ವಿದ್ಯಾರ್ಥಿಗಳು ಧನಾತ್ಮಕ ಚಿಂತನೆ ಹೆಚ್ಚಿಸಿಕೊಳ್ಳಿ : ಡಾ. ಪಿ. ವಿ. ಭಂಡಾರಿ

KannadaprabhaNewsNetwork |  
Published : Feb 02, 2026, 02:45 AM IST
ಕಾರ್ಯಕ್ರಮವನ್ನು ಮನೋವೈದ್ಯ ಡಾ. ಪಿ.ವಿ. ಭಂಡಾರಿ ಉದ್ಘಾಟಿಸಿದರು | Kannada Prabha

ಸಾರಾಂಶ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಮಲ್ಪೆ ಏಳೂರು ಮೊಗವೀರ ಭವನದಲ್ಲಿ ಉಡುಪಿ ಜಿಲ್ಲೆಯ 1455 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಮನೋ ವೈದ್ಯ ಡಾ. ಪಿ. ವಿ. ಭಂಡಾರಿ ಉದ್ಘಾಟಿಸಿದರು.

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಮಲ್ಪೆ ಏಳೂರು ಮೊಗವೀರ ಭವನದಲ್ಲಿ ಉಡುಪಿ ಜಿಲ್ಲೆಯ 1455 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಮನೋ ವೈದ್ಯ ಡಾ. ಪಿ. ವಿ. ಭಂಡಾರಿ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜೀವನದಲ್ಲಿ ಯಶಸ್ವಿಯಾಗಲು ಶೈಕ್ಷಣಿಕ ಸಾಧನೆಯ ಜೊತೆ ಜೊತೆಗೆ ಸವಾಲುಗಳನ್ನು ಎದುರಿಸಲು ಧನಾತ್ಮಕ ಚಿಂತನೆಯೊಂದಿಗೆ ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸಿಕೊಳ್ಳುವುದು ಅಗತ್ಯವಾಗಿದ್ದು, ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸುಮಾರು 1 ಕೋಟಿ ಮೊತ್ತದ ಪ್ರತಿಭಾ ಪುರಸ್ಕಾರವನ್ನು ವಿದ್ಯಾರ್ಥಿಗಳಿಗೆ ವಿತರಿಸುವ ಮೂಲಕ ಶಿಕ್ಷಣದ ಬಗ್ಗೆ ಸಾಮಾಜಿಕ ಬದ್ಧತೆ ಮೆರೆದಿದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಡಯಟ್ ಪ್ರಾಂಶುಪಾಲ ಅಶೋಕ್ ಕಾಮತ್ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶಾಸಕ ಯಶ್ ಪಾಲ್ ಸುವರ್ಣ ವಹಿಸಿದ್ದರು. ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಸಿ. ಬಂಗೇರ, ನಗರಸಭೆ ಸದಸ್ಯರ ಯೋಗೀಶ್ ಸಾಲ್ಯಾನ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಅತಿಥಿಗಳಾಗಿ ಮತ್ಸ್ಯೋದ್ಯಮಿ ಆನಂದ ಪಿ. ಸುವರ್ಣ, ಮಲ್ಪೆ ಏಳೂರು ಮೊಗವೀರ ಮಹಾಜನ ಸಂಘದ ಅಧ್ಯಕ್ಷ ರತ್ನಾಕರ ಸಾಲ್ಯಾನ್, ಆಳ ಸಮುದ್ರ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸುಭಾಷ್ ಮೆಂಡನ್, ಮಲ್ಪೆ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಕೋಟ ಪರ್ಸೀನ್ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ರಾಜೇಂದ್ರ ಸುವರ್ಣ, ಮಲ್ಪೆ ಮಹಿಳಾ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷೆ ಗೀತಾ ಕರ್ಕೇರ, ಫೆಡರೇಶನ್ ಉಪಾಧ್ಯಕ್ಷ ದೇವಪ್ಪ ಕಾಂಚನ್, ವ್ಯವಸ್ಥಾಪಕ ನಿರ್ದೇಶಕಿ ದರ್ಶನ್ ಟಿ. ಕೆ., ಹಾಗೂ ಸಂಸ್ಥೆಯ ನಿರ್ದೇಶಕರು ಉಪಸ್ಥಿತರಿದ್ದರು. ವಿಜೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.3 ಸಾವಿರ ವಿದ್ಯಾರ್ಥಿಗಳಿಗೆ 1 ಕೋಟಿ ಪ್ರತಿಭಾ ಪುರಸ್ಕಾರ: ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 3 ಸಾವಿರ ವಿದ್ಯಾರ್ಥಿಗಳಿಗೆ 1 ಕೋಟಿ ವೆಚ್ಚದಲ್ಲಿ ಪ್ರತಿಭಾ ಪುರಸ್ಕಾರ ವಿತರಿಸಿ ವಿದ್ಯಾರ್ಥಿಗಳಿಗೆ ನೀಡಿರುವುದು ಅತ್ಯಂತ ಸಂತಸ ತಂದಿದೆ ಎಂದು ಸಂಸ್ಥೆಯ ಅಧ್ಯಕ್ಷ, ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ