ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದ ಅನು ಕೋಚಿಂಗ್ ಸೆಂಟರ್‌ನಲ್ಲಿ ತರಬೇತಿ ಪಡೆದ 20 ವಿದ್ಯಾರ್ಥಿಗಳು 2025- 26ನೇ ಸಾಲಿನಲ್ಲಿ ಶೈಕ್ಷಣಿಕ ಸಾಧನೆ ಮಾಡಿ, ನವೋದಯ ವಿದ್ಯಾಲಯಕ್ಕೆ ಮತ್ತು ಸೈನಿಕ ಶಾಲೆಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ತುಂಬುವ ಉದ್ದೇಶದಿಂದ ನಗರದ ಅಂಬೇಡ್ಕರ್ ಭವನದಲ್ಲಿ ಅನು ಕೋಚಿಂಗ್ ಸೆಂಟರ್ ವತಿಯಿಂದ ಆಯೋಜಿಸಲಾಗಿದ್ದ ಸನ್ಮಾನ ಮತ್ತು ಅಭಿನಂದನಾ ಸಮಾರಂಭದಲ್ಲಿ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದರು.
ವಿದ್ಯಾರ್ಥಿಗಳು ಸಾಧಕರ ಜೀವನ ಮತ್ತು ಅವರ ಪರಿಶ್ರಮದ ಹಾದಿಯನ್ನು ತಿಳಿದುಕೊಂಡು, ಅವರಿಂದ ಪ್ರೇರಣೆ ಪಡೆದು ಮುನ್ನಡೆಯಬೇಕು. ನಿಮ್ಮಲ್ಲಿರುವ ಪ್ರತಿಭೆ ಹಾಗೂ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕೌಶಲ್ಯ ಹೊಂದಿದವರಿಗೆ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.ಪೋಷಕರು ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ, ಅದಕ್ಕೆ ತಕ್ಕ ಪ್ರೋತ್ಸಾಹ ಮತ್ತು ಸಹಕಾರ ನೀಡಬೇಕು. ಮಕ್ಕಳು ದೊಡ್ಡ ಕನಸು ಕಾಣುವಂತೆ ಪ್ರೇರೇಪಿಸಬೇಕು. ನಮ್ಮ ಕಲೆ ಮತ್ತು ಸಂಸ್ಕೃತಿಯನ್ನು ಪರಿಚಯಿಸುವ ಮೂಲಕ ಆ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಸಲಹೆ ನೀಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂದೀಪ್ ಚಕ್ರವರ್ತಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಮತ್ತು ಮೊಬೈಲ್ ಬಳಕೆ ಹೆಚ್ಚಾಗಿದೆ. ಇವುಗಳ ಸಕಾರಾತ್ಮಕ ಅಂಶಗಳನ್ನು ಅರಿತು, ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿ ಬಳಸಿಕೊಳ್ಳಬೇಕು. ತಂತ್ರಜ್ಞಾನದ ದುಷ್ಪರಿಣಾಮಗಳ ಬಗ್ಗೆಯೂ ವಿದ್ಯಾರ್ಥಿಗಳು ಎಚ್ಚರಿಕೆಯಿಂದಿರಬೇಕು ಎಂದರು.
ಅನು ಕೋಚಿಂಗ್ ಸೆಂಟರ್‌ನ ನಿರ್ದೇಶಕ ಚನ್ನಕೃಷ್ಣಪ್ಪ ಮಾತನಾಡಿ, ನಮ್ಮ ಸಂಸ್ಥೆಯು ಕಳೆದ ಹಲವು ವರ್ಷಗಳಿಂದ ನವೋದಯ ವಿದ್ಯಾಲಯ, ಸತ್ಯಸಾಯಿ ಆಶ್ರಮದ ಉಚಿತ ಶಾಲೆ ಹಾಗೂ ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸುತ್ತಿದೆ. ನಾಲ್ಕು, ಐದು ಮತ್ತು ಆರನೇ ತರಗತಿಯಿಂದಲೇ ಮಕ್ಕಳಲ್ಲಿ ಐಎಎಸ್, ಐಪಿಎಸ್, ವೈದ್ಯರು ಸೇರಿದಂತೆ ಉನ್ನತ ಹುದ್ದೆಗಳನ್ನು ಅಲಂಕರಿಸುವ ಕನಸು ಮೂಡಿಸಿ, ಅದಕ್ಕೆ ಅಗತ್ಯವಾದ ಶೈಕ್ಷಣಿಕ ಅಡಿಪಾಯವನ್ನು ನಿರ್ಮಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಸಿನಿಮಾ ನಟಿ ರಾಜೇಶ್ವರಿ ಹಾಗೂ ಬಿಎಡ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಶಂಕರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಪ್ರೇರಣೆ ನೀಡಿದರು.