ವಿದ್ಯಾರ್ಥಿಗಳು ಸಾತ್ವಿಕ ಆಹಾರ ಸೇವಿಸಿ ಆರೋಗ್ಯ ರಕ್ಷಿಸಿ: ನ್ಯಾ. ಆರ್. ಎಸ್. ಜೀತು ಕರೆ

KannadaprabhaNewsNetwork |  
Published : Oct 02, 2026, 01:45 AM IST
ನರಸಿಂಹರಾಜಪುರ ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದ ವಿಶ್ವ ಪೌಂಷ್ಠಿಕಾಂಶ ದಿನ ಕಾರ್ಯಕ್ರಮವನ್ನು ಕಿರಿಯ ಸಿವಿಲ್ ನ್ಯಾಯಾಧೀಶ ಆರ್.ಎಸ್.ಜೀತು ಉದ್ಘಾಟಿಸಿದರು. | Kannada Prabha

ಸಾರಾಂಶ

ನರಸಿಂಹರಾಜಪುರಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಜಂಕ್ ಪುಡ್, ಬೇಕರಿ ತಿನಿಸುಗಳನ್ನು ಹೆಚ್ಚಾಗಿ ಸೇವಿಸುತ್ತಿದ್ದಾರೆ. ಇದನ್ನು ಕಡಿಮೆ ಮಾಡಿ ಸಾತ್ವಿಕ ಆಹಾರಗಳಾದ ತರಕಾರಿ, ಹಾಲು, ಮೊಟ್ಟೆ, ಹಣ್ಣುಗಳನ್ನು ಹೆಚ್ಚಾಗಿ ಸೇವನೆ ಮಾಡಿ ಆರೋಗ್ಯ ಕಾಪಾಡಿ ಕೊಳ್ಳಬೇಕು ಎಂದು ಕಿರಿಯ ಸಿವಿಲ್ ನ್ಯಾಯಾಧೀಶ ಆರ್.ಎಸ್.ಜೀತು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

- ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿಶ್ವ ಪೌಷ್ಠಿಕಾಂಶ ದಿನ

ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಜಂಕ್ ಪುಡ್, ಬೇಕರಿ ತಿನಿಸುಗಳನ್ನು ಹೆಚ್ಚಾಗಿ ಸೇವಿಸುತ್ತಿದ್ದಾರೆ. ಇದನ್ನು ಕಡಿಮೆ ಮಾಡಿ ಸಾತ್ವಿಕ ಆಹಾರಗಳಾದ ತರಕಾರಿ, ಹಾಲು, ಮೊಟ್ಟೆ, ಹಣ್ಣುಗಳನ್ನು ಹೆಚ್ಚಾಗಿ ಸೇವನೆ ಮಾಡಿ ಆರೋಗ್ಯ ಕಾಪಾಡಿ ಕೊಳ್ಳಬೇಕು ಎಂದು ಕಿರಿಯ ಸಿವಿಲ್ ನ್ಯಾಯಾಧೀಶ ಆರ್.ಎಸ್.ಜೀತು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಬುಧವಾರ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸರ್ಕಾರಿ ಅಭಿಯೋಜನಾ ಇಲಾಖೆ, ಆರೋಗ್ಯ ಇಲಾಖೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ರೋಟರಿ ಕ್ಲಬ್, ಇನ್ನರ್ ವೀಲ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಪೌಷ್ಠಿಕಾಂಶ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

1947 ರಲ್ಲಿ ಸ್ವಾತಂತ್ರ ಬಂದ ನಂತರ ಆಗಿನ ಜನ ಸಂಖ್ಯೆ 35 ಕೋಟಿ ಇತ್ತು.ಈ ಮದ್ಯೆ ಬರಗಾಲ ಹಾಗೂ ಪ್ರವಾಹದಿಂದ ದೇಶದಲ್ಲಿ ತೀವ್ರ ಆಹಾರದ ಕೊರತೆ ಉಂಟಾಗಿತ್ತು. ಆಗಿನ ಪ್ರಧಾನಿ ಜವಹಾರ್ ಲಾಲ್ ನೆಹರು, ಹಸಿರು ಕ್ರಾಂತಿ ಹರಿಕಾರ ಪ್ರೊ.ಜಿ.ಸ್ವಾಮೀನಾಥನ್ ಆಹಾರದ ಸಮಸ್ಯೆ ಬಗೆಹರಿಸಲು ಅನೇಕ ಕಾರ್ಯಕ್ರಮ ರೂಪಿಸಿದರು. ಅದರ ಅಂಗ ವಾಗಿ ಪ್ರತಿ ವರ್ಷ ಸೆ.1 ರಂದು ರಾಷ್ಟ್ರೀಯ ಪೋಷಕಾಂಶ ದಿನ ಹಾಗೂ ಸೆ. 28 ರಂದು ವಿಶ್ವ ಪೌಷ್ಠಿಕಾಂಶ ದಿನ ಆಚರಿಸ ಲಾಗುತ್ತಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ತಾಲೂಕು ಆರೋಗ್ಯ ಅಧಿಕಾರಿ ಡಾ.ಮಹೇಂದ್ರ ಕಿರೀಟಿ ಮಾತನಾಡಿ ಪ್ರತಿಯೊಬ್ಬರೂ ಸಮ ತೋಲನ ಪೌಷ್ಠಿಕ ಆಹಾರ ಸೇವಿಸಬೇಕು. ನಿಗದಿತ ಪ್ರಮಾಣದಲ್ಲಿ ಪ್ರತಿ ದಿನವೂ ಪೌಷ್ಠಿಕ ಆಹಾರ ಸೇವಿಸಬೇಕು. ಸಾಧ್ಯವಾದಷ್ಠು ಉಪ್ಪು, ಮೈದಾ, ಸಕ್ಕರೆಯಿಂದ ದೂರವಿರಬೇಕು. ಸ್ಥಳೀಯವಾಗಿ ದೊರಕುವ ಏಕ ದಳ ಧಾನ್ಯಗಳಾದ ಅಕ್ಕಿ, ರಾಗಿ, ಗೋದಿ, ಸಿರಿಧಾನ್ಯಗಳು, ಹಳದಿ ಹಣ್ಣು, ಮೊಟ್ಟೆ, ಪಪ್ಪಾಯಿ ಸೇವಿಸಬೇಕು. ಆಹಾರವನ್ನು ವೈಜ್ಞಾನಿಕವಾಗಿ ತಯಾರಿಸಿ, ಶುಚಿತ್ವ ಕಾಪಾಡಿದರೆ ಮಾತ್ರ ಆರೋಗ್ಯವಂತಾಗಿರಲು ಸಾಧ್ಯ ಎಂದು ಸಲಹೆ ನೀಡಿದರು.

ವಕೀಲ ಬಸವರಾಜ್ ಸಾಮಾನ್ಯ ಕಾನೂನಿನ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಚಂದ್ರಶೇಖರ್, ರೋಟರಿಕ್ಲಬ್ ಅಧ್ಯಕ್ಷ ಪಿ.ಎಸ್.ವಿದ್ಯಾನಂದಕುಮಾರ್, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ರಾಧಿಕಾ ಅರ್ಜುನ್ ಮಾತನಾಡಿದರು.ಸಭೆಯ ಅಧ್ಯಕ್ಷತೆಯನ್ನು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಪ್ರಾಂಶುಪಾಲ ಅಜ್ಜಪ್ಪ ವಹಿಸಿದ್ದರು.

ಸಮಾರಂಭದಲ್ಲಿ ಇನ್ನರ್ ವೀಲ್ ಕ್ಲಬ್ಬಿನ ಸದಸ್ಯರಾದ ನವ್ಯ, ನೀತಾ,ಡಾ.ಸ್ವಪ್ನಾಲಿ, ಆರೋಗ್ಯ ಇಲಾಖೆಯ ಪಿ.ಪಿ.ಬೇಬಿ, ಡೈಸಿ, ಶೋಭಿ, ನಮಿತ ಹಾಗೂ ನ್ಯಾಯಾಂಗ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.ಸುಹಾಸಿನಿ ಸ್ವಾಗತಿಸಿದರು. ಭಾಗ್ಯ ಕಾರ್ಯಕ್ರಮ ನಿರೂಪಿಸಿದರು.ನಾಗರಾಜ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯಗೊಳ್ಳಬೇಕು: ಕಾವೇರಿ
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಕ್ರೀಡಾಕೂಟ..!