ಕನ್ನಡಪ್ರಭ ವಾರ್ತೆ ಬೇಲೂರು
ಪಟ್ಟಣದ ಯುರೋಕಿಡ್ಸ್, ವಿದ್ಯಾ ವಿಕಾಸ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ರೀತಿಯ ಕಾರ್ಯಕ್ರಮಗಳು ಶಾಲೆಯ ಸಾಧನೆಯನ್ನು ಅನಾವರಣಗೊಳಿಸುವ ಜೊತೆಗೆ, ವಿದ್ಯಾರ್ಥಿಗಳ ಕಲೆಯನ್ನು ಹೊರತೆಗೆಯಲು ಸಹಕಾರಿಯಾಗುತ್ತದೆ ಎಂದರು. ಪುರಸಭೆ ಮಾಜಿ ಅಧ್ಯಕ್ಷ ಜಿ. ಶಾಂತಕುಮಾರ್ ಮಾತನಾಡಿ, ೨೦೨೪-೨೫ ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾವಿಕಾಸ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ಶಾಲೆಗೆ ಕೀರ್ತಿ ತಂದಿದ್ದಾರೆ ಎಂದರು. ಈ ಶಿಕ್ಷಣ ಸಂಸ್ಥೆಯು ಪ್ರಾರಂಭದಿದಲೂ ಪಠ್ಯದ ಜೊತೆಗೆ ಕಲೆ, ಸಾಹಿತ್ಯ, ಸಾಂಸ್ಕೃತಿಕ, ದೇಶಪ್ರೇಮ, ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸುತ್ತಿದ್ದಾರೆ ಎಂದರು.
ವಿದ್ಯಾವಿಕಾಸ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಬಿ. ಎಂ.ರಂಗನಾಥ್ ಮಾತನಾಡಿ, ವಿದ್ಯಾರ್ಥಿಗಳು ಓದಿನಲ್ಲಿ ಮಾತ್ರ ಮುಂದಿದ್ದಾರೆ ಸಮಾಜವನ್ನು ಎದುರಿಸುವ ಶಕ್ತಿಯನ್ನು ಪಡೆಯುವುದಿಲ್ಲ. ಆದ್ದರಿಂದ ಕರಾಟೆ, ಸ್ನೇಹ, ಸಹಬಾಳ್ವೆ, ಸಾಮಾನ್ಯ ಜ್ಙಾನದ ಬಗ್ಗೆ ವಿದ್ಯಾರ್ಥಿಗಳಿಗೆ ಕಲಿಸಲಾಗುತ್ತಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಉಷಾಸತೀಶ್, ಬಿಸಿಐಲ್ ಸಂಸ್ಥೆಯ ಮುಖ್ಯಸ್ಥ ಗಿರೀಶ್ ಶೆಣ್ಯ, ಶಾಲೆಯ ಆಡಳಿತಾಧಿಕಾರಿ ಪದ್ಮಜಯಕುಮಾರ್, ಟ್ರಸ್ಟಿ, ಆಶಾರಂಗನಾಥ್, ಪ್ರಾಂಶುಪಾಲ ಎಸ್.ಬಾಲಾಜಿ, ಯುರೋಕಿಡ್ಸ್ ಸಂಯೋಜಕಿ ಶಾಲಿನಿ ಕೇಶವ್ ಇದ್ದರು.