ಕನ್ನಡಪ್ರಭ ವಾರ್ತೆ ರಾಮನಗರ
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 25ರಿಂದ ಪ್ರಾರಂಭವಾಗಿರುವ ಛಾತ್ರೋನ್ ಕಿ ಗೂಂಜ್ ಅಭಿಯಾನ ಆಗಸ್ಟ್ 9ರವರೆಗೆ 40 ದಿನ ದೇಶದಾದ್ಯಂತ ನಡೆಯಲಿದೆ. ಈ ಅಭಿಯಾನದಲ್ಲಿ ಕರ್ನಾಟಕದ ಪ್ರತಿಯೊಂದು ಜಿಲ್ಲೆಗಳಲ್ಲಿ ನೀಟ್ ಪರೀಕ್ಷೆಯಲ್ಲಿ ತೊಂದರೆ ಅನುಭವಿಸಿರುವ ವಿದ್ಯಾರ್ಥಿಗಳು ಭಾಗಿಯಾಗಬೇಕು ಎಂದರು.
ನೀಟ್ ಪರೀಕ್ಷೆಯನ್ನು ಜಾರಿಗೆ ತಂದ ಕೇಂದ್ರ ಸರ್ಕಾರ ಅದನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಕಳೆದ 10 ವರ್ಷಗಳಲ್ಲಿ 89 ಬಾರಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿ ಅವ್ಯವಹಾರ ನಡೆದಿದೆ. ಇದರಿಂದ 6.5 ಕೋಟಿಗೂ ಹೆಚ್ಚು ಅಭ್ಯರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಿದೆ. ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದಕ್ಕೆಲ್ಲ ಯಾರು ಹೊಣೆಗಾರರು ಎಂದು ಪ್ರಶ್ನಿಸಿದರು.ಇಷ್ಟೇ ಅಲ್ಲದೆ ನೀಟ್ ಪರೀಕ್ಷೆಗಾಗಿ ಒಂದು ವರ್ಷದಿಂದ ವಿದ್ಯಾರ್ಥಿಗಳು ತಯಾರಿ ನಡೆಸುತ್ತಾರೆ. ಪದೇ ಪದೇ ಪರೀಕ್ಷಾ ಅಕ್ರಮಗಳು ವಿದ್ಯಾರ್ಥಿಗಳಲ್ಲಿ ವಿಶ್ವಾಸದ ಕೊರತೆಯನ್ನು ಸೃಷ್ಟಿಸಿವೆ. ಲಕ್ಷಾಂತರ ಆಕಾಂಕ್ಷಿಗಳ ಭವಿಷ್ಯವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಆರೋಪಿಸಿದರು.
ಹಲವು ವರ್ಷಗಳ ಸಿದ್ಧತೆಯ ಬಳಿಕ ಸುಮಾರು 23 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದಾರೆ. ಆ ಪರೀಕ್ಷೆಯನ್ನು ಕೂಡ ಸರಿಯಾಗಿ ನಡೆಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಇದು ಅತ್ಯಂತ ಕಠಿಣ ಮತ್ತು ಮಹತ್ವದ ಪರೀಕ್ಷೆಯಾಗಿದ್ದರೂ, ಅದನ್ನು ಸಮರ್ಪಕವಾಗಿ ನಡೆಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.
ಈ ಅಭಿಯಾನವು ಪಕ್ಷಾತೀತವಾಗಿ ದೇಶದಾದ್ಯಂತ 28 ನಗರಗಳಲ್ಲಿ ನಡೆಯಲಿದ್ದು, 28 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಅದರಂತೆ, ಬೆಂಗಳೂರಿನಲ್ಲಿ ಅಭಿಯಾನದ ಜವಾಬ್ದಾರಿ ಯುವ ಕಾಂಗ್ರೆಸ್‌ಗೆ ವಹಿಸಲಾಗಿದೆ. ಅಭಿಯಾನದ ಭಾಗವಾಗಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಶೀಘ್ರದಲ್ಲಿ ಬೆಂಗಳೂರಿಗೆ ಬರಲಿದ್ದಾರೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ್ , ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆ ಕೋಕಿಲಾ ರಾಣಿ, ಎನ್ ಎಸ್ ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ , ಪದಾಧಿಕಾರಿಗಳಾದ ಸುಫಿಯಾ, ಪ್ರವೀಣ್ , ಪುನೀತ್ , ಆದರ್ಶ, ಮುಖಂಡರಾದ ಸಿಎನ್ ಆರ್ ವೆಂಕಟೇಶ್ , ಕಾಂತರಾಜು, ವೆಂಕಟೇಶ್ , ಪೂರ್ಣಚಂದ್ರ ಕೀಕರ್ ಇದ್ದರು.
- ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು. ಪೇಪರ್ ಲೀಕ್ ಮಾಫಿಯಾ, ವೆಂಡರ್ ಗಳು, ಅಧಿಕಾರಿಗಳು ಮತ್ತು ರಾಜಕೀಯ ರಕ್ಷಣೆ ಜಾಲಗಳೊಂದಗೆ ಅವರಿಗಿರುವ ಸಂಪರ್ಕದ ಬಗ್ಗೆ ತನಿಖೆಯಾಗಬೇಕು.
- ನಿರ್ದಿಷ್ಟ ವಾರ್ಷಿಕ ಪರೀಕ್ಷೆ ಮತ್ತು ನೇಮಕಾತಿ ಕ್ಯಾಲೆಂಡರ್ ಜಾರಿಗೆ ತರಬೇಕು. ಪರೀಕ್ಷಾ ದಿನಾಂಕಗಳು, ಫಲಿತಾಂಶದ ದಿನಾಂಕಗಳು ಮತ್ತು ಉದ್ಯೋಗಕ್ಕೆ ಸೇರುವ ಸಮಯವನ್ನು ಮುಂಚಿತವಾಗಿ ಘೋಷಿಸಬೇಕು. ಮತ್ತು ಅದನ್ನು ಕಡ್ಡಾಯವಾಗಿ ಪಾಲಿಸಬೇಕು.