ಸರ್ಕಾರಿ ಶಾಲೆಗಳ ವಿಲೀನ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ

KannadaprabhaNewsNetwork |  
Published : Jan 31, 2025, 12:50 AM IST
30ಎಚ್ಎಸ್ಎನ್18 : ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು. | Kannada Prabha

ಸಾರಾಂಶ

ರಾಜ್ಯದ ಕಾಂಗ್ರೆಸ್ ಸರ್ಕಾರವು ಸಂಯೋಜನೆ ಹೆಸರಿನಲ್ಲಿ ರಾಜ್ಯದ ೪೨೦೦ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ ನಡೆಯನ್ನು ವಿರೋಧಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ನಗರದ ಹೇಮಾವತಿ ಪ್ರತಿಮೆ ಮುಂಭಾಗ ಗುರುವಾರ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ೪ ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ಈ ನಡೆಯನ್ನು ಅತ್ಯುಗ್ರ ಪದಗಳಲ್ಲಿ ಖಂಡಿಸುತ್ತದೆ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ರಾಜ್ಯದ ಕಾಂಗ್ರೆಸ್ ಸರ್ಕಾರವು ಸಂಯೋಜನೆ ಹೆಸರಿನಲ್ಲಿ ರಾಜ್ಯದ ೪೨೦೦ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ ನಡೆಯನ್ನು ವಿರೋಧಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ನಗರದ ಹೇಮಾವತಿ ಪ್ರತಿಮೆ ಮುಂಭಾಗ ಗುರುವಾರ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಕಾರ್ಯಕರ್ತರಾದ ಸುಷ್ಮಾ ಮಾತನಾಡಿ, ಕಡಿಮೆ ಹಾಜರಾತಿ ಇರುವ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜನೆಗೊಳಿಸುವುದಾಗಿ ಸರ್ಕಾರವು ತಿಳಿಸಿದ್ದು, ಈ ಮೂಲಕ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ೪ ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ಈ ನಡೆಯನ್ನು ಅತ್ಯುಗ್ರ ಪದಗಳಲ್ಲಿ ಖಂಡಿಸುತ್ತದೆ ಎಂದರು.

ನಂತರ ಹಿಂದಿನ ಬಿಜೆಪಿ ರಾಜ್ಯ ಸರ್ಕಾರವು ಇದೇ ನೆಪವೊಡ್ಡಿ ಎನ್‌ಇಪಿ-೨೦೨೦ರ ಅಡಿಯಲ್ಲಿ ೧೩,೮೦೦ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿತ್ತು. ಅದರ ವಿರುದ್ಧ ರಾಜ್ಯದ ವಿದ್ಯಾರ್ಥಿಗಳು ಎಐಡಿಎಸ್‌ಒ ನೇತೃತ್ವದಲ್ಲಿ ಬೃಹತ್ ಆಂದೋಲನ ನಡೆಸಿ ೩೫ ಲಕ್ಷಕ್ಕೂ ಹೆಚ್ಚು ಸಹಿಗಳನ್ನು ಸಂಗ್ರಹಿಸುವುದರ ಮೂಲಕ ಶಾಲೆಗಳನ್ನ ರಕ್ಷಿಸಿದ್ದರು. ಆದರೆ ಈಗ ಮತ್ತೆ ಸರ್ಕಾರಿ ಶಾಲೆಗಳನ್ನು ಮುಚ್ಚುವುದರ ಮುಖಾಂತರ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದ ರೈತ-ಕಾರ್ಮಿಕರು ಹಾಗೂ ಜನ ಸಾಮಾನ್ಯರಿಗೆ ವಿಶ್ವಾಸದ್ರೋಹವೆಸಗಿದೆ ಎಂದು ದೂರಿದರು. ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಿತ್ತುಕೊಳ್ಳುವ ಹುನ್ನಾರ ಇದಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು, "ನೆಗಡಿ ಬಂದರೆ ಮೂಗು ಕತ್ತರಿಸಿದಂತೆ "! ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕು ಹಾಗೂ ಕೂಡಲೇ ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಅವಶ್ಯಕ ಸೌಲಭ್ಯಗಳನ್ನು ನೀಡಿ ರಕ್ಷಿಸಬೇಕೆಂದು ಎಐಡಿಎಸ್‌ಓ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ ಹಾಗೂ ಇದರ ವಿರುದ್ಧ ಪ್ರಬಲ ಪ್ರತಿರೋಧ ಚಳವಳಿ ನಡೆಸಬೇಕೆಂದು ರಾಜ್ಯದ ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಣಪ್ರೇಮಿ ಜನತೆಗೆ ಕರೆ ನೀಡುತ್ತದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಸಹ ಸಂಚಾಲಕಿ ಚೈತ್ರ, ರಾಜ್ಯ ಸಮಿತಿಯ ಕಾರ್ಯದರ್ಶಿಮಂಡಳಿ ಸದಸ್ಯರಾದ ನಿತಿನ್, ಪುರುಷೋತ್ತಮ್, ಮಮತಾ, ಶಾಮಲಾ, ಮೋಹನ್, ರಾಹುಲ್,ನವೀನ್, ವೀರೇಶ್, ನಾಗಶ್ರೀ ಹಾಗೂ ವಿವಿಧ ಕಾಲೇಜಿನ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು.

---------------------------------------------------------------------

PREV

Recommended Stories

ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!