ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

KannadaprabhaNewsNetwork |  
Published : Jul 26, 2024, 01:40 AM IST
೨೫ಕೆಎನ್‌ಕೆ-೪                                    ಕನಕಗಿರಿಯ ವಾಲ್ಮೀಕಿ ವೃತ್ತದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟಿಸಿದರು.  | Kannada Prabha

ಸಾರಾಂಶ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎಸ್‌ಎಫ್‌ಐ ಸಂಘಟನೆ ಸಮ್ಮುಖದಲ್ಲಿ ನೂರಾರು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಗುರುವಾರ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಕನಕಗಿರಿ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎಸ್‌ಎಫ್‌ಐ ಸಂಘಟನೆ ಸಮ್ಮುಖದಲ್ಲಿ ನೂರಾರು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಗುರುವಾರ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಂಘಟನೆಯ ತಾಲೂಕು ಅಧ್ಯಕ್ಷ ಗ್ಯಾನೇಶ ಕಡಗದ ಮಾತನಾಡಿ, ಶಾಲಾ-ಕಾಲೇಜು ಆರಂಭವಾಗಿ ೨ ತಿಂಗಳು ಕಳೆದರೂ ವಿದ್ಯಾರ್ಥಿಗಳಿಗೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲ. ಈವರೆಗೂ ಮೆಟ್ರಿಕ್ ಪೂರ್ವ ವಸತಿ ನಿಲಯದ ಆಯ್ಕೆ ಪಟ್ಟಿ ಪ್ರಕಟಿಸದೆ ಕಾಲಹರಣ ಮಾಡುತ್ತಿದ್ದರಿಂದ ವಿದ್ಯಾರ್ಥಿಗಳಿಂದ ತೀವ್ರ ತೊಂದರೆಯಾಗಿದೆ. ರಾಜ್ಯದಲ್ಲಿ ೧೫೦ ಹೊಸ ಹಾಸ್ಟೆಲ್‌ಗಳು ಮಂಜೂರಾಗಿದ್ದು, ಕೂಡಲೇ ಕನಕಗಿರಿಯಲ್ಲಿ ಬಿಸಿಎಂ ಹಾಸ್ಟೆಲ್ ಕಾರ್ಯಾರಂಭಕ್ಕೆ ಮುಂದಾಗಬೇಕು. ಪಿಯು ಹಾಗೂ ಹೈಸ್ಕೂಲ್‌ಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನಾಕಾರರು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತಹಶೀಲ್ದಾರ ವಿಶ್ವನಾಥ ಮುರುಡಿ ಮನವಿ ಸ್ವೀಕರಿಸಿ ಮಾತನಾಡಿ, ಬಸ್ ವ್ಯವಸ್ಥೆ, ಶಾಲಾ-ಕಾಲೇಜುಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವ ಕುರಿತು ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಸರಿಪಡಿಸಲು ಮುಂದಾಗುವುದಾಗಿ ತಿಳಿಸಿದರು. ಇದಕ್ಕೆ ಒಪ್ಪಿದ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.

ಈ ವೇಳೆ ಪಪಂ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಗ್ರೇಡ್-೨ ತಹಸೀಲ್ದಾರ ವಿ.ಎಚ್. ಹೊರಪೇಟೆ, ಸಂಘಟಕರಾದ ನೀಲಕಂಠ ಬಡಿಗೇರ, ಬಾಲಾಜಿ, ಶರೀಫ, ಹನುಮಂತಪ್ಪ ಮುಕ್ಕುಂಪಿ, ಶಿವಕುಮಾರ ಈಚನಾಳ, ನಾಗರಾಜ ರಮೇಶ ಇತರರು ಇದ್ದರು.

ಕೇಂದ್ರ ಬಜೆಟ್ ವಿರೋಧಿಸಿ ಪ್ರತಿಭಟನೆ:ಕೇಂದ್ರ ಸರ್ಕಾರ ಮಂಡನೆ ಮಾಡಿರುವ ಬಜೆಟ್ ದೇಶ ಮತ್ತು ಬಡವರ ವಿರೋಧಿಯಾಗಿದ್ದು, ವಿಭಜನೆ ಮಾಡುವ ಅಂಶಗಳನ್ನು ಒಳಗೊಂಡಿದೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಜಿಲ್ಲಾ ಸಮಿತಿ ಕೊಪ್ಪಳ ನಗರದಲ್ಲಿ ಪ್ರತಿಭಟನೆ ನಡೆಸಿತು.ನಗರದ ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸುಂಕಪ್ಪ ಗದಗ, ಹುಸೇನಪ್ಪ ಕೆ., ಮರಿನಾಗಪ್ಪ ಡಗ್ಗಿ, ಬಸವರಾಜ ಮೇಳಿ, ಹುಲುಗಪ್ಪ ಗೋಕಾವಿ, ಅಮರವ್ವ ಗದಗ, ಹುಸೇನ ಸಾಬ್ ನದಾಫ, ಬಸವರಾಜ ಬಿಜಕಲ, ಶಾಂತವ್ವ ಬೆಂಗಳೂರಮನಿ, ಸುಂಕಮ್ಮ ಕುಕುನೂರು, ಹುಸೇನವ್ವ ಅರಸನ್ನ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!