ವಿದ್ಯಾರ್ಥಿಗಳು ಪರೀಕ್ಷೆಗೆ ಅಂಜದಿರಿ: ಗಿರೀಶ್

KannadaprabhaNewsNetwork |  
Published : Feb 19, 2026, 02:00 AM IST
ಪೊಟೋ೧೮ಸಿಪಿಟಿ೨: ತಾಲೂಕಿನ ಬೆಳಕೆರೆಯ ವಿಶ್ವಮಾನವ ಪ್ರೌಢ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. | Kannada Prabha

ಸಾರಾಂಶ

ಚನ್ನಪಟ್ಟಣ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯವನ್ನು ದೂರ ಮಾಡುವ ಉದ್ದೇಶದಿಂದ ತಾಲೂಕಿನ ಬೆಳಕೆರೆಯ ವಿಶ್ವಮಾನವ ಪ್ರೌಢಶಾಲೆ ಆವರಣದಲ್ಲಿ ವಿಶೇಷ ಕಾರ್ಯಾಗಾರ ಹಾಗೂ ವಿದ್ಯಾರ್ಥಿಗಳ ಮನೆ ಮನೆ ಭೇಟಿ ಕಾರ್ಯಕ್ರಮ ಆಯೋಜಿಸಲಾಗಿತ್ತು

ಚನ್ನಪಟ್ಟಣ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯವನ್ನು ದೂರ ಮಾಡುವ ಉದ್ದೇಶದಿಂದ ತಾಲೂಕಿನ ಬೆಳಕೆರೆಯ ವಿಶ್ವಮಾನವ ಪ್ರೌಢಶಾಲೆ ಆವರಣದಲ್ಲಿ ವಿಶೇಷ ಕಾರ್ಯಾಗಾರ ಹಾಗೂ ವಿದ್ಯಾರ್ಥಿಗಳ ಮನೆ ಮನೆ ಭೇಟಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಚನ್ನಪಟ್ಟಣ ತಹಸೀಲ್ದಾರ್‌ ಬಿ.ಎನ್.ಗಿರೀಶ್ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆ ಕುರಿತು ಭಯಪಡುವ ಅವಶ್ಯಕತೆ ಇಲ್ಲ. ಸರಿಯಾದ ಯೋಜನೆ, ಸಮಯ ನಿರ್ವಹಣೆ ಹಾಗೂ ಆತ್ಮವಿಶ್ವಾಸದಿಂದ ಯಾವುದೇ ಗುರಿಯನ್ನು ಸಾಧಿಸಬಹುದು. ವಿದ್ಯಾರ್ಥಿಗಳು ದಿನನಿತ್ಯ ಪಾಠಗಳನ್ನು ಪುನರಾವರ್ತನೆ ಮಾಡಬೇಕು. ಮೊಬೈಲ್ ಮತ್ತು ಟಿವಿಗಳಿಂದ ದೂರವಿದ್ದು, ಪೋಷಕರು ಹಾಗೂ ಶಿಕ್ಷಕರ ಮಾರ್ಗದರ್ಶನದಲ್ಲಿ ಓದಿಗೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ಮಾರ್ಚನಹಳ್ಳಿ ಗ್ರಾಮದ ವಿದ್ಯಾರ್ಥಿಗಳ ಮನೆ ಮನೆ ಭೇಟಿ ಕಾರ್ಯಕ್ರಮದ ಮೂಲಕ ಶಿಕ್ಷಕರು ಹಾಗೂ ಆಯೋಜಕರು ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ ಅವರ ವಿದ್ಯಾಭ್ಯಾಸದ ಪರಿಸ್ಥಿತಿಯನ್ನು ಪರಿಶೀಲಿಸಿ ಪ್ರೇರಣಾದಾಯಕ ಮಾತುಗಳ ಮೂಲಕ ಉತ್ತೇಜನ ನೀಡಿದರು.

ಈ ಸಂದರ್ಭದಲ್ಲಿ ಸಾಹಿತಿ ಡಾ.ವಿಜಯ್ ರಾಂಪುರ, ಮುಖ್ಯ ಶಿಕ್ಷಕ ಶಿವಮಲ್ಲೇಶ್, ಆಡಳಿತ ಮಂಡಳಿ ಕಾರ್ಯದರ್ಶಿ ಶಿವ ಸುಂದರ ಸತ್ಯೇಂದ್ರ, ಶಿಕ್ಷಕ ವೃಂದ, ಗ್ರಾಪಂ ಸದಸ್ಯರಾದ ಜಯರಾಮು, ರವಿ, ಮುಖಂಡರಾದ ಮಂಜು, ರಾಜೇಶ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೊಟೋ೧೮ಸಿಪಿಟಿ೨: ಚನ್ನಪಟ್ಟಣ ತಾಲೂಕಿನ ಬೆಳಕೆರೆಯ ವಿಶ್ವಮಾನವ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರ ಪಾಪರ್‌ ಆದರೂ ಕೈ ಶಾಸಕರು ವಿದೇಶಕ್ಕೆ: ಅಶೋಕ್‌
ಶಾಸಕ ಸುಬ್ಬಾರೆಡ್ಡಿ ಅನರ್ಹ: ಪ್ರಜಾಪ್ರಭುತ್ವಕ್ಕೆ ಸಂದ ಜಯ