ಕನ್ನಡಪ್ರಭ ವಾರ್ತೆ ಕುಶಾಲನಗರ
ಅವರು ಕುಶಾಲನಗರ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜಿನ ‘ಕಲಾರಂಭ್’ ಸಾಂಸ್ಕೃತಿಕ ವೇದಿಕೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ತಮ್ಮ ಪ್ರತಿಭೆಯನ್ನು ಹೊರಗೆ ಹಾಕುವ ಮನಸ್ಥಿತಿ ಹೊಂದಿರಬೇಕು. ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರೂ ಕಾರ್ಯಕ್ರಮಗಳ ವೇದಿಕೆಯ ಬಳಕೆ ಮಾಡಿಕೊಳ್ಳುವ ಮೂಲಕ ಧನಾತ್ಮಕ ಚಿಂತನೆ ಹೊಂದಬೇಕು ಎಂದು ಹೇಳಿದರು.ಶಿಕ್ಷಣದ ಜೊತೆಗೆ ಪೂರಕ ಚಟುವಟಿಕೆಗಳೊಂದಿಗೆ ಮಕ್ಕಳ ಬೆಳವಣಿಗೆ ಸಾಧ್ಯ ಎಂದ ಶಾಸಕರು ಶೈಕ್ಷಣಿಕವಾಗಿ ಅಗತ್ಯವಿರುವ ಸಹಕಾರ ನೀಡುವ ಭರವಸೆ ವ್ಯಕ್ತಪಡಿಸಿದರು.
ಎಂಜಿಎಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಟಿ ಎ ಲಿಖಿತ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭ ವಿವೇಕಾನಂದ ಪಿಯು ಕಾಲೇಜು ಪ್ರಾಂಶುಪಾಲರಾದ ಕ್ಲಾರಾ ರೇಷ್ಮಾ, ಕಾಲೇಜಿನ ಆಡಳಿತ ಅಧಿಕಾರಿ ಮಹೇಶ್ ಅಮೀನ್, ನಂಜಪ್ಪ, ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕರಾದ ಮೋನಿಷಾ ಕಾಲೇಜು ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷ ಜೀವನ್, ಬೋಧಕ ಬೋಧಕೇತರ ಸಿಬ್ಬಂದಿ ಪೋಷಕರು ವಿದ್ಯಾರ್ಥಿಗಳು ಇದ್ದರು.