ಕನ್ನಡಪ್ರಭವಾರ್ತೆ ಸೋಮವಾರಪೇಟೆ
ತಾಲೂಕಿನ ಶಾಂತಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ಗ್ರಾಮಸ್ಥರಿಂದ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡಿದರು.
ಮಕ್ಕಳು, ಶಿಕ್ಷಕರು ಹಾಗೂ ಪೋಷಕರ ನಡೆನುಡಿಯನ್ನು ಅನುಕರಿಸುತ್ತಾರೆ.ಈ ನಿಟ್ಟಿನಲ್ಲಿ ಹಿರಿಯರಾದ ನಾವುಗಳು ಉತ್ತಮ ನಡೆ ನುಡಿ ಮಾರ್ಗದರ್ಶನವನ್ನು ನೀಡಬೇಕು ಎಂದರು.ಕೃಷ್ಣೇಗೌಡ ಅವರು ಸುಮಾರು 2 ಗಂಟೆಗಳ ಕಾಲ ಹಾಸ್ಯ ಕಾರ್ಯಕ್ರಮವನ್ನು ನೀಡಿ ನೆರೆದಿದ್ದದವರನ್ನು ನಗೆಗಡಲಿನಲ್ಲಿ ತೇಲಿಸಿದರು. ಅಲ್ಲದೇ ಪ್ರಗತಿ ಬಡಿಗೇರ್ ಅವರಿಂದ ಸಂಗೀತ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬಂತು.
ಈ ಸಂದರ್ಭ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಮೇದಪ್ಪ,ಮುಖ್ಯ ಶಿಕ್ಷಕ ಪರಮೇಶ್ವರಪ್ಪ, ಸರಿಗಮಪ ಖ್ಯಾತಿಯ ಗಾಯಕಿ ಪ್ರಗತಿ ಬಡಿಗೇರ್, ಸಹ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಇದ್ದರು.