ಪರಿಸರ ರಕ್ಷಣೆಗೆ ವಿದ್ಯಾರ್ಥಿಗಳು ಪಣತೊಡಬೇಕು: ಡಾ. ಬಾಲಕೃಷ್ಣ ಮದ್ದೋಡಿ

KannadaprabhaNewsNetwork |  
Published : Jun 17, 2026, 02:45 AM IST
16ಪರಿಸರ | Kannada Prabha

ಸಾರಾಂಶ

ಪರಿಸರ ರಕ್ಷಣೆಗೆ ಪ್ರತಿಯೊಬ್ಬರೂ ಪಣತೊಡಬೇಕು ಎಂದು ಪರಿಸರ ವಿಜ್ಞಾನಿ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಹೇಳಿದರು. ಮಲ್ಪೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು.

ಮಲ್ಪೆ: ಪರಿಸರ ರಕ್ಷಣೆಗೆ ಪ್ರತಿಯೊಬ್ಬರೂ ಪಣತೊಡಬೇಕು ಎಂದು ಪರಿಸರ ವಿಜ್ಞಾನಿ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಹೇಳಿದರು. ಮಲ್ಪೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು.

ಹವಾಮಾನ ಬದಲಾವಣೆಯಿಂದ ಉಂಟಾಗುವ ಸವಾಲುಗಳ ಕುರಿತು ಅವರು ವಿವರಿಸಿದರು. ಭವಿಷ್ಯದ ಪೀಳಿಗೆಯ ಉಳಿವಿಗಾಗಿ ಗಾಳಿ, ನೀರು ಮತ್ತು ಮಣ್ಣನ್ನು ರಕ್ಷಿಸುವ ಮತ್ತು ಸಂರಕ್ಷಿಸುವ ತುರ್ತು ಅಗತ್ಯವನ್ನು ಹೇಳಿದರು.

ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳಲು ಸಂಪನ್ಮೂಲ ಸಮರ್ಪಕ ನಿರ್ವಹಣೆ ಅತ್ಯಗತ್ಯ ಎಂದರು. ವಿದ್ಯಾರ್ಥಿಗಳು ಸಂರಕ್ಷಣಾ ಉಪಕ್ರಮಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಅವರು ಒತ್ತಾಯಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ವರ್ಗೀಸ್ ಪಿ. ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಸಾಂಕೇತಿಕವಾಗಿ, ಕಾಲೇಜು ಆವರಣದಲ್ಲಿ ಗಣ್ಯರು, ಅಧ್ಯಾಪಕ ಸದಸ್ಯರು ಮತ್ತು ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟರು. ಮುಂದಿನ ಮೂರು ವರ್ಷಗಳ ಕಾಲ ಸಸಿಗಳನ್ನು ಪೋಷಿಸಲು ಮತ್ತು ರಕ್ಷಿಸಲು, ಅವುಗಳನ್ನು ಆರೋಗ್ಯಕರ ಮರಗಳಾಗಿ ಪರಿವರ್ತಿಸಲು ಭಾಗವಹಿಸುವವರು ಸಾಮೂಹಿಕವಾಗಿ ಪ್ರತಿಜ್ಞೆ ಮಾಡಿದರು. ಪ್ರಾಧ್ಯಾಪಕಿ ಡಾ. ವಿಶಾಲಾಕ್ಷಿ ಹೆಗ್ಡೆ ಸ್ವಾಗತಿಸಿ ಪ್ರಸ್ತಾಪಿಸಿದರು. ಕನ್ನಡ ವಿಭಾಗದ ಪ್ರೊ. ಜಯಶ್ರೀ ಎಂ.ಸಿ ವಂದಿಸಿದರು. ಸುಬ್ರಾಯ ಭಾಗವತ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುವವರೇ ಸಾಧಕರು: ಸ್ವಾಮೀಜಿ
ಮರಾಠ ಸಮಾಜ ಸೇವಾ ಸಂಘ ೩೦ನೇ ವಾರ್ಷಿಕೋತ್ಸವ