ವಿದ್ಯಾರ್ಥಿಗಳು ಶಿಸ್ತಿನ ಜೀವನ ನಡೆಸಿ: ಅನೂಪ್ ಮಾದಪ್ಪ

KannadaprabhaNewsNetwork |  
Published : Mar 29, 2025, 12:34 AM IST
ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕೊಡಗು  ಜಿಲ್ಲಾ ಪೊಲೀಸ್ ರವರ  ಸಹಯೋಗದೊಂದಿಗೆ ಇಲ್ಲಿಯ ಕಾಲೇಜು ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ  ಪೊಲೀಸ್ ವೃತ್ತ ನಿರೀಕ್ಷಕರಾದ  ಅನುಪ್ ಮಾದಪ್ಪ ರವರು ಭಾಗವಹಿಸಿ ಅವರು ಮಾತನಾಡಿದರು. | Kannada Prabha

ಸಾರಾಂಶ

ವಿದ್ಯಾರ್ಥಿಗಳು ದುಶ್ಚಟಕ್ಕೆ ದಾಸರಾಗದೆ ಶಿಸ್ತಿನ ಜೀವನವನ್ನು ನಡೆಸಬೇಕು ಎಂದು ಅನೂಪ್‌ ಮಾದಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗದೆ ಶಿಸ್ತಿನ ಜೀವನವನ್ನು ನಡೆಸಬೇಕು ಎಂದು ಮಡಿಕೇರಿ ವೃತ್ತ ಪೊಲೀಸ್ ನಿರೀಕ್ಷಕ ಅನೂಪ್ ಮಾದಪ್ಪ ಹೇಳಿದರು.

ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕೊಡಗು ಜಿಲ್ಲಾ ಪೊಲೀಸ್ ಸಹಯೋಗದೊಂದಿಗೆ ಕಾಲೇಜು ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಜೀವನದಲ್ಲಿ ಎಂದಿಗೂ ಅಮಲು ಬರಿಸುವಂತಹ ಪದಾರ್ಥಗಳಿಗೆ ಮಾರುಹೋಗದೆ ಆರೋಗ್ಯವನ್ನು ಕಾಪಾಡಿಕೊಂಡು ಸದೃಢ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಕಾನೂನು ಅರಿವು ಮುಖ್ಯವಾಗಿದೆ ಎಂದರು.

ಪ್ರತಿಯೊಬ್ಬರು ಸಂಚಾರಿ ನಿಯಮ, ಸೈಬರ್ ಕ್ರೈಂ, ಡಿಜಿಟಲ್ ಅರೆಸ್ಟ್ ಬಗ್ಗೆ ತಿಳುವಳಿಕೆ ಹೊಂದಿರಬೇಕು ಎಂದು ಅಪರಾಧ ಹಾಗೂ ಕಾನೂನಿನ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ, ಪೋಕ್ಸೋ ಕಾಯ್ದೆ, ಸಂಚಾರಿ ನಿಯಮ ಕಾಯ್ದೆ ಬಗ್ಗೆ ವಿವರಿಸುತ್ತಾ, ವಿದ್ಯಾರ್ಥಿಗಳು ಯಾವುದೇ ಮದ್ಯವ್ಯಸನಗಳಿಗೆ, ಸಾಮಾಜಿಕ ಜಾಲತಾಣಗಳಲ್ಲಿರುವ ಆಮಿಷಗಳಿಗೆ ಮರುಳಾಗದೆ ಎಚ್ಚರಿಕೆಯಂದಿರಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮನೋಜ್ ಕುಮಾರ್, ಐಕ್ಯೂ ಸಂಚಾಲಕಿ ಎಸ್. ಆಶಾ, ಬೋಧಕ ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ