ಕನ್ನಡಪ್ರಭ ವಾರ್ತೆ ಗುಬ್ಬಿ
ಮುಖ್ಯ ಅತಿಥಿಯಾಗಿ ಬೆಂಗಳೂರಿನ ನೈಷಾ ಮೊಬಿಲಿಟಿ ಟೆಕ್ ಪ್ರೈವೇಟ್ ಲಿಮಿಟೆಡ್‌ನ ಉಪಾಧ್ಯಕ್ಷ ಅತಿಶಯ್ ಜೈನ್ ಮಾತನಾಡಿ, ತಾಂತ್ರಿಕ ಜ್ಞಾನ ಜೊತೆಗೆ ಮಾನವೀಯ ಮೌಲ್ಯಗಳು ಹಾಗೂ ನಿರಂತರ ಕಲಿಕೆಯ ಮನೋಭಾವ ಅಗತ್ಯವಿದ್ದು ಜಾಗತಿಕ ಮಟ್ಟದಲ್ಲಿ ಭಾರತೀಯ ಎಂಜಿನಿಯರ್‌ಗಳಿಗೆ ಹೆಚ್ಚಿನ ಅವಕಾಶಗಳಿದ್ದು, ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಲುಫ್ತಾನ್ಸಾ ಸಿಸ್ಟಮ್ಸ್‌ನ ಕಿರಣ್ ಆಡಿ ಮಾತನಾಡಿ, ತಂತ್ರಜ್ಞಾನ ಕ್ಷೇತ್ರದಲ್ಲಿ ಇತ್ತೀಚಿಗೆ ಕೃತಕ ಬುದ್ಧಿಮತ್ತೆ ಸಾಕಷ್ಟು ಅಭಿವೃದ್ಧಿಯತ್ತ ಸಾಗುತ್ತಿತ್ತು ಇದರ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಿನ ಗಮನಹರಿಸಬೇಕಾಗಿದೆ. ಇನ್ನೂ ಕ್ಲೌಡ್ ಕಂಪ್ಯೂಟಿಂಗ್ ಹಾಗೂ ಡಿಜಿಟಲ್ ಮಹತ್ವವನ್ನು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಾಂತ್ರಿಕ ಜ್ಞಾನ ಜೊತೆಗೆ ನಾಯಕತ್ವ ಗುಣ, ತಂಡ ಕಾರ್ಯಪಟುತ್ವ ಮತ್ತು ಸಂವಹನ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು. ಸಿ.ಐ.ಟಿ ಸಂಸ್ಥೆಯ ನಿರ್ದೇಶಕ ಹಾಗೂ ಪ್ರಾಂಶುಪಾಲ ಡಾ. ಸುರೇಶ್ ಡಿ. ಎಸ್. ಮಾತನಾಡಿ, ಇಂದು ವಿದೇಶಗಳಲ್ಲಿಯೂ ಸಹ ನಮ್ಮ ವಿದ್ಯಾರ್ಥಿಗಳು ತಮ್ಮದೇ ಆದ ಸ್ವಂತ ಸಂಸ್ಥೆಗಳನ್ನು ಕಟ್ಟಿಕೊಂಡಿರುವುದು ನಿಜವಾಗಿಯೂ ಮತ್ತಷ್ಟು ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಮುಖ್ಯ ಸಲಹೆಗಾರ ಡಾ. ಶ್ರೀಧರ್ ಕೆ. ಎನ್. ರಾವ್ ಹಾಗೂ ಉಪಪ್ರಾಂಶುಪಾಲರಾದ ಡಾ. ಶಾಂತಲಾ ಸಿಪಿ,ಕಾಲೇಜಿನ ಅಧ್ಯಾಪಕರು, ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.