ ಕ್ಷೇತ್ರದಲ್ಲಿ ಪ್ರಪಂಚಕ್ಕೆ ನಾಯಕರಾಗಬೇಕೆಂಬುವ ಅವಕಾಶ ಪ್ರತಿಯೊಬ್ಬರಗಿದೆ. ಪ್ರತಿಯೊಬ್ಬರು ಸಾಧನೆ ಮಾಡಬೇಕು ಎಂದರು.

ವಿವಿಧ ಶಾಲೆಗಳಿಂದ ನೂರಾರು ವಿದ್ಯಾರ್ಥಿಗಳು ಆಗಮಿಸಿ ವಿಜ್ಞಾನ ವಸ್ತು ಪ್ರದರ್ಶನ ಯಶಸ್ವಿಗೊಳಿಸಿದರು. ಭೌತಶಾಸ್ತ್ರ ವಿಭಾಗ ಪ್ರಾಧ್ಯಾಪಕ ರೇವಣ್ಣ ವಿಜ್ಞಾನದ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ ಮರಿಸ್ವಾಮಿ, ಉಪಾಧ್ಯಕ್ಷೆ ಪುಷ್ಪಲತಾ, ಪಿಡಿಒ ನಿರ್ಮಲ, ಸದಸ್ಯ ಎ.ಎಸ್.ಪುಟ್ಟರಾಜು, ಭಾಗ್ಯಮ್ಮ, ಜಯಮ್ಮ, ಅಮೃತ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ರಾಜಶೇಖರ್‌ಗೌಡ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಆದರ್ಶ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಟಿ.ಎಂ.ಪ್ರಕಾಶ್ ಸೇರಿದಂತೆ ಇತರರು ಇದ್ದರು.

Share this article