ದಾಬಸ್‍ಪೇಟೆ: ಕ್ರೀಡೆಗಳಲ್ಲಿ ಸೋಲು ಗೆಲುವು ಸಹಜ. ಸೋಲನ್ನು ಮೆಟ್ಟಿ ನಿಂತಾಗ ಮಾತ್ರ ಗೆಲುವನ್ನು ಸಾಧಿಸಬಹುದೆಂದು ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಸುನಿತಾ ಮಾತನಾಡಿ, ಕ್ರೀಡೆಗಳು ಕೇವಲ ಮನರಂಜನೆಗಷ್ಟೇ ಸೀಮಿತವಾಗಿಲ್ಲ. ಅವು ದೈಹಿಕ ಸದೃಢತೆಗೂ ಪೂರಕ. ವಿದ್ಯಾರ್ಥಿಗಳು ಓದಿನಲ್ಲಿ ಉತ್ತಮ ಅಂಕ ಗಳಿಸುವುದರ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕಂತಿಕ ಚಟುವಟಿಕೆಯಲ್ಲಿಯೂ ಪ್ರತಿಭೆ ತೋರಬೇಕು. ಈ ನಿಟ್ಟಿನಲ್ಲಿ ನಮ್ಮ ಶಾಲಾ ಪೋಷಕರಿಗೂ ಕ್ರೀಡಾಕೂಟವನ್ನು ಆಯೋಜಿಸಿ ಪ್ರೋತ್ಸಾಹಿಸುತ್ತಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ಕ್ರೀಡಾಕೂಟದ ವಿಜೇತ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ಕಿರಿಯ ವಿಭಾಗದ ಮುಖ್ಯಶಿಕ್ಷಕ ರುದ್ರೇಶ್, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.ಪೋಟೋ 5 : ದಾಬಸ್‍ಪೇಟೆ ಪಟ್ಟಣದ ಗೀತಾ ಆಂಗ್ಲಶಾಲೆಯ ಕ್ರೀಡಾಕೂಟವನ್ನು ಮೇಲಣಗವಿ ಮಠದ ಡಾ.ಶ್ರೀಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು.