ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಮರಳೂರಿನ ಎಸ್‌ಎಸ್ಐಟಿ ಕಾಲೇಜು ಕ್ಯಾಂಪಸ್‌ನ ಪಿಜಿ ಸಭಾಂಗಣದಲ್ಲಿ ಆಯೋಜಿಸಿದ್ದ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಿದ್ಧಾರ್ಥ ಪದವಿ ಪೂರ್ವ ಕಾಲೇಜು ಉತ್ತಮವಾದ ಕಾರ್ಯಕ್ರಮ ಆಯೋಜನೆ ಮಾಡಿದ್ದು ವಿದ್ಯಾರ್ಥಿಯ ಪೋಷಕರು ಕಟ್ಟಿರುವ ನೂರಾರು ಕನಸುಗಳನ್ನು ನನಸು ಮಾಡಲು ವಿದ್ಯಾರ್ಥಿಗಳು ಸಹಕಾರ ನೀಡಬೇಕು, ಅಧ್ಯಯನಶೀಲರಾಗಬೇಕು ಯಾರಿಗೋಸ್ಕರವೂ ಕಷ್ಟಪಟ್ಟು ಓದುವ ಬದಲು ಇಷ್ಟಪಟ್ಟು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಆಗ ವಿದ್ಯಾರ್ಥಿಗಳು ಉತ್ತಮವಾದ ಫಲಿತಾಂಶವನ್ನು ನಿರೀಕ್ಷಿಸಬಹುದಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯಕರ್ತರಾಗಬೇಕು ಎಂದರು.ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಉಪನ್ಯಾಸಕ ಡಾ. ನಾಗೇಂದ್ರ ಮಾತನಾಡಿ, ವಿದ್ಯಾರ್ಥಿಗಳು ಓದಿನಲ್ಲಿ ಮುಖ್ಯವಾಗಿರುವ ಗುರಿಯೊಂದನ್ನ ಕೇಂದ್ರೀಕರಿಸಬೇಕು. ಆಧುನಿಕ ತಂತ್ರಜ್ಞಾನದ ಸೌಲಭ್ಯಗಳನ್ನು ಬಳಸಿಕೊಂಡು ಜ್ಞಾನಾರ್ಜನೆ ಹೆಚ್ಚಿಸಿಕೊಂಡು ಭವಿಷ್ಯದ ಕನಸು ನನಸು ಮಾಡಲು ಪಣತೊಡಬೇಕು ಎಂದು ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲ ಕುಮಾರ್ ಸೇರಿದಂತೆ ಕಾಲೇಜು ಸಿಬ್ಬಂದಿ ವರ್ಗದವರು, ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.