ವಿದ್ಯಾರ್ಥಿಗಳು ಕಾನೂನು ಪಾಲಿಸಿ: ಪಾಟೀಲ

KannadaprabhaNewsNetwork |  
Published : Nov 14, 2026, 02:30 AM IST
ನವಲಗುಂದ ಪಟ್ಟಣದ ಮಾಡಲ್ ಹೈಸ್ಕೂಲ್‌ನಲ್ಲಿ ಜರುಗಿದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ನ್ಯಾಯವಾದಿ ವಿ.ಪಿ. ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ಇಂದಿನ ತಂತ್ರಜ್ಞಾನ ಮತ್ತು ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕಾನೂನಿನ ಅರಿವನ್ನು ಹೊಂದುವುದು ಅತ್ಯಂತ ಅವಶ್ಯಕವಾಗಲಿದೆ. ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಲು ಮತ್ತು ತಮ್ಮ ಹಕ್ಕು ಹಾಗೂ ಕರ್ತವ್ಯಗಳನ್ನು ಸರಿಯಾಗಿ ತಿಳಿದುಕೊಳ್ಳಲು ಕಾನೂನು ನೆರವಾಗುತ್ತದೆ.

ನವಲಗುಂದ:

ವಿದ್ಯಾರ್ಥಿಗಳು ತಮ್ಮ ಓದಿನ ಜತೆಗೆ ತಮ್ಮ ಹಕ್ಕುಗಳು ಮತ್ತು ಕಾನೂನು ಅರಿವು ಹೊಂದುವುದು ಅತ್ಯಗತ್ಯವಾಗಿದೆ ಎಂದು ಹಿರಿಯ ನ್ಯಾಯವಾದಿ ವಿ.ಪಿ. ಪಾಟೀಲ ಹೇಳಿದರು.

ಪಟ್ಟಣದ ಮಾಡಲ್ ಹೈಸ್ಕೂಲ್‌ನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಕಾನೂನು ಉಲ್ಲಂಘನೆಯಾದಾಗ ಹಾಗೂ ಅಶಾಂತಿ ವಾತಾವರಣ ಉಂಟಾದಾಗ ವಿದ್ಯಾರ್ಥಿಗಳು ಕಾನೂನು ಪಾಲಿಸಿ ಸಾಮಾಜಿಕ ಬದಲಾವಣೆಗೆ ಕಾರಣರಾಗಬೇಕು ಎಂದು ಸಲಹೆ ನೀಡಿದರು.

ಶಾಲೆಯ ಚೇರಮನ್‌ ಹಾಗೂ ಮಾಜಿ ಸಚಿವ ಕೆ.ಎನ್. ಗಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ತಂತ್ರಜ್ಞಾನ ಮತ್ತು ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕಾನೂನಿನ ಅರಿವನ್ನು ಹೊಂದುವುದು ಅತ್ಯಂತ ಅವಶ್ಯಕವಾಗಲಿದೆ. ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಲು ಮತ್ತು ತಮ್ಮ ಹಕ್ಕು ಹಾಗೂ ಕರ್ತವ್ಯಗಳನ್ನು ಸರಿಯಾಗಿ ತಿಳಿದುಕೊಳ್ಳಲು ಕಾನೂನು ನೆರವಾಗುತ್ತದೆ ಎಂದರು.

ಪ್ರಧಾನಗುರು ಜಿ.ಎಂ. ಮಾಕಣ್ಣವರ ಮಾತನಾಡಿ, ಸಾಮಾಜಿಕ ಜಾಲತಾಣಗಳನ್ನು ಎಚ್ಚರಿಕೆಯಿಂದ ಬಳಸಬೇಕು. ಅಪರಿಚಿತ ವ್ಯಕ್ತಿಗಳೊಂದಿಗೆ ನಿಮ್ಮ ಅಥವಾ ನಿಮ್ಮ ಮನೆ ಮುಖ್ಯಸ್ಥರ ವೈಯಕ್ತಿಕ ಮಾಹಿತಿ, ಫೋಟೋ ಅಥವಾ ಬ್ಯಾಂಕ್‌ ವಿವರ ಹಾಗೂ ಒಟಿಪಿ ಹಂಚಿಕೊಳ್ಳಬಾರದು ಎಂದು ಸಲಹೆ ನೀಡಿದರು.

ವಕೀಲರಾದ ಕೇಶವ ಕರ್ಜಗಿ, ಪ್ರಕಾಶ ಅಂಗಡಿ, ಜಾಂಬೋಟಿ, ಶ್ರೀಧರ, ಶಿಕ್ಷಕರಾದ ಯು.ಎಸ್. ಪೂಜಾರ, ಸಿ.ಎಂ. ಕಟಗಿ, ಎಸ್.ಎನ್. ಲಮಾಣಿ, ಜಿ.ಎಂ. ಮುಕ್ರಿ ಸೇರಿದಂತೆ ಶಿಕ್ಷಕರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಸರ್ವತೋಮುಖ ಪ್ರಗತಿಗೆ ಶ್ರಮಿಸಿ
ಎಸಿಯಾಗಿ ಪದೋನ್ನತಿ ಹೊಂದಿದ ತಹಸೀಲ್ದಾರ್‌ ಬೋಸಗಿ