ದೊಡ್ಡಬಳ್ಳಾಪುರ: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರು ಮತ್ತು ವಿದ್ಯಾರ್ಥಿಗಳ ಪಾತ್ರ ಅನನ್ಯವಾದದ್ದು ಎಂದು ದರ್ಗಾಜೋಗಿಹಳ್ಳಿ ಗ್ರಾಪಂ ಅಧ್ಯಕ್ಷೆ ಶಶಿಕಲಾ ಹೇಳಿದರು
ದೊಡ್ಡಬಳ್ಳಾಪುರ: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರು ಮತ್ತು ವಿದ್ಯಾರ್ಥಿಗಳ ಪಾತ್ರ ಅನನ್ಯವಾದದ್ದು ಎಂದು ದರ್ಗಾಜೋಗಿಹಳ್ಳಿ ಗ್ರಾಪಂ ಅಧ್ಯಕ್ಷೆ ಶಶಿಕಲಾ ಹೇಳಿದರು.
ಇಲ್ಲಿನ ಶಾಂತಿನಗರ, ದರ್ಗಾಜೋಗಿಹಳ್ಳಿಯ ಶ್ರೀ ದೇವರ ದಾಸಿಮಯ್ಯ ಮಿತ್ರ ಮಂಡಲಿ ನೇಕಾರರ ಸಂಘ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್ ಸಹಯೋಗದಲ್ಲಿ 80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ ಪ್ರತಿಭಾ ಪುರಸ್ಕಾರ, ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೇಕಾರ ಸಮುದಾಯದ ಪ್ರತಿಭೆಗಳು ಸಮಾಜದ ವಿವಿಧ ಹಂತಗಳಲ್ಲಿ ಗುರ್ತಿಸಿಕೊಳ್ಳುತ್ತಿರುವುದು ವಿಶೇಷ. ಅವರಿಗೆ ಪ್ರೋತ್ಸಾಹ ದೊರೆಯಬೇಕು ಎಂದರು.
ಲಯನ್ಸ್ ಕನ್ನಡ ಮತ್ತು ಸಂಸ್ಕೃತಿ ಜಿಲ್ಲಾ ಅಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ದೇಶ ಅತ್ಯಂತ ಪ್ರಬಲ ಶಕ್ತಿಯಾಗಿ ಬೆಳೆಯುತ್ತಿರುವುದು ಭಾರತೀಯರಾದ ನಮ್ಮೆಲ್ಲರಿಗೂ ಸಂತಸದ ವಿಚಾರ. ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ದೇಶವನ್ನು ಪ್ರಗತಿಪರವಾಗಿ ಕಟ್ಟುವ ಕೆಲಸ ಆಗಬೇಕು. ಮನುಷ್ಯ ಸಂಬಂಧಗಳನ್ನು ಗಟ್ಟಿಗೊಳಿಸುವ ಮೂಲಕ ಸ್ವಾತಂತ್ರ್ಯದ ಅರ್ಥವನ್ನು ಹೆಚ್ಚು ಸಾಕಾರಗೊಳಿಸಲು ಸಾಧ್ಯ ಎಂದು ಹೇಳಿದರು.
ಪ್ರತಿಭಾ ಪುರಸ್ಕಾರ, ನೋಟ್ ಬುಕ್ ವಿತರಣೆ:
ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದು ತೇರ್ಗಡೆಯಾದ 15 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. 150 ವಿದ್ಯಾರ್ಥಿಗಳಿಗೆ ನೋಟ್‌ಪುಸ್ತಕ, ಲೇಖನಿ, ಪೆನ್ಸಿಲ್ ಬಾಕ್ಸ್‌ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಲಯನ್ಸ್ ವಲಯ ಅಧ್ಯಕ್ಷ ಡಾ.ಎಂ.ಶ್ರೀನಿವಾಸರೆಡ್ಡಿ, ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಸಿ.ನಾಗರಾಜ್ ಮಾತನಾಡಿದರು. ಸಂಘದ ಅಧ್ಯಕ್ಷ ಜಿ.ರಾಮಮೂರ್ತಿ, ಉಪಾಧ್ಯಕ್ಷ ಎನ್.ರಾಮಣ್ಣ, ಕಾರ್ಯಾಧ್ಯಕ್ಷ ಈ.ಬಾಬು, ಸೋಮಶೇಖರ್, ಪ್ರಧಾನ ಕಾರ‍್ಯದರ್ಶಿ ಎನ್.ರಾಮಚಂದ್ರ, ಖಜಾಂಚಿ ಮುನಿನಾರಾಯಣಸ್ವಾಮಿ, ಸಹಕಾರ‍್ಯದರ್ಶಿ ವಿಜಯಕುಮಾರ್, ಆರ್.ಶೋಭಾ, ಲಯನ್ಸ್ ಕ್ಲಬ್ ಖಜಾಂಚಿ ಹರ್ಷ, ಮಂಜುನಾಥ್, ಎಲ್.ಎನ್.ನಾಗರಾಜ್, ಸರಿತ, ಕಾವ್ಯ, ಮುಖೇಶ್, ದೇವರ ದಾಸಿಮಯ್ಯ ಮಿತ್ರ ಮಂಡಲಿ ನೇಕಾರರ ಸಂಘದ ನಿರ್ದೇಶಕರು, ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಆವರಣದಲ್ಲಿ ಧ್ವಜಾರೋಹಣ:
ಸ್ವಾತಂತ್ರ್ಯ ದಿನದ ಅಂಗವಾಗಿ ಸಂಘದ ಆವರಣದಲ್ಲಿ ಬೆಳಗ್ಗೆ ರಾಷ್ಟ್ರಧ್ವಜಾರೋಹಣ ನಡೆಯಿತು. ಸಂಘದ ಅಧ್ಯಕ್ಷ ರಾಮಮೂರ್ತಿ ಧ್ವಜಾರೋಹಣ ನೆರವೇರಿಸಿದರು. ಸಿಹಿ ಹಂಚಿ ಸಂಭ್ರಮಿಸಲಾಯಿತು.
16ಕೆಡಿಬಿಪಿ1-
ದೊಡ್ಡಬಳ್ಳಾಪುರದ ಶ್ರೀ ದೇವರ ದಾಸಿಮಯ್ಯ ಮಿತ್ರ ಮಂಡಲಿ ನೇಕಾರರ ಸಂಘದ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.