ಯಲಬುರ್ಗಾ: ಪ್ರತಿಯೊಬ್ಬ ವಿದ್ಯಾರ್ಥಿಗಳು ಕನ್ನಡ ಭಾಷೆಯ ಬಗ್ಗೆ ಅಭಿಮಾನ ಹೊಂದಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷ ಮಹಾಂತೇಶ ಗಾಂಜಿ ಹೇಳಿದರು.
ಕನ್ನಡ ಏಕೀಕರಣಕ್ಕಾಗಿ ದುಡಿದ ಮಹನೀಯರನ್ನು ಮಕ್ಕಳಿಗೆ ಪರಿಚಯಿಸುವಂತಹ ಕಾರ್ಯ ಶಿಕ್ಷಕರು ಮಾಡಬೇಕು. ಆ ನಿಟ್ಟಿನಲ್ಲಿ ಮಕ್ಕಳು ಮಾತೃಭಾಷೆ ಕನ್ನಡದಲ್ಲಿ ಶಿಕ್ಷಣ ಪಡೆಯುವಂತೆ ಪ್ರೇರೇಪಿಸಬೇಕು ಎಂದರು. ಇದೆ ವೇಳೆ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಪದಾಧಿಕಾರಿಗಳಿಂದ ಶಾಲೆಗೆ ೧೦ಡೆಸ್ಕ್ ಹಾಗೂ ಒಂದು ಡಯಾಸ್ ದೇಣಿಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಶರಣಪ್ಪ ತೊಂಡಿಹಾಳ, ಶರಣಪ್ಪ ಮಾಟರಂಗಿ, ಸುರೇಶ ದಿವಟರ, ಮುಖ್ಯಶಿಕ್ಷಕ ಕಳಕಮಲ್ಲಪ್ಪ ಅಂತೂರ, ಅಮರೇಶಪ್ಪ ಗಾಂಜಿ, ದಾವಲಬೀ, ಗಿರಿಜಮ್ಮ ಹಟ್ಟಿ ಸೇರಿದಂತೆ ಮತ್ತಿತರರು ಇದ್ದರು.