ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕರ್ಯಕ್ರಮದಲ್ಲಿ ನ್ಯಾ. ಅರುಣಾಕುಮಾರಿ
ಭಾರತೀಯ ಪರಂಪರೆ, ಇತಿಹಾಸ, ಪುರಾಣ, ಸಾಹಿತ್ಯ, ಸಂಸ್ಕೃತಿ, ಕಲಾ ಸಹಿತ ಎಲ್ಲಾ ಕ್ಷೇತ್ರಗಳಲ್ಲಿ ಸಾರ್ವಕಾಲಿಕ ಮೌಲ್ಯದ ಸಾಧನೆಯಾಗಿರುವುದು ಏಕಾಗ್ರತೆಯನ್ನು ಹೊಂದಿದ ವ್ಯಕ್ತಿಗಳಿಂದ ಎಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಅರುಣಾ ಕುಮಾರಿ ಅಭಿಪ್ರಾಯ ಪಟ್ಟರು.
ನಗರ ಹೊರವಲಯದ ಎಸ್‌ಜೆಸಿ ತಾಂತ್ರಿಕ ಕಾಲೇಜು ಆವರಣದ ಬಿಜಿಎಸ್ ಸಭಾಣಗಣದಲ್ಲಿ ಸರ್ಕಾರಿ ಕಾಲೇಜುಗಳ ಪಿಯುಸಿ ವಿದ್ಯಾರ್ಥಿಗಳಿಗೆ ಎಸ್ ಜೆಸಿಐಟಿ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಆನ್ ಲೈನ್ ತರಗತಿಗಳ ಉದ್ಘಾಟಿಸಿ ಮಾತನಾಡಿದರು.ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಿ
ಭಾರತದ ಯುವ ಜನತೆಯಲ್ಲಿ ಜ್ಞಾನ ಸಂಪತ್ತಿಗೆ ಕೊರತೆ ಇಲ್ಲ. ಆದರೆ, ಅದನ್ನು ಸದುಪಯೋಗಪಡಿಸಿಕೊಳ್ಳಬೇಕಾದ ಅಗತ್ಯತೆ ಇದೆ. ಭಾರತೀಯರು ಇಂದು ಜಗತ್ತಿನಾದ್ಯಂತ ಅನೇಕ ಕ್ಷೇತ್ರಗಳಲ್ಲಿ ಛಾಪು ಮೂಡಿಸಿದ್ದಾರೆ. ಮಕ್ಕಳಿಗೆ ವಿಶಾಲವಾದ ಭವಿಷ್ಯವಿದೆ. ಅದನ್ನು ಸಾಕಾರಗೊಳಿಸಬೇಕಾದ ಜವಾಬ್ದಾರಿ ನಮ್ಮಲ್ಲರ ಮೇಲಿದೆ ಎಂದು ಹೇಳಿದರು.ಸರ್ಕಾರಿ ಶಾಲೆ ಬಗ್ಗೆ ಕೀಳರಮೆ ಬೇಡ
ಇಂದಿನ ಸ್ಪಧಾತ್ಮಕ ಯುಗದಲ್ಲಿ ನೀಟ್ ಮತ್ತು ಸಿಇಟಿ ಪರಿಕ್ಷೆಗಳಲ್ಲಿ ಕೇವಲ ನಿಮ್ಮ ಕಾಲೇಜಿನ ಮಟ್ಟದಲ್ಲಿ ಮಾತ್ರ ಸ್ಪರ್ಧೆ ಇರುವುದಿಲ್ಲಾ ದೇಶದ ಮಟ್ಟದಲ್ಲಿ ಸ್ಪರ್ಧೆ ಇರುತ್ತದೆ. ಇದನ್ನು ಗಮನದಲ್ಲಿಟ್ಟು ಕೊಂಡು ಪರೀಕ್ಷೆಗಳಿಗೆ ತಯಾರಾಗ ಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಕಾರ್ಯಕ್ರಮದಲ್ಲಿ ಎಸ್ ಜೆಸಿಐಟಿ ಪ್ರಾಂಶುಪಾಲ ಡಾ.ಜಿ.ಟಿ.ರಾಜು, ರಿಜಿಸ್ಟ್ರಾರ್ ಸುರೇಶ್, ಪ್ರಾಧ್ಯಾಪಕರಾದ ಡಾ.ರಾಜಶೇಖರ್, ಡಾ.ನರೇಂದ್ರಬಾಬು, ಡಾ.ಶ್ರೀನಿವಾಸರೆಡ್ಡಿ, ವಕೀಲ ಮಂಜುನಾಥರೆಡ್ಡಿ ಮತ್ತಿತರರು ಇದ್ದರು.