ಸ್ವಚ್ಛತೆ ಬಗ್ಗೆ ವಿದ್ಯಾರ್ಥಿಗಳು ಜಾಗೃತಿ ಮೂಡಿಸಲಿ

KannadaprabhaNewsNetwork |  
Published : Jun 19, 2026, 02:15 AM IST
ಯಲಬುರ್ಗಾ ತಾಲೂಕಿನ ಗಾಣಧಾಳ ಸರ್ಕಾರಿ ಪ್ರೌಢ ಶಾಲೆಗೆ ಪಿಡಿಒ ನೀಲಾ ಸೂರ್ಯಕುಮಾರಿ ಭೇಟಿ ನೀಡಿ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. | Kannada Prabha

ಸಾರಾಂಶ

ಸುಪ್ರೀಂ ಕೋರ್ಟ್ ಆದೇಶದಂತೆ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ, ತ್ಯಾಜ್ಯ ಎಸೆದರೆ ಗ್ರಾಪಂದಿಂದ ದಂಡ ವಿಧಿಸುವ ಅವಕಾಶ

ಯಲಬುರ್ಗಾ: ಗ್ರಾಮೀಣ ಪ್ರದೇಶಗಳಲ್ಲಿ ಸುಂದರ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಗಾಣಧಾಳ ಗ್ರಾಪಂ ಪಿಡಿಒ ನೀಲಾ ಸೂರ್ಯಕುಮಾರಿ ಹೇಳಿದರು.

ತಾಲೂಕಿನ ಗಾಣಧಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಗುರುವಾರ ಭೇಟಿ ನೀಡಿ ಸುತ್ತಲಿನ ವಾತಾವರಣ ಸ್ವಚ್ಛತವಾಗಿಟ್ಟುಕೊಳ್ಳುವಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ಸುಪ್ರೀಂ ಕೋರ್ಟ್ ಆದೇಶದಂತೆ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ, ತ್ಯಾಜ್ಯ ಎಸೆದರೆ ಗ್ರಾಪಂದಿಂದ ದಂಡ ವಿಧಿಸುವ ಅವಕಾಶ ನೀಡಿದೆ. ಗ್ರಾಪಂನಿಂದ ಓಣಿಯಲ್ಲಿ ಬರುವ ಸ್ವಚ್ಛತಾ ವಾಹನಕ್ಕೆ ನಿವಾಸಿಗಳು ಹಸಿ ಮತ್ತು ಒಣ ಕಸ ಸಂಗ್ರಹಿಸಿ ಹಾಕಬೇಕು. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸ್ವಚ್ಛತೆಗೆ ಕಡೆಗೆ ಗಮನಹರಿಸಬೇಕು. ಈ ಬಗ್ಗೆ ಸಮುದಾಯಕ್ಕೆ ಜನಜಾಗೃತಿ ಮೂಡಿಸುವ ಕೆಲಸವಾಗಬೇಕು. ಸುಂದರ ಪರಿಸರ ನಿರ್ಮಾಣದಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಶಾಲಾ ಸುತ್ತಲಿನ ಶುಚಿತ್ವಕ್ಕೆ ಒತ್ತು ನೀಡಬೇಕು ಎಂದರು.

ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಸ್ವಚ್ಛತೆ,ನೈ ರ್ಮಲ್ಯ, ವಿದ್ಯುದ್ವೀಪ ಮತ್ತು ಕುಡಿಯುವ ನೀರಿನ‌ ಸಮಸ್ಯೆ ಆಗದಂತೆ ನಿಗಾ ವಹಿಸಲಾಗಿದೆ. ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವುದು ಕಂಡು ಬಂದರೆ ದಂಡ ವಿಧಿಸಲಾಗುವುದ ಎಂದರು.

ಈ ಸಂದರ್ಭ ಮುಖ್ಯಶಿಕ್ಷಕ ನಿಂಗಪ್ಪ ಚಕ್ರಸಾಲಿ ಹಾಗೂ‌ ವಿದ್ಯಾರ್ಥಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳಲ್ಲಿ ಕೀಳರಿಮೆ ಉಂಟುಮಾಡದಂತೆ ಎಚ್ಚರ ವಹಿಸಿ
ಶರಣ ಸಾಹಿತ್ಯಕ್ಕೆ ಡಾ.ಸಿದ್ದಯ್ಯ ಪುರಾಣಿಕರ ದೊಡ್ಡ ಕೊಡುಗೆ ಅಪಾರ