ಸುರೇಶ್ ಹೆಗ್ಡೆ ಅಭಿಮತ । ಶ್ರೀ ಆಂಗ್ಲಮಾದ್ಯಮ ಶಾಲೆಯಲ್ಲಿ ಕನ್ನಡ ಪ್ರಭ ವಿದ್ಯಾರ್ಥಿ ಸಂಚಿಕೆ ಬಿಡುಗಡೆ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ತೀರ್ವ ಸ್ಪರ್ಧೆ, ಪೈಪೋಟಿ ಇದೆ. ನಾವು ಸಾಮಾನ್ಯ ಜ್ಞಾನ ಬೆಳೆಸಿಕೊಂಡರೆ ಮಾತ್ರ ಸ್ಪರ್ಧೆ ಎದುರಿಸಿ ಯಶಸ್ಸು ಸಾಧಿಸಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಪತ್ರಿಕೆ, ಸಾಹಿತ್ಯ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ರೋಟರಿ ಸಂಸ್ಥೆ ಅಧ್ಯಕ್ಷ ಸುರೇಶ್ ಹೆಗ್ಡೆ ಹೇಳಿದರು.
ಪಟ್ಟಣದ ಹೆಗ್ಡೆ ರೆಸಿಡೆನ್ಸಿ ಸಭಾಂಗಣದಲ್ಲಿ ನಡೆದ ಕನ್ನಡ ಪ್ರಭ ಯುವ ಆವೃತ್ತಿ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಪ್ರತಿ ದಿನ ಬೆಳಿಗ್ಗೆ ಪತ್ರಿಕೆ ಓದುವುದರಿಂದ ನಮಗೆ ಸಾಕಷ್ಟು ವಿಷಯ ಸಿಗುವ ಜೊತೆಗೆ ಸಾಮಾನ್ಯ ಜ್ಞಾನ ಬೆಳೆಯುತ್ತದೆ. ಪಠ್ಯ ವಿಷಯಗಳ ಜೊತೆಗೆ ಪಠ್ಯೇತರ ವಿಷಯಗಳಿಗೂ ಆದ್ಯತೆ ನೀಡಬೇಕು. ಪತ್ರಿಕೆಗಳು,ಸಾಹಿತ್ಯ ಓದುವು ದರಿಂದ ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ.ರೋಟರಿಯಿಂದ ವಿದ್ಯಾರ್ಥಿಗಳಿಗೆ ಒಂದುವರ್ಷ ಉಚಿತ ಕನ್ನಡ ಪ್ರಭ ವಿದ್ಯಾರ್ಥಿ ಸಂಚಿಕೆ ನೀಡಲಾಗುತ್ತಿದೆ. ಇದರಲ್ಲಿರುವ ಸಾಕಷ್ಟು ವಿಷಯವನ್ನು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದರು.
2 ಶ್ರೀ ಚಿತ್ರ 1-