ವಿದ್ಯಾರ್ಥಿಗಳು ಅಧ್ಯಯನಶೀಲರಾಗಿ: ಡಿಡಿಪಿಐ ಶಶಿಧರ್‌

KannadaprabhaNewsNetwork |  
Published : Nov 03, 2026, 03:00 AM IST
ಜಿಲ್ಲಾ ಮಟ್ಟದ ಯುವ ಸಂಸತ್‌ ಸ್ಪರ್ಧೆ ನಡೆಯಿತು | Kannada Prabha

ಸಾರಾಂಶ

ವಿದ್ಯಾರ್ಥಿಗಳು ಅಧ್ಯಯನ ಶೀಲತೆ ಗುಣವನ್ನು ಬೆಳೆಸಿಕೊಳ್ಳಬೇಕು. ಇತಿಹಾಸ ತಿಳಿದರಷ್ಟೇ ಇತಿಹಾಸ ಬರೆಯಲು ಸಾಧ್ಯ ಎಂದು ದ.ಕ. ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕ ಶಶಿಧರ್‌ ಹೇಳಿದರು.

ಮಂಗಳೂರು ; ವಿದ್ಯಾರ್ಥಿಗಳು ಅಧ್ಯಯನ ಶೀಲತೆ ಗುಣವನ್ನು ಬೆಳೆಸಿಕೊಳ್ಳಬೇಕು. ಇತಿಹಾಸ ತಿಳಿದರಷ್ಟೇ ಇತಿಹಾಸ ಬರೆಯಲು ಸಾಧ್ಯ ಎಂದು ದ.ಕ. ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕ ಶಶಿಧರ್‌ ಹೇಳಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಪಂಚಾಯಿತಿನಲ್ಲಿ ಶುಕ್ರವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಯುವ ಸಂಸತ್‌’ ಸ್ಪರ್ಧೆಯಲ್ಲಿ ಮಾತನಾಡಿದರು.ಯುವಕರಿಗೆ, ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಅಣಕು ಸಂಸತ್ತು ಆಯೋಜಿಸಿದೆ. ಈಗಾಗಲೇ ತಾಲೂಕು ಮಟ್ಟದ ಸ್ಪರ್ಧಿಸಿ, ಜಿಲ್ಲಾ ಮಟ್ಟದ ಸ್ಪರ್ಧೆ ನಡೆಯುತ್ತಿದೆ. ನವೆಂಬರ್‌ನಲ್ಲಿ ರಾಜ್ಯ ಮಟ್ಟದ ಸ್ಪರ್ಧೆ ಆಯೋಜನೆಗೊಳ್ಳಲಿದೆ ಎಂದರು.ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ಹೇಮಲತಾ ಮಾತನಾಡಿ, ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಆರೋಗ್ಯಕರ ಚರ್ಚೆಗಳು ಈ ಯುವ ಸಂಸತ್‌ನಲ್ಲಿ ನಡೆಯಲಿ ಎಂದರು.

ವಿದ್ಯಾರ್ಥಿಗಳಿಂದ ಅಣಕು ಸಂಸತ್ತು ನಡೆಯಿತು.

ನ್ಯಾಯವಾದಿಗಳಾದ ಪ್ರವೀಣ್‌ ಅದ್ಯಪಾಡಿ, ಮಹೇಶ್‌ ಜೋಗಿ, ರಾಜ್ಯಶಾಸ್ತ್ರ ಉಪನ್ಯಾಸಕ ಚಂದ್ರನಾಥ್‌, ಸಮಾಜ ಕಲ್ಯಾಣ ಇಲಾಖೆ ಮಂಗಳೂರಿನ ಸಹಾಯಕ ನಿರ್ದೇಶಕ ಸುರೇಶ್‌ ಅಡಿಗ ಇದ್ದರು. ಅಬ್ದುಲ್‌ ರಜಾಕ್‌ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭುಗಿಲೆದ್ದ ಸರ್ಕಾರ ವರ್ಸಸ್‌ ಕುಮಾರಸ್ವಾಮಿ ಸ್ಟಿಂಗ್‌ ಫೈಟ್‌ - ಈಗ ಎಚ್‌ಡಿಕೆ ಚಾರ್ಜ್‌ಶೀಟ್‌
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ - ಇನ್ನೂ 3 ದಿನ ರಾಜ್ಯದೆಲ್ಲೆಡೆ ಮಳೆ