ವಿದ್ಯಾರ್ಥಿಗಳು ವ್ಯಸನಗಳಿಗೆ ಬಲಿಯಾಗಬೇಡಿ: ಪಿಎಸ್‌ಐ ಲೋಕೇಶ್‌ಗೌಡ

KannadaprabhaNewsNetwork |  
Published : Jun 27, 2025, 12:48 AM IST
೨೬ಬಿಹೆಚ್‌ಆರ್ ೧: ಬಾಳೆಹೊನ್ನೂರಿನ ಪೊಲೀಸ್ ಠಾಣೆಯ ವತಿಯಿಂದ ಮಾದಕ ವಸ್ತು ವ್ಯಸನ ವಿರೋಧಿ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ನಡೆಸಲಾಯಿತು. | Kannada Prabha

ಸಾರಾಂಶ

ಬಾಳೆಹೊನ್ನೂರು, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಯಾವುದೇ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಅಪರಾಧ ವಿಭಾಗದ ಪಿಎಸ್‌ಐ ಲೋಕೇಶ್‌ಗೌಡ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಿಂದ ನಡೆದ ಮಾದಕ ವ್ಯಸನ ವಿರೋಧಿ ದಿನಾಚರಣೆ

ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು

ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಯಾವುದೇ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಅಪರಾಧ ವಿಭಾಗದ ಪಿಎಸ್‌ಐ ಲೋಕೇಶ್‌ಗೌಡ ಹೇಳಿದರು.ಪಟ್ಟಣದ ಪೊಲೀಸ್ ಠಾಣೆಯಿಂದ ಗುರುವಾರ ಆಯೋಜಿಸಿದ್ದ ಮಾದಕ ವಸ್ತು ವ್ಯಸನ ವಿರೋಧಿ ದಿನಾಚರಣೆ ಯಲ್ಲಿ ಅವರು ಮಾತನಾಡಿದರು. ಶಿಸ್ತುಬದ್ಧ ಜೀವನ ವಿದ್ಯಾರ್ಥಿ ಜೀವನದಲ್ಲಿ ಅತಿ ಅಗತ್ಯವಾಗಿದ್ದು ಅದನ್ನು ರೂಡಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಜೊತೆಗೆ ಪೋಷಕರು ಮಾಡುವ ವ್ಯಸನಗಳನ್ನು ನೋಡಿ ನಾವು ಕೂಡ ಅದಕ್ಕೆ ಬಲಿಯಾಗದೆ ಅವರನ್ನು ತಿದ್ದುವಂತಹ ಪ್ರಯತ್ನವನ್ನು ವಿದ್ಯಾರ್ಥಿಗಳು ಮಾಡಬೇಕು ಆಗ ಭವಿಷ್ಯ ಚೆನ್ನಾಗಿರುತ್ತದೆ ಎಂದರು.

ಎಸ್‌ಜೆಆರ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಕೆ.ಆರ್. ಭೂದೇಶ ಮಾತನಾಡಿ, ಅಲ್ಪ ತೃಪ್ತಿಗಾಗಿ ಮಾದಕ ವಸ್ತುಗಳಿಗೆ ವ್ಯಸನರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು. ದುಶ್ಚಟಗಳಿಗೆ ಬಲಿಯಾಗದೆ ಸಧೃಡ ದೇಶಕ್ಕಾಗಿ ಶ್ರಮಿಸಬೇಕು ಎಂದರು.

ಮಾದಕ ವಸ್ತು ವ್ಯಸನ ವಿರೋಧಿ ದಿನದ ಅಂಗವಾಗಿ ಸ್ಥಳೀಯ ಎಸ್‌ಜೆಆರ್ ಪದವಿ ಪೂರ್ವ ಕಾಲೇಜು, ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಹಾಗೂ ಎಸ್‌ಜೆಆರ್ ಐಟಿಐ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಪಟ್ಟಣದ ಮುಖ್ಯರಸ್ತೆಯಲ್ಲಿ ಜಾಗೃತಿ ಜಾಥಾವನ್ನು ನಡೆಸಲಾಯಿತು.

ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಕ ಭಗವಾನ್, ಜೇಸಿಐ ಅಧ್ಯಕ್ಷ ಇಬ್ರಾಹಿಂ ಶಾಫಿ ಮತ್ತಿತರರು ಹಾಜರಿದ್ದರು.೨೬ಬಿಹೆಚ್‌ಆರ್ ೧: ಬಾಳೆಹೊನ್ನೂರಿನ ಪೊಲೀಸ್ ಠಾಣೆಯಿಂದ ಮಾದಕ ವಸ್ತು ವ್ಯಸನ ವಿರೋಧಿ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಕೃತಿಗೆ ಕೃತಜ್ಞತೆ ಸಲ್ಲಿಸುವ ಹಬ್ಬವೇ ಸುಗ್ಗಿ ಸಂಕ್ರಾಂತಿ
ಕೆರೂರು ಗ್ರಾಮಸ್ಥರಿಂದ ರಸ್ತೆ ಅತಿಕ್ರಮಣ ತೆರವಿಗೆ ಗಡುವ ನಿಗದಿ