ಹೊನ್ನಾವರ: ವಿದ್ಯಾರ್ಥಿಗಳಿಗೆ ನಿರ್ದಿಷ್ಟ ಗುರಿ ಇರಬೇಕು. ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ದೇಶ ಪ್ರಮುಖ ಶಕ್ತಿಯಾಗಿ ಬೆಳೆಯಲು ಕಾರಣ ಇಬ್ಬರು. ಒಂದು ಪಾಲಕರು, ಇನ್ನೊಂದು ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಎಂದರು.
ಅವರು ತಾಲೂಕಿನ ಮೂಡಗಣಪತಿ ಸಭಾಭವನದಲ್ಲಿ ನಡೆದ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ 2024-25ನೇ ಸಾಲಿನ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.ಗ್ಲೋಬಲ್ ಆಗಿ ವಿವಿಧ ಕಂಪನಿಗಳು ಬೆಳೆಯುತ್ತಿದೆ. ಅಂತಹ ಕಂಪನಿಗಳು ಭಾರತದಲ್ಲಿ ಬರುತ್ತಿದೆ. ಯುರೋಪ್ ಹೊರತು ಪಡಿಸಿದರೆ ಭಾರತವೇ ಎಂಎನ್‌ಸಿ ಕಂಪನಿಗಳಿಗೆ ದೊಡ್ಡ ಮಾರುಕಟ್ಟೆ ಆಗಿದೆ. ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ದೊಡ್ಡ ಸಾಧನೆಯನ್ನು ಮಾಡುವಂತಾಗಲಿ. ಭಾರತದ ಆರ್ಥಿಕ ಶಕ್ತಿಯನ್ನು ಹೆಚ್ಚಿಸುವ ಕಂಪನಿಗಳನ್ನು ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಸ್ಥಾಪಿಸುವಂತಾಗಲಿ ಎಂದು ಹಾರೈಸಿದರು.
ಎಂಪಿಇ ಸೊಸೈಟಿಯ ಅಧ್ಯಕ್ಷ ಕೃಷ್ಣಮೂರ್ತಿ ಭಟ್ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿಗೆ ನೆರಳಾಗಿರಬೇಕು. ವಿದ್ಯಾರ್ಥಿಗಳು ಕಾಲೇಜಿನ ಸೌಲಭ್ಯವನ್ನು ಸರಿಯಾಗಿ ಬಳಸಿಕೊಳ್ಳಿ. ಕಾಲೇಜು ವಿದ್ಯಾರ್ಥಿಗಳಿಗೆ ಬೇಕಾದ ಸೌಲತ್ತುಗಳನ್ನು ನೀಡುತ್ತಿದ್ದೇವೆ. ಪೂರ್ವ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಪ್ರೇಮಿಗಳು ಕಾಲೇಜಿನ ಜೀವಾಳ. ಕಾಲೇಜಿನ ಬೆಳವಣಿಗೆಗೆ ಪೂರ್ವ ವಿದ್ಯಾರ್ಥಿಗಳು ಹೆಚ್ಚು ನೆರವಾಗಬೇಕು ಎಂದರು. ವಿದ್ಯಾರ್ಥಿಗಳು ಅಂತಃಶಕ್ತಿ ಬೆಳೆಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.ಡಿವೈಎಸ್ಪಿ ರಾಘವೇಂದ್ರ ಆರ್. ನಾಯ್ಕ ಮಾತನಾಡಿದರು.
ಪದವಿ ಕಾಲೇಜಿನ ಪ್ರಾಚಾರ್ಯ ಡಾ.ಎಲ್.ಹೆಬ್ಬಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾಲೇಜಿನ ವಾರ್ಷಿಕ ಸಂಚಿಕೆ ಶರಾವತಿಯನ್ನು ಬಿಡುಗಡೆಗೊಳಿಸಲಾಯ್ತು.ಶೈಕ್ಷಣಿಕ,ಸಾಂಸ್ಕೃತಿಕ, ಕ್ರೀಡಾಕ್ಷೇತ್ರದಲ್ಲಿ ವಿವಿಧ ಸಾಧನೆಯನ್ನು ಮಾಡಿದ ವಿದ್ಯಾರ್ಥಿ ಗಳನ್ನು ಗೌರವಿಸಲಾಯಿತು.
ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷ ಎನ್.ಜಿ. ಅನಂತಮೂರ್ತಿ ವರದಿ ವಾಚಿಸಿದರು. ಕಲಾ ವಿಭಾಗದ ಸಲಹೆಗಾರ್ತಿ ಭಾರತಿ ಮೇಸ್ತ ಅತಿಥಿಗಳನ್ನು ಪರಿಚಯಿಸಿದರು.ಸೊಸೈಟಿಯ ಕಾರ್ಯದರ್ಶಿ ಎಸ್.ಎಂ. ಭಟ್ ಉಪಸ್ಥಿತರಿದ್ದರು. ಡಾ.ಜಿ.ಎನ್.ಭಟ್, ಸ್ವಾಗತಿಸಿದರು. ಸಂಗೀತ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಿದ್ಯಾರ್ಥಿ ಒಕ್ಕೂಟ ಪ್ರಧಾನ ಕಾರ್ಯದರ್ಶಿ ಅಜೇಯಗೌಡ ವಂದಿಸಿದರು. ಪ್ರಶಾಂತ್ ಹೆಗಡೆ, ಶ್ರೀಲತಾ ನಿರೂಪಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.