ಕನ್ನಡಪ್ರಭ ವಾರ್ತೆ ಮಳವಳ್ಳಿ
ಸಮೀಪದ ಮಾರಹಳ್ಳಿ ಆದರ್ಶ ವಿದ್ಯಾಲಯದಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿ ಮಾತನಾಡಿ, ಪ್ರಸ್ತುತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾವಂತರೇ ಮೂಢನಂಬಿಕೆಗಳಿಗೆ ಮೊರೆ ಹೋಗುತ್ತಿರುವುದು ವಿಪರ್ಯಾಸ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ವಿದೇಶಿಗರು ವಿಜ್ಞಾನವನ್ನು ಬಳಸಿಕೊಂಡು ಜ್ಞಾನದ ಮೂಲಕ ದೇಶವನ್ನು ಅಭಿವೃದ್ಧಿಗೊಳಿಸುತ್ತಿದ್ದಾರೆ. ಆದರೆ, ದೇಶದಲ್ಲಿ ಮನಸ್ಸಿನಲ್ಲಿ ಶಾಶ್ವತವಾಗಿ ಮೂಢನಂಬಿಕೆ ಉಳಿಯುವಂತೆ ಮಾಡಲು ದೊಡ್ಡ ಮಟ್ಟದಲ್ಲಿಯೇ ಪಿತೂರಿ ನಡೆಯುತ್ತಿದೆ. ವಿದ್ಯಾರ್ಥಿಗಳು ತಮ್ಮ ಕೌಶಲ್ಯದ ಮೂಲಕ ವಿಜ್ಞಾನ ಮಾದರಿ ತಯಾರಿಸುತ್ತಿರುವುದು ವೈಜ್ಞಾನಿಕ ಮನೋಭಾವನೆಗೆ ಬುನಾದಿಯಾಗಿದೆ. ವಿಜ್ಞಾನದಲ್ಲಿ ಪ್ರಶ್ನಿಸಿದರೇ ಮಾತ್ರ ವಾಸ್ತವದ ಸತ್ಯ ಮತ್ತು ನಿಖರತೆ ತಿಳಿಯಲು ಸಾಧ್ಯ ಎಂದರು.ನಿವೃತ್ತ ಶಿಕ್ಷಕ ನಂಜರಾಜು ಮಾತನಾಡಿ, ಅಡುಗೆ ಮನೆಯೇ ಮೂಲ ವಿಜ್ಞಾನದ ಪ್ರಭಾವಶಾಲಿ ಪ್ರಯೋಗ ಶಾಲೆಯಾಗಿದೆ. ವಿಜ್ಞಾನ ಕ್ಷೇತ್ರದಲ್ಲಿ ಅನ್ವೇಷಣೆ, ಸಂಶೋಧನೆಗಳಿಗೆ ಹೆಚ್ಚಿನ ಅವಕಾಶಗಳಿವೆ. ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಲ್ಲಿಯೇ ಪ್ರತಿಯೊಂದು ವಿಷಯವನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಿ ತಾರ್ಕಿಕವಾಗಿ ವಿಜ್ಞಾನದ ಪರಿಕಲ್ಪನೆಗಳನ್ನು ಅರ್ಥೈಸಿಕೊಳ್ಳಬೇಕೆಂದು ಕರೆ ನೀಡಿದರು.
ಜಿಲ್ಲಾ ಮಟ್ಟದ ಕ್ರೀಡಕೂಟದಲ್ಲಿ ಅದರ್ಶ ಶಾಲೆ ವಿದ್ಯಾರ್ಥಿಗಳು ಪ್ರಥಮ ಬಹುಮಾನ ಗಳಿಸಿ ತಾಲೂಕಿಗೆ ಕೀರ್ತಿ ತಂದಿದ್ದು, ಅವರಿಗೆ ಎಸ್‌ಡಿಎಂಸಿ ಆಡಳಿತ ಮಂಡಳಿಯಿಂದ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
ಕಾರ್ಯಕ್ರಮಲ್ಲಿ ಮುಖ್ಯ ಶಿಕ್ಷಕ ಶಿವರಾಜು, ಸೇರಿದಂತೆ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಇದ್ದರು.