ಕನ್ನಡಪ್ರಭ ವಾರ್ತೆ ನಾಪೋಕ್ಲು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ನಾಪೋಕ್ಲು ವಲಯ ಮತ್ತು ಅರುಣ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲಾ ವಿಭಾಗ ಚೇರಂಬಾಣೆ ಆಶ್ರಯದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಶಿಬಿರಾಧಿಕಾರಿ ನಂದಕುಮಾರ್ ಮಾತನಾಡಿ, ಇದುವರೆಗೆ ರಾಜ್ಯದ 17,848 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮ ನಡೆಸಿ 21 ಲಕ್ಷಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಜನಜಾಗೃತಿ ವೇದಿಕೆ ಮುಖೇನ ಸಮುದಾಯದ ಸಹಭಾಗಿತ್ವದೊಂದಿಗೆ ಇದುವರೆಗೆ 1903 ಮದ್ಯವರ್ಜನ ಶಿಬಿರಗಳನ್ನು ನಡೆಸಿ 1 ಲಕ್ಷದ 50 ಸಾವಿರ ಮಂದಿಯನ್ನು ವ್ಯಸನಮುಕ್ತಗೊಳಿಸಲಾಗಿದೆ ಎಂದರು.ವಿಶ್ವ ಆರೋಗ್ಯ ಸಂಸ್ಥೆಯ ಕಳೆ ಸಂಶೋಧನೆ ಪ್ರಕಾರ ದೇಶದಲ್ಲಿ ಒಂದು ವರ್ಷಕ್ಕೆ 5 ಲಕ್ಷ ಜನರು ಮದ್ಯಪಾನದಿಂದ ಮರಣ ಹೊಂದಿದರೆ 14.5 ಲಕ್ಷ ಜನರು ಮಾದಕ ದ್ರವ್ಯ, ಮಾದಕ ವ್ಯಸನ ಅಥವಾ ಇನ್ನಿತರ ಚಟಗಳಿಂದ ಬಲಿಯಾಗುತ್ತಿರುವುದು ಶೋಚನೀಯ ಎಂದರು.
ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿ.ಯು ವಿಭಾಗದ 65 ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡರು.