ಕನ್ನಡಪ್ರಭ ವಾರ್ತೆ ಉಡುಪಿವಿದ್ಯಾರ್ಥಿಗಳು ಜಂಕ್‌ಫುಡ್ ನಂತಹ ಸತ್ವರಹಿತ ಆಹಾರದ ದಾಸರಾಗದೇ, ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು. ಶಾಲೆಗಳಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಉದ್ದೇಶದಿಂದ ಸರ್ಕಾರ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಒದಗಿಸುತ್ತಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ಡಾ.ಮಮತಾ ದೇವಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ವಿನೋದಾ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯೆ ರಶ್ಮಿ ಸಿ. ಭಟ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ., ಜಿಲ್ಲಾ ಶಿಕ್ಷಕ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಗೋವಿಂದ ಮಡಿವಾಳ, ನಗರಸಭಾ ಪೌರಾಯುಕ್ತ ರಾಯಪ್ಪ, ಕ್ಷೇತ್ರಶಿಕ್ಷಣಾಧಿಕಾರಿ ಡಾ.ಯಲ್ಲಮ್ಮ, ಪ್ರಾಂಶುಪಾಲೆ ಡಾ. ಸುಮಾ ಅತಿಥಿಗಳಾಗಿ ಭಾಗವಹಿಸಿದ್ದರು.ಜಿಲ್ಲಾ ಅಕ್ಷರದಾಸೋಹ ಪಿಎಂ ಪೋಷಣ್‌ನ ಶಿಕ್ಷಣಾಧಿಕಾರಿ ರುದ್ರೇಶ್ ಟಿ.ಆರ್. ಪ್ರಸ್ತಾವನೆಗೈದರು. ಮುಖ್ಯ ಶಿಕ್ಷಕಿ ಇಂದಿರಾ ಸ್ವಾಗತಿಸಿದರು. ತಾಲೂಕು ಅಕ್ಷರದಾಸೋಹ ಅಧಿಕಾರಿ ವಿವೇಕ ಗಾಂವ್ಕರ್ ವಂದಿಸಿದರು. ಶಿಕ್ಷಕ ರಾಮಚಂದ್ರ ಭಟ್ ನಿರೂಪಿಸಿದರು.