ಕನ್ನಡಪ್ರಭ ವಾರ್ತೆ ಬೀದರ್
ಅವರು ನಗರದ ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಬಾಂಗಣದಲ್ಲಿ ಬೀದರ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದ ನಿಮಿತ್ತ ಪದಕ ಪಡೆದ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ವಿಶ್ವವಿದ್ಯಾಲಯದಿಂದ ಪಡೆದ ಶಿಕ್ಷಣವು ವೃತ್ತಿಜೀವನದ ಯಶಸ್ಸಿನ ಜೊತೆಗೆ ಜೀವನವನ್ನು ಸಾರ್ಥಕಗೊಳಿಸಲು ಸಹಕಾರಿಯಾಗಬೇಕು ಎಂದರು.
ಇಂದು ಕೃತಕ ಬುದ್ಧಿಮತ್ತೆ ಹಾಗೂ ಹೊಸ ತಂತ್ರಜ್ಞಾನಗಳು ಜಗತ್ತನ್ನು ವೇಗವಾಗಿ ಬದಲಾಯಿಸುತ್ತಿವೆ. ಕೃಷಿ, ಆರೋಗ್ಯ, ಶಿಕ್ಷಣ, ಪ್ರವಾಸೋದ್ಯಮ, ಡಿಜಿಟಲ್ ಸೇವೆಗಳು, ಪರಿಸರ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ಹೊಸ ಆಲೋಚನೆಗಳು ಹಾಗೂ ಸ್ಟಾರ್ಟಪಗಳಿಗೆ ಅಪಾರ ಅವಕಾಶಗಳಿವೆ. ಸ್ಥಳೀಯ ಸಮಸ್ಯೆ ಗಳನ್ನು ಅವಕಾಶಗಳಾಗಿ ಪರಿವರ್ತಿಸಿ, ಜ್ಞಾನ ಮತ್ತು ದೃಢಸಂಕಲ್ಪದೊಂದಿಗೆ ಹೊಸ ಪ್ರಯತ್ನಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.ಭಾರತದ ಸಾವಿರಾರು ವರ್ಷಗಳ ಜ್ಞಾನ ಪರಂಪರೆ ಅಮೂಲ್ಯವಾದದ್ದು, ಭಾರತೀಯ ಜ್ಞಾನ ಪರಂಪರೆಯ ಬೇರುಗಳು ಹಾಗೂ ಆಧುನಿಕ ವಿಜ್ಞಾನದ ರೆಕ್ಕೆಗಳನ್ನು ಹೊಂದಿರುವ ಭಾರತವನ್ನು ನಿರ್ಮಿಸಬೇಕು ಎಂದರು.
ಕಲ್ಯಾಣ ಕರ್ನಾಟಕದಲ್ಲಿ ಪ್ರತಿಭೆಗೆ ಕೊರತೆಯಿಲ್ಲ. ಗುಣಮಟ್ಟದ ಶಿಕ್ಷಣ, ಕೌಶಲ್ಯ, ಸಂಶೋಧನೆ ಮತ್ತು ಆಧುನಿಕ ಅವಕಾಶಗಳೊಂದಿಗೆ ಯುವ ಪ್ರತಿಭೆಯನ್ನು ಬೆಳೆಸುವ ಅಗತ್ಯವಿದೆ. ವಿಶೇಷವಾಗಿ ಬೀದರ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ವಾಸ್ತುಶಿಲ್ಪದ ಶ್ರೀಮಂತ ಪರಂಪರೆಯನ್ನು ಹೊಂದಿರುವ ಜಿಲ್ಲೆಯಾಗಿದೆ ಎಂದರು.
--
ಬೀದರ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದ ನಿಮಿತ್ತ ಶನಿವಾರ ಪದಕ ಪಡೆದ ವಿದ್ಯಾರ್ಥಿಗಳನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಮಾತನಾಡಿದರು.