ಕಾಲಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿಪಡಿಸಿಕೊಳ್ಳಿ

KannadaprabhaNewsNetwork |  
Published : May 23, 2025, 11:47 PM IST
ಕಾರ್ಯಕ್ರಮದಲ್ಲಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ವಿದ್ಯಾರ್ಥಿಗಳು ಕಾಲಕ್ಕೆ ತಕ್ಕಂತೆ ತಮ್ಮ ಕೌಶಲ್ಯವನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.

ಗದಗ: ವಿದ್ಯಾರ್ಥಿಗಳು ಕಾಲಕ್ಕೆ ತಕ್ಕಂತೆ ತಮ್ಮ ಕೌಶಲ್ಯವನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.ನಗರದ ಕೆ.ಎಚ್.ಪಾಟೀಲ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಶುಕ್ರವಾರ ಅಪ್ರೆಂಟಿಸ್ ತರಬೇತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನೇಮಕಾತಿ ಆದೇಶವನ್ನು ವಿತರಣೆ ಮಾಡಿ ಅವರು ಮಾತನಾಡಿದರು.ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಬೇರೆ ಸ್ಥಳಗಳಿಗೆ ಹೋದಾಗ ಊಟ ಸರಿಯಿಲ್ಲವೆಂದೋ, ತಂದೆ ತಾಯಿಯವರನ್ನು ಬಿಟ್ಟು ಇರಬೇಕೆಂದು ನೆಪ ಒಡ್ಡಿ ಸಿಕ್ಕಂತಹ ಅವಕಾಶವನ್ನು ತೊರೆದಂತಹ ಹಲವು ಪ್ರಸಂಗಗಳಿವೆ. ಹಾಗಾಗಿ ವಿದ್ಯಾರ್ಥಿಗಳು ಕೆಲಸ ಸಿಕ್ಕ ಮೊದಲ ದಿನಗಳಲ್ಲಿ ಎದುರಾಗುವ ಕಷ್ಟಗಳನ್ನು ಸಹಿಸಿಕೊಳ್ಳಬೇಕು, ಅಂದಾಗ ಅಭ್ಯರ್ಥಿಗಳಿಗೆ ಕಂಪನಿಗಳಿಂದ ಉತ್ತಮ ಅವಕಾಶಗಳು ಒದಗಿ ಬರುತ್ತವೆ ಎಂದರು.

ಕಂಪನಿಗಳಲ್ಲಿ ಉದ್ಯೋಗಕ್ಕಾಗಿ ಸೇರಿದಾಗ ಉತ್ಪಾದನೆ ಮತ್ತು ಕಂಪನಿಯಲ್ಲಿ ಕಾರ್ಯನಿರ್ವಹಿಸಬೇಕಾದ ಕೌಶಲ್ಯಗಳ ಅಭಿವೃದ್ಧಿ ಜೊತೆಗೆ ಒಟ್ಟಾರೆ ಕಂಪನಿ ಯಾವ ರೀತಿ ನಿರ್ವಹಣೆಗೊಳ್ಳುತ್ತದೆ ಎಂಬುದರ ಬಗ್ಗೆ ವಿಶೇಷ ಆಸಕ್ತಿವಹಿಸಬೇಕು. ಕಲಿತ ಕೌಶಲ್ಯವನ್ನು ಕಾಲಕ್ಕೆ ತಕ್ಕಂತೆ ಅಭಿವೃದ್ಧಿ ಪಡಿಸಿಕೊಳ್ಳಬೇಕು ಮತ್ತು ಉತ್ತಮ ಸಂಭಾಷಣೆ ಕೌಶಲ್ಯವನ್ನು ಹೊಂದಬೇಕು ಎಂದರು.

ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಸರ್ಕಾರಿ ಐಟಿಐ ಕಾಲೇಜಿನಲ್ಲಿ ಕಲಿತ 2000 ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ದೊಡ್ಡ ಖಾಸಗಿ ಸಂಸ್ಥೆಯಲ್ಲಿ 20 ಸಾವಿರ ರು. ಸಂಬಳವನ್ನು ಕೊಡುತ್ತಾರೆ. ಅದನ್ನು ವಿದ್ಯಾರ್ಥಿಗಳು ಉಪಯೋಗ ಪಡೆದು ಯುವ ವಯಸ್ಸಿನಲ್ಲಿ ಯುವಕರು ಕಷ್ಟಪಟ್ಟು ಶ್ರದ್ಧೆಯಿಂದ ಕಲಿಯಬೇಕು. ತಮ್ಮ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಬೇಕು ಎಂದರು.

ಗದಗ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಕೃಷ್ಣಗೌಡ ಪಾಟೀಲ ಮಾತನಾಡಿ, ಅಪ್ರೆಂಟಿಸ್ ಪ್ರಕ್ರಿಯೆಯಲ್ಲಿ 290 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ 170 ಜನ ಆಯ್ಕೆ ಆಗಿರುವುದು ಸಂತೋಷ ತಂದಿದೆ. ಯುವಕರು ತಮಗೆ ಆಸಕ್ತಿಯಿರುವ ಯಾವುದೇ ಕೌಶಲ್ಯ ಅಭಿವೃದ್ಧಿಯ ಪ್ರಕ್ರಿಯೆಯನ್ನು ನಿರಂತರವಾಗಿ ಮಾಡುತ್ತಿರಬೇಕು. ಕೆಲಸದ ಪ್ರಾರಂಭದಲ್ಲಿ ಕಡಿಮೆ ಸಂಬಳ ಸಿಗುವ ಕಾರಣ ವೊಡ್ಡಿ ಕಲಿಕೆಯನ್ನು ಬಿಡಬಾರದು. ಇಂದಿನ ದಿನಮಾನದಲ್ಲಿ ತಂತ್ರಜ್ಞಾನ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ನವ ಯುಗಕ್ಕೆ ತಕ್ಕಂತೆ ನಮ್ಮ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದರು.

ಯುವಕರಿಗೆ ಉದ್ಯೋಗ ದೊರಕಿಸುವ ಸಲುವಾಗಿ ನಗರದಲ್ಲಿ ಉದ್ಯೋಗ ಮೇಳವನ್ನು ನಡೆಸಲಾಗಿತ್ತು

ಹಾಗೂ ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೂಡಲೇ ನೇಮಕಾತಿ ಆದೇಶವನ್ನು ನೀಡಲಾಗಿದೆ ಈ ಮೂಲಕ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಪಡೆಯಲು ಸಹಕಾರಿಯಾಗಿದೆ ಎಂದರು.ಈ ವೇಳೆ ಪ್ರಾ. ಬಸವರಾಜ ಮಲ್ಲೂರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕೌಶಲ್ಯಾಭಿವೃದ್ದಿ ಇಲಾಖೆ ಜಂಟಿ ನಿರ್ದೇಶಕ ಬಸವಪ್ರಭು ಹಿರೇಮಠ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!