ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಬೇಕು: ಎಚ್.ಟಿ.ಮಂಜು

KannadaprabhaNewsNetwork |  
Published : Sep 17, 2026, 01:45 AM IST
16ಕೆಎಂಎನ್ ಡಿ20 | Kannada Prabha

ಸಾರಾಂಶ

ಕ್ರೀಡೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವ ಬೆಳೆಸುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಶಾಸಕ ಎಚ್.ಟಿ.ಮಂಜು ಕರೆ ನೀಡಿದರು.

ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ರೀಡಾ, ಸಾಂಸ್ಕೃತಿಕ ಹಾಗೂ ಎನ್‌ಎಸ್‌ಎಸ್ ಶಿಬಿರಗಳ ಉದ್ಘಾಟನಾ ಸಮಾರಂಭ ಮತ್ತು ಪ್ರಥಮ ಬಿ.ಎ.ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕ್ರೀಡೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವ ಬೆಳೆಸುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಸಾಧನೆ ಮಾಡುವಂತೆ ಕರೆ ನೀಡಿದರು.

ಚಿತ್ರನಟ ಕೆ.ಆರ್.ಪೇಟೆ ಶಿವರಾಜು ಮಾತನಾಡಿ, ವಿದ್ಯಾರ್ಥಿ ಜೀವನದ ಸವಿನೆನಪುಗಳು ನಮ್ಮಲ್ಲಿ ಸದಾ ಚಿರನೂತನವಾಗಿರುತ್ತವೆ. ವಿದ್ಯಾರ್ಥಿಗಳು ಕಲಿಕೆಗೆ ನೀಡುವಷ್ಟೆ ಆದ್ಯತೆಯನ್ನು ಕ್ರಿಯಾತ್ಮಕ ಕಾರ್ಯಚಟುವಟಿಕೆಗಳಿಗೂ ನೀಡಬೇಕು ಎಂದರು.

ನಮ್ಮಲ್ಲಿ ಸದಾ ಪ್ರೀತಿ ತುಂಬಿದ ಭಾವನೆಗಳಿರಬೇಕು. ನಾವೂ ನಕ್ಕು ಇತರರನ್ನು ನಗಿಸುವ ಮೂಲಕ ಬದಕನ್ನು ಸಾರ್ಥಕಗೊಳಿಸಿಕೊಳ್ಳಬೇಕು. ಹೆಣ್ಣು ಮಕ್ಕಳು ಮಾನಸಿಕವಾಗಿ ಗಟ್ಟಿಯಾಗಬೇಕು. ಮನೆಗಳಲ್ಲಿ ಅಣ್ಣ ತಂಗಿಯರ ನಡುವೆ ತಾರತಮ್ಯ ಮಾಡಬಹುದು. ತಮ್ಮ ವಿದ್ಯಾರ್ಥಿಗಳ ಯಶಸ್ಸಿನಿಂದ ಶಿಕ್ಷಕರು, ಅಧ್ಯಾಪಕರು ಸಂಭ್ರಮಿಸುತ್ತಾರೆ. ಇದನ್ನು ಅರಿತು ಯಶಸ್ಸಿನ ದಾರಿಯಲ್ಲಿ ಸಾಗುವಂತೆ ಕಿವಿಮಾತು ಹೇಳಿದರು.

ಸಮಾರಂಭದಲ್ಲಿ ಪ್ರಾಂಶುಪಾಲ ಕೆಂಡಗಣ್ಣೇಗೌಡ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಧೀಕ್ಷಕ ಎಂ.ಎಸ್.ಪುರುಷೋತ್ತಮ್, ಸಂಸ್ಕೃತಿಕ ಸಮಿತಿ ಸಂಚಾಲಕ ಪ್ರೊ.ಕೆ.ಪಿ.ಪ್ರತಿಮಾ, ಐ.ಕ್ಯೂ.ಎ.ಸಿ ಸಂಚಾಲಕ ಡಾ.ಜಿ.ಮಧು, ಕ್ರೀಡಾ ಮತ್ತು ರೆಡ್ ಕ್ರಾಸ್ ಸಮಿತಿಯ ಸಂಚಾಲಕ ಮಾಹದೇವಸ್ವಾಮಿ, ಎನ್.ಎಸ್.ಎಸ್ ಘಕಟದ ಸಂಚಾಲಕ ಎಂ.ಶಿವಸ್ವಾಮಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಮಿತಿಯ ಸಂಚಾಲಕಿ ನಫೀಸಾ ನಾಯಕವಾಡಿ ಇದ್ದರು.

ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಪಾಂಡವಪುರ: ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಸೆ.17ರಂದು ಡಾ.ನಿಶಾಂತ್ ಸವಿನೆನಪಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸೊಸೈಟಿ ಆವರಣದಲ್ಲಿ ಏರ್ಪಡಿಸಲಾಗಿದೆ.ಎಸ್‌ಟಿಜಿ ಗ್ರೂಪ್ಸ್ ಚಿನಕುರಳಿ ಮತ್ತು ಸ್ಪಂದನ ಆಸ್ಪತ್ರೆ ಮಂಡ್ಯ ವತಿಯಿಂದ ನಡೆಯುವ ಶಿಬಿರದಲ್ಲಿ ಬಿಪಿ, ಸಕ್ಕರೆ ಕಾಯಿಲೆ, ಸ್ತ್ರೀರೋಗ ತಪಾಸಣೆ, ಕೀಲು ಮತ್ತು ಮೂಳೆ ಯೋಗ ತಪಾಸಣೆ, ಕಣ್ಣಿನ ತಪಾಸಣೆ, ಚರ್ಮ ರೋಗ, ಇಸಿಜಿ ಮತ್ತು ರಕ್ತಹೀನತೆ, ತುರ್ತು ಚಿಕಿತ್ಸ ಜಾಗೃತಿ ವಿಚಾರ ಸಂಕಿರಣ, ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ. ಬೆಳಗ್ಗೆ 9 ರಿಂದ ಸಂಜೆ ೪ ಗಂಟೆವರೆಗೂ ನಡೆಯಲಿದೆ. ಚಿನಕುರಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಆಯೋಜಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.ಇಂದು ವಿಶ್ವ ಓಜೋನ್ ದಿನ, ಅರಣ್ಯ ಸಾಕ್ಷರತಾ ಆಂದೋಲನಮಂಡ್ಯ: ಪರಿಸರ ರೂರಲ್ ಡೆವಲಪ್ ಮೆಂಟ್ ಸೊಸೈಟಿ , ಸರ್ಕಾರಿ ಪ್ರೌಢಶಾಲೆ ವತಿಯಿಂದ ತಾಲೂಕಿನ ಸಂತೆಕಸಲಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸೆ.17 ರಂದು ವಿಶ್ವ ಓಜೋನ್ ದಿನ ವಿದ್ಯಾರ್ಥಿಗಳ ಮೂಲಕ ಅರಣ್ಯ ಸಾಕ್ಷತಾ ಆಂದೋಲನವನ್ನು ಆಯೋಜಿಸಲಾಗಿದೆ. ಮುರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಲೋಕೇಶ್ ಕಾರ್ಯಕ್ರಮ ಉದ್ಘಾಟಿಸುವರು. ಪ್ರೌಢಶಾಲೆ ಮುಖ್ಯಶಿಕ್ಷಕರಾದ ನಾಸೀರ್ ಹುಸೇನ್ ಅಧ್ಯಕ್ಷತೆ ವಹಿಸುವರು. ಸಂಪನ್ಮೂಲ ವ್ಯಕ್ತಿಗಳಾದ ಎಚ್.ಎಂ.ರಶ್ಮಿ ಉಪನ್ಯಾಸ ನೀಡುವರು. ಯುವ ಪ್ರಶಸ್ತಿ ಪುರಸ್ಕೃತ ಬಸವರಾಜು ಸಂತೆಕಸಲಗೆರೆ ಅವರು ಪರಿಸರ ಜಾಗೃತಿ ಗೀತಗಾಯನ ನಡೆಸಿಕೊಡುವರು ಎಂದು ಪರಿಸರ ಸಂಸ್ಥೆ ಅಧ್ಯಕ್ಷ ಮಂಗಲ ಎಂ.ಯೋಗೀಶ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ವಿಶ್ವಕರ್ಮ ಮಹೋತ್ಸವ ಆಚರಣೆಗೆ ಸಿದ್ಧತೆ
ರೈಲ್ವೆ ಭೂಸ್ವಾಧೀನ ಪರಿಹಾರದಲ್ಲಿ ಅಕ್ರಮ ಆರೋಪ