ವಿದ್ಯಾರ್ಥಿಗಳು ಕಲಿಕಾ ಸಂದರ್ಭದಲ್ಲಿ ಆಕರ್ಷಣೆಗೆ ಒಳಗಾಗಬೇಡಿ

KannadaprabhaNewsNetwork | Published : May 22, 2025 1:28 AM
ವಿದ್ಯಾರ್ಥಿಗಳು ಕಲಿಕಾ ಸಂದರ್ಭದಲ್ಲಿ ಆಕರ್ಷಣೆಗೆ ಒಳಗಾಗಿ ದುಡುಕಿ ತೆಗೆದುಕೊಳ್ಳುವ ನಿರ್ಧಾರಗಳು ಬದುಕಿನ ಮೇಲೆ ಕೆಟ್ಟ ಪರಿಣಾಮಗಳನ್ನು ಬೀರುತ್ತವೆ ಎಂದು ಹಾಸನದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಜಿ ಕವಿತಾ. ಹೇಳಿದರು. ಕಾಲೇಜು ಸಾಮಾಜಿಕ ಜಾಲತಾಣಗಳ ಸದ್ಬಳಕೆ ಮತ್ತು ಪರಿಶ್ರಮದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ವಿಜಯಲಕ್ಷ್ಮಿ ದೇಶಮಾನ ಅವರಂತಹ ಸಾಧಕರನ್ನು ಪ್ರೇರಣೆಯಾಗಿಸಿಕೊಂಡಾಗ ಸಮಸ್ಯೆಗಳನ್ನು ಮೆಟ್ಟಿನಿಂತು ಗುರಿ ಮುಟ್ಟಲು ಸಾಧ್ಯ. ಸಹಪಠ್ಯ ಚಟುವಟಿಕೆಗಳು ಸರ್ವಾಂಗೀಣ ಪ್ರಗತಿಗೆ ಪೂರಕ ಎಂದು ಅಭಿಪ್ರಾಯಪಟ್ಟರು.
Follow Us

ಕನ್ನಡಪ್ರಭ ವಾರ್ತೆ ಅರಸೀಕೆರೆ

ವಿದ್ಯಾರ್ಥಿಗಳು ಕಲಿಕಾ ಸಂದರ್ಭದಲ್ಲಿ ಆಕರ್ಷಣೆಗೆ ಒಳಗಾಗಿ ದುಡುಕಿ ತೆಗೆದುಕೊಳ್ಳುವ ನಿರ್ಧಾರಗಳು ಬದುಕಿನ ಮೇಲೆ ಕೆಟ್ಟ ಪರಿಣಾಮಗಳನ್ನು ಬೀರುತ್ತವೆ ಎಂದು ಹಾಸನದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಜಿ ಕವಿತಾ. ಹೇಳಿದರು.

ನಗರದ ಹೊರವಲಯದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25ನೇ ಸಾಲಿನ ಕಾಲೇಜಿನ ಎಲ್ಲಾ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿತ್ತು. ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿ, ಹದಿಹರೆಯದ ವಯಸ್ಸಿನಲ್ಲಿ ತಮ್ಮ ಮನಸ್ಸನ್ನು ಬೇರೆಡೆಗೆ ಹರಿಬಿಡದೆ ಜ್ಞಾನಾರ್ಜನೆಯತ್ತ ಕೇಂದ್ರೀಕರಿಸಿದಾಗ ಜೀವನದ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಲು ಸಾಧ್ಯ ಎಂದರು.

ಕಾಲೇಜು ಸಾಮಾಜಿಕ ಜಾಲತಾಣಗಳ ಸದ್ಬಳಕೆ ಮತ್ತು ಪರಿಶ್ರಮದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ವಿಜಯಲಕ್ಷ್ಮಿ ದೇಶಮಾನ ಅವರಂತಹ ಸಾಧಕರನ್ನು ಪ್ರೇರಣೆಯಾಗಿಸಿಕೊಂಡಾಗ ಸಮಸ್ಯೆಗಳನ್ನು ಮೆಟ್ಟಿನಿಂತು ಗುರಿ ಮುಟ್ಟಲು ಸಾಧ್ಯ. ಸಹಪಠ್ಯ ಚಟುವಟಿಕೆಗಳು ಸರ್ವಾಂಗೀಣ ಪ್ರಗತಿಗೆ ಪೂರಕ ಎಂದು ಅಭಿಪ್ರಾಯಪಟ್ಟರು.

ಕಾಲೇಜಿನ ಸಾಂಸ್ಕೃತಿಕ ವೇದಿಕೆಯ ಸಂಚಾಲಕರಾದ ಎಚ್. ಪಿ. ಉಷಾ ಮಾತನಾಡಿ, 2024 -25ನೇ ಸಾಲಿನ ಕಾಲೇಜು ಎನ್ಎಸ್ಎಸ್, ರೇಂಜರ್ಸ್ ಮತ್ತು ರೋವರ್ಸ, ರೆಡ್‌ಕ್ರಾಸ್, ಕ್ರೀಡೆ, ಸಾಂಸ್ಕೃತಿಕವಾಗಿ ಆಯೋಜಿಸಿದ ಕಾರ್ಯಕ್ರಮ ಹಾಗೂ ಶೈಕ್ಷಣಿಕವಾಗಿ ಮಾಡಿದ ಸಾಧನೆಯ ವರದಿಯನ್ನು ಪ್ರಸ್ತುತ ಪಡಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸಿದ್ದೇಶ್ ಜಾಜೂರು ಕಾಲೇಜಿನ ಬೆಳವಣಿಗೆಯಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ತಿಳಿಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಗೀತಾ ಮಾತನಾಡಿ, 2023- 24ನೇ ಶೈಕ್ಷಣಿಕ ಸಾಲಿನಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿಯೇ ಅತ್ಯುತ್ತಮ ಅಂಕಗಳನ್ನು ಗಳಿಸಿದ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರತಿವರ್ಷ ಅತ್ಯುತ್ತಮ ಫಲಿತಾಂಶ ಬರಲು ಎಲ್ಲಾ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪರಿಶ್ರಮ ಪಡಬೇಕೆಂದು ಕರೆ ನೀಡಿದರು.

ಜಾಜೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾಬಾಯಿ ಚಂದ್ರಶೇಖರ್ ಮಾತನಾಡಿ, ಸರ್ಕಾರಿ ಕಾಲೇಜುಗಳು ಉನ್ನತ ಮಟ್ಟಕ್ಕೆ ಬೆಳೆದಾಗ ಬಡವರ ಮಕ್ಕಳೂ ಸಹ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು. ಕ್ರೀಡಾ ವಿಭಾಗದಲ್ಲಿ ಕ್ರಿಯಾಶೀಲವಾಗಿರುವ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಶುಭಕೋರಿದರು. ದೈಹಿಕ ಶಿಕ್ಷಣ ನಿರ್ದೇಶಕ ಹರೀಶ್ ಬಹುಮಾನ ವಿತರಣೆ ನಡೆಸಿಕೊಟ್ಟರು.

ಪ್ರಾಧ್ಯಾಪಕ ಡಾ. ಎಸ್. ನಾರಾಯಣ ಎಲ್ಲರನ್ನೂ ಸ್ವಾಗತಿಸಿದರು. ಡಾ. ರಾಜೇಶ್ ಖನ್ನಾ ಎಲ್ಲರನ್ನೂ ವಂದಿಸಿದರು. ವಿದ್ಯಾರ್ಥಿಗಳಾದ ಕಲಾವತಿ, ಭಾವನ ನಿರೂಪಣೆ ಮಾಡಿದರು. ಡಾ. ಭಾಸ್ಕರ್ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಉತ್ತಮವಾಗಿ ಮೂಡಿಬಂತು. ಡಾ. ಸುನಿಲ್ ಕುಮಾರ್, ಡಾ. ಹರೀಶ್ ಕುಮಾರ್ ಡಾ. ಶಿವಕುಮಾರ್, ರಾಘವೇಂದ್ರ, ಹರೀಶ್, ಗಂಗಾ, ಮಮತಾ, ರವೀಶ್ ವಿಶ್ವನಾಥ್ ಸೇರಿದಂತೆ ಎಲ್ಲಾ ಸಿಬ್ಬದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.